ಬಿಜೆಪಿ, ಕಾಂಗ್ರೆಸ್  
ರಾಜಕೀಯ

ಹೊಸಕೋಟೆ ದೇವಾಲಯ ಸಮಿತಿಯಲ್ಲಿ ಮುಸ್ಲಿಂ ವ್ಯಕ್ತಿಗೆ ಅವಕಾಶ: ಬಿಜೆಪಿ-ಕಾಂಗ್ರೆಸ್ ನಡುವೆ ವಾಕ್ಸಮರ

ಹೊಸಕೋಟೆಯ ಅವಿಮುಕ್ತೇಶ್ವರ ಸ್ವಾಮಿ ದೇವಾಲಯದ ಬ್ರಹ್ಮೋತ್ಸವ ಸಮಿತಿಯಲ್ಲಿ ಮುಸ್ಲಿಂ ವ್ಯಕ್ತಿಗೆ ಅವಕಾಶ ನೀಡಿರುವುದಕ್ಕೆ ಪ್ರತಿಪಕ್ಷ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಬಿಜೆಪಿ ವಾಗ್ದಾಳಿಗೆ ಕಾಂಗ್ರೆಸ್ ಕೂಡ ತಿರುಗೇಟು ನೀಡಿದೆ.

ಬೆಂಗಳೂರು: ಹೊಸಕೋಟೆಯ ಅವಿಮುಕ್ತೇಶ್ವರ ಸ್ವಾಮಿ ದೇವಾಲಯದ ಬ್ರಹ್ಮೋತ್ಸವ ಸಮಿತಿಯಲ್ಲಿ ಮುಸ್ಲಿಂ ವ್ಯಕ್ತಿಗೆ ಅವಕಾಶ ನೀಡಿರುವುದಕ್ಕೆ ಪ್ರತಿಪಕ್ಷ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಬಿಜೆಪಿ ವಾಗ್ದಾಳಿಗೆ ಕಾಂಗ್ರೆಸ್ ಕೂಡ ತಿರುಗೇಟು ನೀಡಿದೆ.

ದೇವಸ್ಥಾನ ಸಮಿತಿಯಲ್ಲಿ ಮುಸ್ಲಿಂ ವ್ಯಕ್ತಿಗೆ ಅವಕಾಶ ನೀಡಿರುಲವ ವಿಚಾರ ಸಂಬಂಧ ವಾಗ್ದಾಳಿ ನಡೆಸಿದ್ದ ಬಿಜೆಪಿ, ಹೊಸಕೋಟೆಯ ಅವಿಮುಕ್ತೇಶ್ವರ ದೇವಸ್ಥಾನದ ಬ್ರಹ್ಮರಥೋತ್ಸವ ಸಮಿತಿಯ ಸದಸ್ಯರಲ್ಲಿ ಮುಸ್ಲಿಂ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಸೇರ್ಪಡೆ ಮಾಡಲಾಗಿದೆ. ಇದು ಮುಸ್ಲಿಮರ ತುಷ್ಟೀಕರಣ ಮಾಡಲಾಗುತ್ತಿದೆ ಎಂದು ಟ್ವೀಟ್ ಮಾಡಿತ್ತು. ಆದರೆ, ಇದು ತಮ್ಮದೇ ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ಮಾಡಲಾಗಿರುವ ಆದೇಶ ಎಂದು ತಿಳದ ಕೂಡಲೇ ಟ್ವೀಟ್ ಡಿಲೀಟ್ ಮಾಡಿತ್ತು.

ಈ ನಡವೆ ಟ್ವೀಟ್ ಸೇವ್ ಮಾಡಿಟ್ಟುಕೊಂಡಿದ್ದ ಕಾಂಗ್ರೆಸ್ ಸಾಮಾಜಿಕ ಜಾಲತಾಣದಿಂದ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದೆ.

ಬಿಜೆಪಿ ಟೀಕೆಗೆ ಪ್ರತಿಕ್ರಿಯೆ ನೀಡಿರುವ ಸಿಎಂ, ಬಿಜೆಪಿ ನಾಯಕರೇ, ನಮ್ಮ ಕೈಗೆ ಬಡಿಗೆ ಕೊಟ್ಟು ಮತ್ತೆ ಮತ್ತೆ ಯಾಕೆ ಬಡಿಸಿಕೊಳ್ತೀರಿ? ನಿಮ್ಮ ಸುಳ್ಳುಗಳನ್ನು ಬಯಲು ಮಾಡಲು ಅವಕಾಶ ಕೊಟ್ಟು ಸಮಾಜದ ಎದುರು ಯಾಕೆ ಬೆತ್ತಲಾಗುತ್ತೀರಿ? ಕಾಂಗ್ರೆಸ್ ಸರ್ಕಾರ ಹೊಸಕೋಟೆಯ ಅವಿಮುಕ್ತೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮೋತ್ಸವ ಸಮಿತಿಗೆ ಮುಸ್ಲಿಂ ಸಮುದಾಯದ ನವಾಜ್ ಅವರನ್ನು ಸದಸ್ಯರನ್ನಾಗಿ ಮಾಡಿದೆ ಎಂದು ಎದೆಬಡಿದುಕೊಳ್ತೀರಲ್ಲಾ? ನಿಮ್ಮದೇ ಪಕ್ಷದ ಸರ್ಕಾರ 2020 ಮತ್ತು 2022ರ ಸಾಲಿನಲ್ಲಿ ಇದೇ ಬ್ರಹ್ಮೋತ್ಸವ ಸಮಿತಿಗೆ ಮುಸ್ಲಿಮ್ ಸಮುದಾಯ ವ್ಯಕ್ತಿಗಳನ್ನು ಸದಸ್ಯರನ್ನಾಗಿ ಮಾಡಿದಾಗ ನಿಮ್ಮಲ್ಲಿ ಈಗ ಉಕ್ಕಿ ಹರಿಯುತ್ತಿರುವ ಹಿಂದುತ್ವದ ಅಭಿಮಾನ ಆಗ ಎಲ್ಲಿ ಅಡಗಿ ಕೂತಿತ್ತು? ಎಂದು ಪ್ರಶ್ನಿಸಿದ್ದಾರೆ.

ಹೊಸಕೋಟೆಯ ಅವಿಮುಕ್ತೇಶ್ವರ ಸ್ವಾಮಿ ದೇವಸ್ಥಾನ ಸರ್ವಧರ್ಮಗಳನ್ನು ಸಮಭಾವದಿಂದ ಕಾಣುವ ಹಿಂದು ಧರ್ಮದ ಪರಂಪರೆಗೆ ಸಾಕ್ಷಿಯಾಗಿದೆ. ಅಲ್ಲಿನ ಪ್ರತಿಯೊಂದು ಧಾರ್ಮಿಕ ಕಾರ್ಯಕ್ರಮಗಳಲ್ಲಿಯೂ ಎಲ್ಲ ಧರ್ಮಗಳ ಜನತೆ ಭಕ್ತಿ-ಗೌರವದಿಂದ ಭಾಗವಹಿಸುತ್ತಾರೆ. 2020ರಲ್ಲಿ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ಈ ದೇವಸ್ಥಾನದ ಬ್ರಹ್ಮರಥೋತ್ಸವ ಸಮಿತಿಗೆ ಇಮ್ತಿಯಾಜ್ ಪಾಷಾ ಅವರನ್ನು ಸದಸ್ಯರನ್ನಾಗಿ ನೇಮಿಸಿತ್ತು. 2022ರಲ್ಲಿ ಬಿಜೆಪಿ ಸರ್ಕಾರ ಮತ್ತೆ ಈ ಸಮಿತಿಗೆ ಅಪ್ಸರ್ ಅವರನ್ನು ಸದಸ್ಯರನ್ನಾಗಿ ಮಾಡಿತ್ತು ಎಂದು ತಿಳಿಸಿದ್ದಾರೆ.

ಅವಿಮುಕ್ತೇಶ್ವರ ಸ್ವಾಮಿ ದೇವಸ್ಥಾನದ ಸಂಪತ್ತು ಲೂಟಿ ಮಾಡುವ ದುರುದ್ದೇಶದಿಂದಲೇ ಬಿಜೆಪಿ ಸರ್ಕಾರ ಬ್ರಹ್ಮರಥೋತ್ಸವ ಸಮಿತಿಗೆ ಮುಸ್ಲಿಮರನ್ನು ಸದಸ್ಯರನ್ನಾಗಿ ಮಾಡಿದೆ ಎಂದು ಆರೋಪಿಸುವಷ್ಟು ಕೀಳು ಮಟ್ಟಕ್ಕೆ ನಾನಿಳಿಯಲಾರೆ. ಎಲ್ಲವನ್ನೂ ಕೇಸರಿ ಕಣ್ಣುಗಳಿಂದ ನೋಡುವ ರೋಗದಿಂದ ಶೀಘ್ರ ಗುಣಮುಖರಾಗಿ ಎಂದು ನಿಮಗೂ ನಿಮ್ಮ ಸರ್ವೋಚ್ಚ ನಾಯಕರಾದ ನರೇಂದ್ರ ಮೋದಿ ಅವರಿಗೆ ಹಾರೈಸುತ್ತೇನೆ ಎಂದು ವ್ಯಂಗ್ಯವಾಡಿದ್ದಾರೆ.

ರಾಜ್ಯದ ಬಿಜೆಪಿ ನಾಯಕರೇ, ನಿಮಗೆ ಮಾನ-ಮರ್ಯಾದೆ ಎನ್ನುವುದೇನಾದರೂ ಇದ್ದರೆ, ಮೊದಲು ಜನರನ್ನು ತಪ್ಪುದಾರಿಗೆಳೆಯುವ ಈ ಹೇಳಿಕೆಯನ್ನು ವಾಪಸು ಪಡೆದು ರಾಜ್ಯದ ಜಾತ್ಯತೀತ ಕನ್ನಡಿಗರ ಕ್ಷಮೆ ಕೇಳಬೇಕೆಂದು ಇದೇ ವೇಳೆ ಒತ್ತಾಯಿಸಿದ್ದಾರೆ.

ರಾಮಲಿಂಗಾರೆಡ್ಡಿಯವರು ಮಾತನಾಡಿ, ಬಿಜೆಪಿಯವರು ರಣಹದ್ದುಗಳಿದ್ದಂತೆ ಯಾವಾಗಲೂ ಏನಾದರೂ ಲಾಭ ಪಡೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿದ್ದಾರೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT