ಸಿಎಂ ಸಿದ್ದರಾಮಯ್ಯ  
ರಾಜಕೀಯ

ಯಾರನ್ನೂ ರಾಜಕೀಯವಾಗಿ ಸಮಾಧಿ ಮಾಡಲು ಸಾಧ್ಯವಿಲ್ಲ; ಮೇಲಕ್ಕೇರಿದವರು ಕೆಳಗೆ ಇಳಿಯಲೇಬೇಕು: ಸಿಎಂ

ವಿಪಕ್ಷಗಳು ನನ್ನನ್ನು ಸಮಾಧಿ ಮಾಡಲು ಮುಂದಾಗಿವೆ ಎಂಬ ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಯಾರನ್ನೂ ರಾಜಕೀಯವಾಗಿ ಸಮಾಧಿ ಮಾಡಲು ಸಾಧ್ಯವಿಲ್ಲ. ಸೋಲುವ ಭಯದಿಂದ ಮೋದಿ ಮಾತನಾಡುತ್ತಿದ್ದಾರೆ ಎಂದರು.

ಮೈಸೂರು: ವಿಪಕ್ಷಗಳು ನನ್ನನ್ನು ಸಮಾಧಿ ಮಾಡಲು ಮುಂದಾಗಿವೆ ಎಂಬ ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಯಾರನ್ನೂ ರಾಜಕೀಯವಾಗಿ ಸಮಾಧಿ ಮಾಡಲು ಸಾಧ್ಯವಿಲ್ಲ. ಸೋಲುವ ಭಯದಿಂದ ಮೋದಿ ಮಾತನಾಡುತ್ತಿದ್ದಾರೆ ಎಂದರು.

ಮೈಸೂರಿನಲ್ಲಿ ಮಾತನಾಡಿದ ಅವರು, ಮೋದಿ 10 ವರ್ಷ ಬಡವರ ಪರ ಕೆಲಸ ಮಾಡಿಲ್ಲ. ಕೊಟ್ಟ ಭರವಸೆಗಳನ್ನು ಈಡೇರಿಸಿಲ್ಲ ಎಂದು‌ ಆರೋಪಿಸಿದರು. ದೇಶದ ಪ್ರಧಾನ ಮಂತ್ರಿಯನ್ನು ಸೋಲಿಸಬೇಕು ಎಂಬುದು ವಿರೋಧ ಪಕ್ಷಗಳ ಬಯಕೆಯಾಗಿದೆ. ಸೋಲುವ ಭಯದಿಂದಾಗಿ ಪ್ರಧಾನಿಹತಾಶೆಯಿಂದ ಮಾತನಾಡುತ್ತಿದ್ದಾರೆ' ಎಂದು ಹೇಳಿದರು

'ಈ ಪ್ರಧಾನಿ ಸುಳ್ಳಿನ ಸರದಾರ ಎಂಬುದು ಎಲ್ಲರಿಗೂ ಗೊತ್ತಿದೆ. ಅವರ ಬಣ್ಣ ದೇಶದ ಜನರ ಮುಂದೆ ಬಯಲಾಗಿದೆ. ಈ ಹತಾಶೆಯಲ್ಲಿ ಈ ರೀತಿ ಮಾತನಾಡುತ್ತಿದ್ದಾರೆ. ಅವರ ಭಾವನಾತ್ಮಕ ಮಾತುಗಳು ಜನರಿಗೆ ಗೊತ್ತಿವೆ. ಮೇಲಕ್ಕೆ ಏರಿದವರು ಕೆಳಗೆ ಇಳಿಯಲೇ ಬೇಕು' ಎಂದರು.

'ರೈತರ ಸಾಲ ಮನ್ನಾ ಮಾಡಬೇಕು' ಎಂಬ ಬಿ.ಎಸ್. ಯಡಿಯೂರಪ್ಪ ಒತ್ತಾಯಕ್ಕೆ ಪ್ರತಿಕ್ರಿಯಿಸಿದ ಅವರು, 'ಸಾಲ ಮನ್ನಾ ಮಾಡಿ ಎಂದು ಹಿಂದೆ ಕೇಳಿದಾಗ ಯಡಿಯೂರಪ್ಪ ಏನು ಹೇಳಿದ್ದರು ಗೊತ್ತಾ? ನಮ್ಮ ಬಳಿ ನೋಟ್ ಪ್ರಿಂಟಿಂಗ್ ಮಷಿನ್ ಇದೆಯಾ ಎಂದು ಕೇಳಿರಲಿಲ್ಲವಾ? ಈಗ ಸಾಲ ಮನ್ನಾ ಮಾಡಿ ಎಂದು ಕೇಳುವ ನೈತಿಕತೆ ಇವರಿಗೆ ಇದೆಯಾ?' ಎಂದು ತಿರುಗೇಟು ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

"ಜಗತ್ತಿಗೆ ಅಗತ್ಯವಿರುವ ಪರಿಹಾರಗಳು ನಿಮ್ಮಲ್ಲಿವೆ": ಚೆನ್ನೈನಲ್ಲಿ 'Gen Z ಯನ್ನುದ್ದೇಶಿಸಿ ಪ್ರಧಾನಿ ಮೋದಿ ಮಾತು

ವಿಶ್ವದಾದ್ಯಂತ ಏಕಕಾಲಕ್ಕೆ 'ರಾಮಾಯಣ ಭಾಗ 1' ಬಿಡುಗಡೆ: ದಸರಾ ಹಬ್ಬದಿಂದಲೇ ಮುಂಗಡ ಬುಕಿಂಗ್‌ ಆರಂಭ!

ಇದು 'ತುರ್ತು ಪರಿಸ್ಥಿತಿಯಂತಹ ಸ್ಥಿತಿ'; ಹೋರಾಟ ಈಗಷ್ಟೇ ಆರಂಭ; ದೇಶಾದ್ಯಂತ CJP ಪ್ರತಿಭಟನೆ ನಡೆಯಲಿದೆ: ಸೌರವ್ ದಾಸ್

'ಸುಳ್ಳಿನ ದಾಳಿಯಿಂದ ನನ್ನ ಕುಗ್ಗಿಸಲು ಸಾಧ್ಯವಿಲ್ಲ': ವಾಟ್ಸಪ್ ಸ್ಟೇಟಸ್ ಮೂಲಕ HDKಗೆ ಹಾಸನ ಡಿಸಿ ಲತಾಕುಮಾರಿ ಟಾಂಗ್

3ನೇ ಟಿ20 ಪಂದ್ಯ: ವಿಂಡೀಸ್ ವಿರುದ್ಧ ಅಭಿಷೇಕ್ ಶರ್ಮಾ ಭರ್ಜರಿ ಬ್ಯಾಟಿಂಗ್, SKY ದಾಖಲೆ ಉಡೀಸ್!