ಆರ್ ಅಶೋಕ್  
ರಾಜಕೀಯ

ಕಾಂಗ್ರೆಸ್ ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ, ಲೋಕಸಭೆ ಚುನಾವಣೆ ನಂತರ ಕರ್ನಾಟಕದಲ್ಲಿ ಸರ್ಕಾರ ಪತನ: ಆರ್ ಅಶೋಕ್

ಬೆಂಗಳೂರು: ಜೂನ್ 4 ರಂದು ಲೋಕಸಭೆ ಚುನಾವಣೆಯ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಭವಿಷ್ಯ ನುಡಿದಿದ್ದಾರೆ.

ಬೆಂಗಳೂರಿನಲ್ಲಿ ನಿನ್ನೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರದ ಕಾರ್ಯವೈಖರಿಯಿಂದ ಬೇಸತ್ತಿರುವ ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ ಎಂದರು.

ಕಾಂಗ್ರೆಸ್ ಸರ್ಕಾರ ಕುಸಿಯಲು ಸಜ್ಜಾಗಿದೆ. ಸರ್ಕಾರಗಳನ್ನು ಬೀಳಿಸುವುದು ಅಸಾಧ್ಯ ಎಂದು ಹಲವರು ಹೇಳಿಕೊಂಡಿದ್ದರು. ಆದರೆ ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶ ಮತ್ತು ಈ ಹಿಂದೆ ಕರ್ನಾಟಕದಲ್ಲಿ ಏನಾಯಿತು? ಅದು ಸಾಧ್ಯ ಎಂಬುದನ್ನು ನಾವು ಸಾಬೀತುಪಡಿಸಿದ್ದೇವೆ ಎಂದರು.

ಕಾಂಗ್ರೆಸ್ ಶಾಸಕರು ಬಿಜೆಪಿ ಜತೆ ಸಂಪರ್ಕದಲ್ಲಿದ್ದಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅಶೋಕ್, ಬಿಜೆಪಿ ಜತೆ ಸಂಪರ್ಕದಲ್ಲಿರುವ ಕಾರಣ ಕಾಂಗ್ರೆಸ್ ಸರ್ಕಾರದ ಪತನದ ಮುನ್ಸೂಚನೆ ನೀಡುತ್ತಿದ್ದೇವೆ. ಅವರಲ್ಲಿ ಕೆಲವರು ನಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ ರಾಜ್ಯ ಸರ್ಕಾರದ ಪತನಕ್ಕೆ ಕ್ಷಣಗಣನೆ ಆರಂಭವಾಗಿದೆ ಎಂದರು.

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಲು ಸಾಧ್ಯವಾಗದಿದ್ದರೆ ಸರ್ಕಾರ ಪತನವಾಗಲಿದೆ ಎಂದು ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮಂಡ್ಯದಲ್ಲಿ ಹೇಳಿದ್ದಾರೆ ಎಂದು ಆರೋಪಿಸಿದರು.

ಬಿಜೆಪಿ ಶಾಸಕರಿಗೆ 30 ರಿಂದ 50 ಕೋಟಿ ರೂಪಾಯಿ ನೀಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಅವರ ಪುತ್ರ ಆರೋಪಿಸಿದ್ದರು. ಅವರು ಸರ್ಕಾರ ಪತನದ ಭವಿಷ್ಯವನ್ನು ಮಾತ್ರ ಹೇಳುತ್ತಿದ್ದಾರೆ. ಅಭಿವೃದ್ಧಿಗೆ ಒಂದು ಪೈಸೆಯೂ ಬಿಡುಗಡೆಯಾಗದ ಕಾರಣ ಹಲವಾರು ಕಾಂಗ್ರೆಸ್ ಶಾಸಕರು ಸರ್ಕಾರದ ಮೇಲೆ ಬೇಸರಗೊಂಡಿದ್ದಾರೆ ಎಂದು ಅಶೋಕ್ ಹೇಳಿದರು.

ಕಳೆದ ವರ್ಷ ಅಧಿಕಾರಕ್ಕೆ ಬಂದ ನಂತರ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳದ ಕಾಂಗ್ರೆಸ್ ಸರ್ಕಾರಕ್ಕೆ ಕರ್ನಾಟಕದ ಜನತೆ ಶಾಪ ಹಾಕುತ್ತಿದ್ದಾರೆ ಎಂದರು.

ಹಾಲು ಉತ್ಪಾದಕರಿಗೆ ಬಾಕಿ ಹಣ ನೀಡುತ್ತಿಲ್ಲ. 108 ಆಂಬ್ಯುಲೆನ್ಸ್ ಚಾಲಕರ ವೇತನವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿಲ್ಲ. ಕಳಪೆ ಗುಣಮಟ್ಟದ ಆಹಾರದಿಂದಾಗಿ ಸುಮಾರು 2 ಲಕ್ಷ ಮಕ್ಕಳು ಅಂಗನವಾಡಿಗಳಿಗೆ ಸೇರಿಲ್ಲ. ರಾಜ್ಯ ಸರ್ಕಾರ ಬರ ಪರಿಹಾರಕ್ಕೆ ಒಂದು ನಯಾ ಪೈಸೆಯನ್ನೂ ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿದರು.

ಎಸ್‌ಸಿ/ಎಸ್‌ಟಿಗಳು, ಒಬಿಸಿಗಳು ಮತ್ತು ವೀರಶೈವ ಲಿಂಗಾಯತರ ಕಲ್ಯಾಣಕ್ಕಾಗಿ ಮೀಸಲಾದ ಅನುದಾನಗಳು ಸೇರಿದಂತೆ ಮಂಡಳಿಗಳು ಮತ್ತು ನಿಗಮಗಳ ಅನುದಾನವನ್ನು ಹಿಂಪಡೆಯಲಾಗಿದೆ. ಈ ಸರ್ಕಾರ ಬಡವರ ಸೇವೆ ಮಾಡುತ್ತಿದ್ದೆಯೇ ಎಂದು ಪ್ರಶ್ನಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT