ಮರಿತಿಬ್ಬೇಗೌಡ  
ರಾಜಕೀಯ

ಪರಿಷತ್ ಚುನಾವಣೆ: ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮರಿತಿಬ್ಬೇಗೌಡ ಕಣಕ್ಕೆ!

ಮೈಸೂರು, ಹಾಸನ, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳನ್ನೊಳಗೊಂಡ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ (ಎಸ್‌ಟಿಸಿ) ಕರ್ನಾಟಕ ವಿಧಾನ ಪರಿಷತ್ತಿಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಮರಿತಿಬ್ಬೇಗೌಡ ಅವರ ಹೆಸರನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅನುಮೋದಿಸಿದ್ದಾರೆ.

ಮೈಸೂರು: ಮೈಸೂರು, ಹಾಸನ, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳನ್ನೊಳಗೊಂಡ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ (ಎಸ್‌ಟಿಸಿ) ಕರ್ನಾಟಕ ವಿಧಾನ ಪರಿಷತ್ತಿಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಮರಿತಿಬ್ಬೇಗೌಡ ಅವರ ಹೆಸರನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅನುಮೋದಿಸಿದ್ದಾರೆ.

ಇದೇ ವೇಳೆ ಮಂಗಳವಾರ ಬೆಳಗ್ಗೆ 10 ಗಂಟೆಗೆ ನಾಮಪತ್ರ ಸಲ್ಲಿಸುವುದಾಗಿ ಮರಿತಿಬ್ಬೇಗೌಡ ಘೋಷಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್, ಮರಿತಿಬ್ಬೇಗೌಡರ ಹೆಸರನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅನುಮೋದಿಸಿದ್ದಾರೆ ಎಂದು ತಿಳಿಸಿದ್ದಾರೆ.

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಅಂಚೆದೊಡ್ಡಿಯಿಂದ ಬಂದಿರುವ ಮರಿತಿಬ್ಬೇಗೌಡ ಅವರು ಎರಡು ಬಾರಿ ಮೈಸೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರಾಗಿದ್ದರು. 2000ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ, 2006 ರಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ, 2012 ಮತ್ತು 2018 ರಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಒಟ್ಟು ನಾಲ್ಕು ಬಾರಿ ಎಂಎಲ್‌ಸಿಯಾಗಿ ಆಯ್ಕೆಯಾಗಿದ್ದರು.

ಕರ್ನಾಟಕ ವಿಧಾನ ಪರಿಷತ್ತಿನ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ಜೆಡಿಎಸ್‌ನಲ್ಲಿದ್ದ ಮರಿತಿಬ್ಬೇಗೌಡ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ ನೀಡಿ ಮಾರ್ಚ್‌ 21ರಂದು ಕಾಂಗ್ರೆಸ್‌ ಸೇರ್ಪಡೆಗೊಂಡಿದ್ದರು.

'ನಾಲ್ಕು ಅವಧಿಗೆ ಎಂಎಲ್‌ಸಿ ಆಗಿರುವ ನಾನು ಶಿಕ್ಷಕರ ಸಮಸ್ಯೆಗಳನ್ನು ಅರ್ಥಮಾಡಿಕೊಂಡಿದ್ದೇನೆ. ಈಗ ಆಡಳಿತ ಪಕ್ಷದಲ್ಲಿರುವುದರಿಂದ ಶಿಕ್ಷಣ ಕ್ಷೇತ್ರದಲ್ಲಿ ಅಗತ್ಯ ಸುಧಾರಣೆ ತರಲು ಸಾಧ್ಯವಾಗಲಿದೆ' ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT