ಸಿಎಂ ಸಿದ್ದರಾಮಯ್ಯ 
ರಾಜಕೀಯ

ಪರಿಷತ್ ಚುನಾವಣೆ ಮೇಲೆ ಜೆಡಿಎಸ್-ಬಿಜೆಪಿ ಮೈತ್ರಿ ಯಾವುದೇ ಪರಿಣಾಮ ಬೀರದು: ಸಿಎಂ ಸಿದ್ದರಾಮಯ್ಯ

ಜೆಡಿಎಸ್– ಬಿಜೆಪಿ ಮೈತ್ರಿಯಿಂದ ಕಾಂಗ್ರೆಸ್‌ಗೆ ಯಾವ ತೊಂದರೆಯೂ ಆಗುವುದಿಲ್ಲ, ಪರಿಷತ್ ಚುನಾವಣೆ ಮೇಲೆ ಮೈತ್ರಿ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರು: ಜೆಡಿಎಸ್– ಬಿಜೆಪಿ ಮೈತ್ರಿಯಿಂದ ಕಾಂಗ್ರೆಸ್‌ಗೆ ಯಾವ ತೊಂದರೆಯೂ ಆಗುವುದಿಲ್ಲ, ಪರಿಷತ್ ಚುನಾವಣೆ ಮೇಲೆ ಮೈತ್ರಿ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರು ವಿಮಾನ ನಿಲ್ದಾಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ವಿಧಾನಪರಿಷತ್‌ ಚುನಾವಣೆಯಲ್ಲೂ ಕಾಂಗ್ರೆಸ್‌ ಪರವಾದ ವಾತಾವರಣವಿದೆ. ಈ ಬಾರಿ ಚುನಾವಣೆಯನ್ನು ನಾವು ಗಂಭೀರವಾಗಿ ತೆಗೆದುಕೊಂಡಿದ್ದೇವೆ. ಹೀಗಾಗಿಯೇ 6 ತಿಂಗಳ ಮುಂಚೆಯೇ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದೆವು. ಮತದಾರರನ್ನು ಭೇಟಿಯಾಗಲು ಅವರಿಗೆ ಸಾಕಷ್ಟು ಸಮಯ ಸಿಕ್ಕಿದೆ ಎಂದರು.

ಪೆನ್‌ಡ್ರೈವ್‌ ಪ್ರಕರಣಕ್ಕೂ ಈ ಚುನಾವಣೆಗೂ ಸಂಬಂಧವಿಲ್ಲ. ಪದವೀಧರರು ಹಾಗೂ ಶಿಕ್ಷಕರ ಕ್ಷೇತ್ರದ ಮತದಾರರು ಪ್ರಬುದ್ಧರು. ಯಾರು ಸರಿ, ಯಾರು ಸರಿ ಇಲ್ಲ ಎನ್ನುವುದನ್ನು ನಿರ್ಧರಿಸುತ್ತಾರೆ. 10 ವರ್ಷಗಳಿಂದ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರದ ವೈಫಲ್ಯಗಳೇನು, ನಮ್ಮ ಸರ್ಕಾರದ ಸಾಧನೆ ಏನು ಎಂಬುದನ್ನು ತುಲನೆ ಮಾಡುವ ಶಕ್ತಿ ಅವರಿಗಿದೆ ಎಂದು ಹೇಳಿದರು. ಸರ್ಕಾರದ ಭ್ರಷ್ಟಾಚಾರದ ಬಗ್ಗೆ ನನ್ನ ಬಳಿ ಪೆನ್‌ಡ್ರೈವ್ ಇದೆ ಎಂಬ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಕುಮಾರಸ್ವಾಮಿಯದ್ದು ಯಾವಾಗಲೂ ಹಿಟ್ ಅಂಡ್ ರನ್ ಕೇಸ್. ಅವರ ಬಗ್ಗೆ ಮಾತನಾಡುವುದಿಲ್ಲ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ಸಾವಿನ ಸಂಖ್ಯೆ 359ಕ್ಕೆ ಏರಿಕೆ; 288 ಭಾರತೀಯರು ಸೇರಿ 826 ಮಂದಿ ನಾಪತ್ತೆ; ಮತ್ತೆ ಪ್ರವಾಹ ಭೀತಿ! ಹೊಸ ಸರೋವರ ಪತ್ತೆ!

Nepal floods: ನೇಪಾಳ ಪ್ರವಾಹದ ಭೀಕರತೆ, 150 ಕಿ.ಮೀ ದೂರದ ಉತ್ತರ ಪ್ರದೇಶಕ್ಕೆ ಕೊಚ್ಚಿಕೊಂಡು ಬಂದ ಶವಗಳು!

Nepal Floods: ‘ಸಾವಿನ ಸಂಖ್ಯೆ ಊಹೆಗೂ ನಿಲುಕದಷ್ಟು ಏರಬಹುದು’; ಚೀನಾ ನಡೆ ಕುರಿತು ನೇಪಾಳ ಮಾಜಿ ಸಚಿವರ ಅನುಮಾನ!

RSS ಪಥಸಂಚಲನದಲ್ಲಿ ಭಾಗಿ: ಯಾದಗಿರಿಯ ಇಬ್ಬರು ಸರ್ಕಾರಿ ಶಿಕ್ಷಕರ ಅಮಾನತು

ಮಣಿಪುರದಲ್ಲಿ ಉಗ್ರರ ಅಟ್ಟಹಾಸ: ನಾಲ್ವರ ಸಾವು, ಒಬ್ಬ ನಾಪತ್ತೆ