ಲಖನೌ: ಜನ ಸಾಮಾನ್ಯರ ಹೊಟ್ಟೆ ತುಂಬಿಸಲು ಪ್ರಧಾನಿ ನರೇಂದ್ರ ಮೋದಿ ಏನಾದರೂ ಹೊಸ ತಿದ್ದುಪಡಿ ತಂದಿದ್ದಾರೆಯೇ ಎಂದು ಕರ್ನಾಟಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದಲ್ಲಿ ಲಕ್ನೋದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಕೆ ಶಿವಕುಮಾರ್, ದೇಶದ 'ಹಣದುಬ್ಬರ ಮತ್ತು ನಿರುದ್ಯೋಗ'ದ ಬಗ್ಗೆ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಬಿಜೆಪಿ 2014ರಲ್ಲಿ ಅಧಿಕಾರಕ್ಕೆ ಬರುವ ಮುನ್ನಾ ನೀಡಿದ್ದ ಭರವಸೆಯಂತೆ ವಾಪಾಸ್ ತರಬೇಕಾಗಿದ್ದ ಕಪ್ಪು ಹಣ್ಣ ಎಲ್ಲಿದೆ? ರೈತರ ಆದಾಯವನ್ನು ಏಕೆ ದ್ವಿಗುಣಗೊಳಿಸಲಿಲ್ಲ. ಯುವ ಜನತೆಗೆ ವರ್ಷಕ್ಕೆ 2 ಕೋಟಿ ಉದ್ಯೋಗಗಳು ಎಲ್ಲಿವೆ ಎಂದು ಪ್ರಶ್ನಿಸಿದ ಡಿಕೆ ಶಿವಕುಮಾರ್, ಬಿಜೆಪಿ ಈ ಬಗ್ಗೆ ಮೊದಲು ಭಾರತದ ಜನತೆಗೆ ಉತ್ತರಿಸಬೇಕಾಗಿದೆ ಎಂದರು.
ಮತ್ತೊಂದೆಡೆ ಕಾಂಗ್ರೆಸ್ ಪಕ್ಷ ಕರ್ನಾಟಕದಲ್ಲಿ ಮೊದಲ ದಿನವೇ 5 ಗ್ಯಾರಂಟಿಗಳನ್ನು ಪರಿಚಯಿಸಿದೆ. 5 ಗ್ಯಾರಂಟಿಗಳನ್ನು ಮೊದಲ ತಿಂಗಳಲ್ಲಿಯೇ ಕಾರ್ಯಗತಗೊಳಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ವ್ಯತ್ಯಾಸ ಸ್ಪಷ್ಟವಾಗಿದೆ. ಭರವಸೆಗಳನ್ನು ಈಡೇರಿಸುವವರನ್ನು ಜನರು ನೋಡುತ್ತಾರೆ ಮತ್ತು ಮತ ಚಲಾಯಿಸುತ್ತಾರೆ. ಅದಕ್ಕಾಗಿಯೇ ಭಾರತದಾದ್ಯಂತ ಜನರು ಕಾಂಗ್ರೆಸ್ ಪಕ್ಷವನ್ನು ಉಜ್ವಲ ಭವಿಷ್ಯದತ್ತ ಮುನ್ನಡೆಸುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.