ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ 
ರಾಜಕೀಯ

ಬರ ಪರಿಸ್ಥಿತಿ ನಿಭಾಯಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲ: ಬಿಜೆಪಿ

ಮುಂಬರುವ ವಿಧಾನ ಪರಿಷತ್ ಚುನಾವಣೆ ಪ್ರತಿಷ್ಠೆಯ ಕದನವಾಗಿದdog, ರಾಜ್ಯದಲ್ಲಿನ ಭ್ರಷ್ಟ ಕಾಂಗ್ರೆಸ್ ಸರಕಾರವನ್ನು ಸೋಲಿಸುವ ಗುರಿ ಹೊಂದಿದ್ದೇವೆಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಗುರುವಾರ ಹೇಳಿದರು.

ಮೈಸೂರು: ಮುಂಬರುವ ವಿಧಾನ ಪರಿಷತ್ ಚುನಾವಣೆ ಪ್ರತಿಷ್ಠೆಯ ಕದನವಾಗಿದdog, ರಾಜ್ಯದಲ್ಲಿನ ಭ್ರಷ್ಟ ಕಾಂಗ್ರೆಸ್ ಸರಕಾರವನ್ನು ಸೋಲಿಸುವ ಗುರಿ ಹೊಂದಿದ್ದೇವೆಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಗುರುವಾರ ಹೇಳಿದರು.

ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಮಾತನಾಡಿದ ಅವರ, ಮೇಲ್ಮನೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಬಹುಮತ ಹೊಂದಿರುವುದ್ದು ಹಾಗೂ ಎಲ್ಲಾ ವಲಯಗಳಲ್ಲೂ ಕಾಂಗ್ರೆಸ್ ಸರ್ಕಾರ ವಿಫಲವಾಗಿರುವ ಕಾರಣ ಆ ಪಕ್ಷಕ್ಕೆ ಸೋಲು ಕಾಣವಂತೆ ಮಾಡಬೇಕಿದೆ ಎಂದು ಹೇಳಿದರು.

ಮನೆಹಾಳ ಕಾಂಗ್ರೆಸ್‌ ಒಂದು ವರ್ಷವಾದರೂ ಒಳ್ಳೆಯ ಕೆಲಸ ಮಾಡಲಿಲ್ಲ.ಮೊನ್ನೆ ನೇಹಾಳ ಹತ್ಯೆ ಆಯಿತು, ಮಣ್ಣು ಇನ್ನೂ ಆರಿಲ್ಲ. ಇದೀಗ ಮತ್ತೆ ಅಂಜಲಿ ಎನ್ನುವ ಹೆಣ್ಣು ಮಗುವಿನ ಹತ್ಯೆಯಾಗಿದೆ. ಈ ರೀತಿ ಹೆಣ್ಣು ಮಕ್ಕಳು ಹತ್ಯೆ ಆಗುತ್ತಿರೋದು ಸರ್ಕಾರ ಸಂಪೂರ್ಣ ಹದಗೆಟ್ಟಿರೋದಕ್ಕೆ ಸಾಕ್ಷಿ. ರಾಜ್ಯದಲ್ಲಿ ಪೋಲಿಸ್ ಇಲಾಖೆ ಬದುಕಿದಿಯಾ? ಸರ್ಕಾರ ಬದುಕಿದೆಯಾ ಸತ್ತಿದೆಯಾ? ಎಂದು ರಾಜ್ಯ ಸರ್ಕಾರ ಹಾಗೂ ಪೊಲೀಸ್ ಇಲಾಖೆಯ ವಿರುದ್ಧ ವ್ಯಕ್ತಪಡಿಸಿದರು.

ಸಿದ್ದರಾಮಯ್ಯ ಕಾಲುಗುಣ ಅಂತಹದ್ದು, ಅಧಿಕಾರಕ್ಕೆ ಬರುತ್ತಿದ್ದಂತೆ ರಾಜ್ಯದಲ್ಲಿ ಬರಗಾಲದ ಬಂದಿದೆ. ಸರ್ಕಾರ ಬರಗಾಲ ಸರಿಯಾಗಿ ನಿಭಾಯಿಸುತ್ತಿಲ್ಲ. ಕೇಂದ್ರ ಸರ್ಕಾರ 3545 ಕೋಟಿ ಪರಿಹಾರ ನೀಡಿದೆ. ಕೇಂದ್ರ ಸರ್ಕಾರ ಹಣಕ್ಕೊಟ್ಟರೂ ಸಿದ್ದರಾಮಯ್ಯ ಏಕೆ ಇನ್ನೂ ಬಿಡುಗಡೆ ಮಾಡುತ್ತಿಲ್ಲ ಅಂದರೆ ಸಿದ್ದರಾಮಯ್ಯ ಸರ್ಕಾರ ಹಣವನ್ನು ಲೂಟಿ ಮಾಡುತ್ತಿದ್ದಾರೆ. ಎಂಟು ತಿಂಗಳಿಂದ ರೈತರ ಹಾಲಿಗೆ ಹಣವನ್ನು ಕೊಟ್ಟಿಲ್ಲ, ಆಂಬುಲೆನ್ಸ್ ಚಾಲಕರಿಗೆ ಹಣಕೊಟ್ಟಿಲ್ಲ, ಗೆಸ್ಟ್ ಲಚ್ಚರರ್ ಗೆ ವೇತನ ಕೊಟ್ಟಿಲ್ಲ. ಹೀಗೆ ಆದರೆ ಪಕ್ಕದ ಕೇರಳ ರಾಜ್ಯ ಆದ ರೀತಿ ಕರ್ನಾಟಕ ಪಾಪರ್ ಆಗುತ್ತೆ. ಪಾಕಿಸ್ತಾನದಲ್ಲಿ ಹಾಲಿನ ಬೆಲೆ, ಅಕ್ಕಿ ಬೆಲೆ, ಟೀ ಬೆಲೆ , ಗೋದಿ ಹಿಟ್ಟು ಬೆಲೆ ನೋಡಿದರೆ ಆ ಪರಿಸ್ಥಿತಿ ಸಿದ್ದರಾಮಯ್ಯ ಸರ್ಕಾರ ಬರಲಿದೆ ಎನಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಇದೇ ವೇಳೆ ದಕ್ಷಿಣ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸಲು ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಒಗ್ಗಟ್ಟಾಗಿ ಕೆಲಸ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮನವಿ ಮಾಡಿದರು.

ಎರಡೂ ಪಕ್ಷಗಳ ಕಾರ್ಯಕರ್ತರು ಲೋಕಸಭೆ ಚುನಾವಣೆಯಂತೆಯೇ ಪರಿಷತ್ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಎಲ್ಲ ಭಿನ್ನಾಭಿಪ್ರಾಯಗಳನ್ನು ಮೆಟ್ಟಿ ನಿಂತು ಎನ್‌ಡಿಎ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕು ಎಂದು ಹೇಳಿದರು.

ಬಳಿಕ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಚಾಮರಾಜನಗರ ಬಿಜೆಪಿ ಅಭ್ಯರ್ಥಿ ಎಸ್.ಬಾಲರಾಜ್, ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಮತ್ತಿತರರು ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ವಿವೇಕಾನಂದ ಅವರ ಗೆಲುವಿಗೆ ಶ್ರಮಿಸುವಂತೆ ಮತದಾರರಲ್ಲಿ ಮನವಿ ಮಾಡಿದರು.

ಇದೇ ವೇಳೆ ಪ್ರಧಾನಿ ಮೋದಿ ಅವರು ಮೂರನೇ ಅವಧಿಗೆ ಅಧಿಕಾರಕ್ಕೆ ಮರಳುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT