ಸಿದ್ದರಾಮಯ್ಯ 
ರಾಜಕೀಯ

ಪ್ರಜ್ವಲ್ ರೇವಣ್ಣ​ ಪೆನ್​ಡ್ರೈವ್​ ಪ್ರಕರಣ: ಅನಗತ್ಯ ಹೇಳಿಕೆ ನೀಡದಂತೆ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಸಂಸದ ಪ್ರಜ್ವಲ್​ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋಗಳಿರುವ ಪೆನ್​ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅನಗತ್ಯ ಹೇಳಿಕೆ ನೀಡದಂತೆ ಸಿಎಂ ಸಿದ್ದರಾಮಯ್ಯ ಅವರು ಸಚಿವರಿಗೆ ಸೂಚನೆ ನೀಡಿದ್ದಾರೆ.

ಬೆಂಗಳೂರು: ಹಾಸನ ಜೆಡಿಎಸ್ ಸಂಸದ ಪ್ರಜ್ವಲ್​ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋಗಳಿರುವ ಪೆನ್​ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅನಗತ್ಯ ಹೇಳಿಕೆ ನೀಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಂಪುಟದ ಸಚಿವರಿಗೆ ಮಂಗಳವಾರ ಸೂಚನೆ ನೀಡಿದ್ದಾರೆ.

ಪ್ರಜ್ವಲ್ ರೇವಣ್ಣ​ ಪೆನ್​ಡ್ರೈವ್​ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡ(SIT) ನಡೆಸುತ್ತಿದೆ. ಪ್ರಕರಣದ ಕುರಿತು ಕೆಲ ಸಚಿವರ ಹೇಳಿಕೆಗಳು ತನಿಖೆಯ ದಾರಿ ತಪ್ಪಿಸುವ ಸಾಧ್ಯತೆ ಇದೆ. ಹೇಳಿಕೆಗಳಿಂದ ಪಕ್ಷಕ್ಕೂ ಕೂಡ ಡ್ಯಾಮೆಜ್ ಆಗುವ ಸಾಧ್ಯತೆ ಇದೆ. ಹೀಗಾಗಿ ಅನಗತ್ಯ ಹೇಳಿಕೆ ನೀಡದಂತೆ ಸಿಎಂ ಸಿದ್ದರಾಮಯ್ಯ ಅವರು ಸಚಿವರಿಗೆ ಕೆಲ ಸೂಚನೆ ನೀಡಿದ್ದಾರೆ.

ಪೆನ್​ಡ್ರೈವ್ ಪ್ರಕರಣದಲ್ಲಿ ಅನಗತ್ಯವಾಗಿ ಪ್ರತಿಕ್ರಿಯೆ ಕೊಡಬೇಡಿ. ಮಾತು ಹೆಚ್ಚಾದರೆ ಇಡೀ ಪ್ರಕರಣದ ದಿಕ್ಕೇ ತಪ್ಪಿ ಹೋಗಬಹುದು. ಹೀಗಾಗಿ ಪ್ರತಿಕ್ರಿಯೆ ಕೊಡುವಾಗ ಎಚ್ಚರಿಕೆ ವಹಿಸಿ ಎಂದು ಸಿದ್ದರಾಮಯ್ಯ ಅವರು ತಮ್ಮ ಸಂಪುಟದ ಸಚಿವರಿಗೆ ಸಲಹೆ ನೀಡಿದ್ದಾರೆ.

ಮುಖ್ಯಮಂತ್ರಿಗಳ ಈ ಸಲಹೆಯನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಮತ್ತು ಸಚಿವರು ಗಂಭೀರವಾಗಿ ಪರಿಗಣಿಸಿದ್ದಾರೆ.

ಇನ್ನು ನೂರಾರು ಮಹಿಳೆಯರ ಜೊತೆಗಿನ ರಾಸಲೀಲೆ ವಿಡಿಯೋಗಳು ಬಹಿರಂಗಗೊಂಡ ನಂತರ ವಿದೇಶಕ್ಕೆ ಪರಾರಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್​​ಪೋರ್ಟ್​ ರದ್ದು ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

20 ವರ್ಷಗಳಿಂದ ಆತನನ್ನು ಕೊಲ್ಲಲು ಬಯಸಿದ್ದೆ: ಫಾರೂಕ್ ಅಬ್ದುಲ್ಲಾ ಮೇಲೆ ದಾಳಿ ನಡೆಸಿದ ಶೂಟರ್ ಹೇಳಿಕೆ!

ಮೊಟ್ಟೆ ಪ್ರಿಯರಿಗೆ ಗುಡ್‌ ನ್ಯೂಸ್‌; ಬೆಲೆಯಲ್ಲಿ ಭಾರೀ ಇಳಿಕೆ, ಗ್ರಾಹಕರು ಸಂತಸ

ಜಮ್ಮು: ಫಾರೂಕ್‌ ಅಬ್ದುಲ್ಲಾ ಹತ್ಯೆಗೆ ಯತ್ನ, ಮದುವೆ ಮನೆಯಲ್ಲೇ ಗುಂಡಿನ ದಾಳಿ; ಡಿಸಿಎಂಗೆ ಗಾಯ

CM ಕುರ್ಚಿ ಕಸರತ್ತು: ಬಜೆಟ್ ಅಧಿವೇಶನ ಪೂರ್ಣಗೊಂಡ ಬಳಿಕ ನಾಯಕತ್ವ ಗೊಂದಲಕ್ಕೆ ‘ಹೈ’ ಪರಿಹಾರ..?

ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ: ಕೇರಳದಲ್ಲಿ ಪೊಲೀಸರ ಭದ್ರತೆಯೊಂದಿಗೆ ವಿವಾಹ!

SCROLL FOR NEXT