ಸತೀಶ್ ಜಾರಕಿಹೊಳಿ  
ರಾಜಕೀಯ

ಉಪ ಮುಖ್ಯಮಂತ್ರಿ ಹುದ್ದೆಗೆ ಈಗ ಪಕ್ಷದಲ್ಲಿ ಬೇಡಿಕೆ ಕೇಳಿಬರುತ್ತಿಲ್ಲ: ಸತೀಶ್ ಜಾರಕಿಹೊಳಿ

ಉಪ ಮುಖ್ಯಮಂತ್ರಿ ಹುದ್ದೆಗೆ ನಮ್ಮ ಪಕ್ಷದಲ್ಲಿ ಈಗ ಅಂತಹ ಯಾವುದೇ ಬೇಡಿಕೆ ಇಲ್ಲ ಎಂದು ಉಪಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಾಗಿದ್ದ, ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ.

ಬೆಳಗಾವಿ: ಉಪ ಮುಖ್ಯಮಂತ್ರಿ ಹುದ್ದೆಗೆ ನಮ್ಮ ಪಕ್ಷದಲ್ಲಿ ಈಗ ಅಂತಹ ಯಾವುದೇ ಬೇಡಿಕೆ ಇಲ್ಲ ಎಂದು ಉಪಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಾಗಿದ್ದ, ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ. ರಾಜ್ಯದಲ್ಲಿ ಇತ್ತೀಚಿನ ಸಾರ್ವತ್ರಿಕ ಚುನಾವಣೆಗೂ ಮುನ್ನ ಹೆಚ್ಚಿನ ಡಿಸಿಎಂ ಹುದ್ದೆಗಳ ಬೇಡಿಕೆ ಇತ್ತು, ಆದರೆ ಈಗ ಅಂತಹ ಬೇಡಿಕೆಗಳು ಇಲ್ಲ ಎಂದಿದ್ದಾರೆ.

ನಿನ್ನೆ ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈಗಿನ ಸರ್ಕಾರದಲ್ಲಿ ಒಬ್ಬರೇ ಡಿಸಿಎಂ ಇರುತ್ತಾರೆ, ಇನ್ನು ಹೆಚ್ಚಿನ ಡಿಸಿಎಂಗಳ ಪ್ರಸ್ತಾಪ ಈಗ ಇಲ್ಲ ಎಂದು ಸ್ಪಷ್ಟಪಡಿಸಿದರು.

ಪ್ರಸ್ತುತ ಕಾಂಗ್ರೆಸ್ ಆಡಳಿತದಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಬಿಜೆಪಿ ಆರೋಪದ ಕುರಿತು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ಅಧಿಕಾರಾವಧಿಯಲ್ಲಿ ಕಾನೂನು ಸುವ್ಯವಸ್ಥೆ ಬಗ್ಗೆ ಅಂಕಿಅಂಶಗಳನ್ನು ಒದಗಿಸಿದ್ದಾರೆ, ಒಂದು ವರ್ಷ ಆಡಳಿತ ಪೂರೈಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಉತ್ತಮ ಆಡಳಿತದ ಬದ್ಧತೆ ಹೊಂದಿರುವುದಾಗಿಯೂ ಭರವಸೆ ಕೊಟ್ಟಿದ್ದಾರೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ