ಬೆಂಗಳೂರು: ರಾಜ್ಯದಲ್ಲಿ ವಿಧಾನಪರಿಷತ್ ಚುನಾವಣೆ ನಡೆಯುತ್ತಿದ್ದು, ಪಕ್ಷೇತರರಾಗಿ ಸ್ಪರ್ಧಿಸಿರುವ ಮಾಜಿ ಪರಿಷತ್ ಸದಸ್ಯ ರಘುಪತಿ ಭಟ್ ಗೆ ಬಿಜೆಪಿ ನೊಟೀಸ್ ಜಾರಿಗೊಳಿಸಿದೆ.
ಜೂ.03 ರಂದು ವಿಧಾನಪರಿಷತ್ ಚುನಾವಣೆ ನಡೆಯಲಿದ್ದು, ನೈಋತ್ಯ ಪದವೀಧರರ ಕ್ಷೇತ್ರದಿಂದ ರಘುಪತಿ ಭಟ್ ಪಕ್ಷೇತರರಾಗಿ ಸ್ಪರ್ಧಿಸಿದ್ದಾರೆ.
ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಸ್ಪರ್ಧಿಸುತ್ತಿರುವುದು ಪಕ್ಷದ ಶಿಸ್ತಿಗೆ ಧಕ್ಕೆ ಉಂಟುಮಾಡಿದೆ ಎಂದು ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ್ ಪಾಟೀಲ್ ಹೇಳಿದ್ದು, 2 ದಿನಗಳಲ್ಲಿ ಪಕ್ಷಕ್ಕೆ ಸ್ಪಷ್ಟನೆ ನೀಡಬೇಕೆಂದು ಸೂಚಿಸಿದ್ದಾರೆ. ನೈಋತ್ಯ ಪದವೀಧರರ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ರಘುಪತಿ ಭಟ್ ಬದಲಿಗೆ ಧನಂಜಯ ಸರ್ಜಿ ಅವರಿಗೆ ಈ ಬಾರಿ ಬಿಜೆಪಿ ಟಿಕೆಟ್ ನೀಡಿದೆ.
2023 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯು ಅವರಿಗೆ ಟಿಕೆಟ್ ನಿರಾಕರಿಸಿದಾಗಿನಿಂದ ಮತ್ತು ಚುನಾವಣೆಯಲ್ಲಿ ಗೆದ್ದ ಯಶಪಾಲ್ ಸುವರ್ಣರನ್ನು ಕಣಕ್ಕಿಳಿಸಿದಾಗಿನಿಂದ ರಘುಪತಿ ಭಟ್ ಅಸಮಾಧಾನ ಹೊಂದಿದ್ದರು.