ಸಿಎಂ ಸಿದ್ದರಾಮಯ್ಯ 
ರಾಜಕೀಯ

ಲೋಕಸಭೆ ಚುನಾವಣೆ ಫಲಿತಾಂಶದ ನಂತರ ಜಿಲ್ಲಾ, ತಾಲೂಕು ಪಂಚಾಯಿತಿ ಹಾಗೂ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ: ಸಿಎಂ ಸಿದ್ದರಾಮಯ್ಯ

ಲೋಕಸಭೆ ಚುನಾವಣೆ ಫಲಿತಾಂಶದ ನಂತರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.

ಮೈಸೂರು: ಕಳೆದ ಮೂರು ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ರಾಜ್ಯ ಸರ್ಕಾರ ಕೊನೆಗೂ ಮನಸ್ಸು ಮಾಡಿದ್ದು, ಲೋಕಸಭೆ ಚುನಾವಣೆ ಫಲಿತಾಂಶದ ನಂತರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.

ಇಂದು ಮೈಸೂರಿನ ಮೈಲಾರಿ ಹೋಟೆಲ್ ನಲ್ಲಿ ತಿಂಡಿ ಸೇವಿಸಿದ ಬಳಿಕ ವರದಿಗಾರರೊಂದಿಗೆ ಸಿಎಂ ಸಿದ್ದರಾಮಯ್ಯ ಮಾತನಾಡಿದರು. ಈ ವೇಳೆ ರಾಜ್ಯ ಸರ್ಕಾರ ಸ್ಥಳೀಯ ಸಂಘ–ಸಂಸ್ಥೆಗಳಿಗೆ ಚುನಾವಣೆ ನಡೆಸದಿದ್ದರೆ ಹೈಕೋರ್ಟ್ ಮೊರೆ ಹೋಗುವುದಾಗಿ ಚುನಾವಣಾ ಆಯೋಗ ಹೇಳಿರುವುದಕ್ಕೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ನಂತರ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತ್​ಗಳಿಗೆ ಚುನಾವಣೆ ನಡೆಸಲಾಗುವುದು ಮತ್ತು ಡಿಲಿಮಿಟೇಶನ್ ಪ್ರಕ್ರಿಯೆ ಮುಗಿದ ಬಳಿಕ ಬೃಹತ್ ಬೆಂಗಳೂರು ಮಹಾನಹರ ಪಾಲಿಕೆಗೂ ಚುನಾವಣೆ ನಡೆಸಲಾಗುವುದು ಎಂದು ಹೇಳಿದರು.

ಇದೇ ವೇಳೆ ತಮ್ಮ ಪುತ್ರ ಯತೀಂದ್ರ ಅವರನ್ನು ವಿಧಾನ ಪರಿಷತ್ ಸದಸ್ಯ ಮಾಡುವ ಬಗ್ಗೆ ಹಬ್ಬಿರುವ ವದಂತಿಗಳಿಗೆ ಸ್ಪಷ್ಟನೆ ನೀಡಿದ ಸಿಎಂ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಯತೀಂದ್ರ ತಮಗಾಗಿ ವರುಣ ಕ್ಷೇತ್ರ ಬಿಟ್ಟುಕೊಟ್ಟಾಗಲೇ ಪಕ್ಷದ ಹೈಕಮಾಂಡ್ ಅವರನ್ನು ವಿಧಾನ ಪರಿಷತ್ ಸದಸ್ಯನಾಗಿ ಮಾಡುವ ಭರವಸೆ ನೀಡಿತ್ತು. ಈಗಲೂ ಅದು ಹೈಕಮಾಂಡ್​ಗೆ ಬಿಟ್ಟ ವಿಚಾರ ಎಂದರು.

ಮೀಸಲು ವಿಚಾರ ಮತ್ತಿತರ ಕಾನೂನಾತ್ಮಕ ಹಾಗೂ ತಾಂತ್ರಿಕ ನೆಪವೊಡ್ಡಿ ಕಳೆದ ಮೂರು ವರ್ಷಗಳಿಂದ ಸ್ಥಳೀಯ ಸಂಸ್ಥೆಗಳ ಚುನಾವಣೆ ಮುಂದೂಡುತ್ತಾ ಬರಲಾಗಿತ್ತು. ಇದೀಗ ರಾಜ್ಯ ಸರ್ಕಾರ ಲೋಕಸಭೆ ಚುನಾವಣೆಯ ನಂತರ ಬಿಬಿಎಂಪಿ ಸೇರಿದಂತೆ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ಮುಂದಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!