ದೇವರಾಜೇಗೌಡ-ಶಿವರಾಮೇಗೌಡ 
ರಾಜಕೀಯ

ಪ್ರಜ್ವಲ್ ರೇವಣ್ಣ ಪ್ರಕರಣ: ಆಡಿಯೋ ಟೇಪ್‌ನಲ್ಲಿರುವ ನನ್ನ ಧ್ವನಿಯನ್ನು ತಿರುಚಲಾಗಿದೆ- ಎಲ್ಆರ್ ಶಿವರಾಮೇಗೌಡ

ಸಾಮಾಜಿಕ ಜಾಲತಾಣದಲ್ಲಿ ಶಿವರಾಮೇಗೌಡ ಸ್ಪಷ್ಟನೆ ನೀಡಿದ್ದು, ಕೆಲ ಅಪರಿಚಿತ ದುಷ್ಕರ್ಮಿಗಳು ತಮ್ಮ ಧ್ವನಿಯನ್ನು ಮಾರ್ಫಿಂಗ್ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗಷ್ಟೇ ವೈರಲ್ ಆಗಿರುವ ಬಿಜೆಪಿ ಮುಖಂಡ ದೇವರಾಜೇಗೌಡ ಹಾಗೂ ತಮ್ಮ ನಡುವಿನ ದೂರವಾಣಿ ಸಂಭಾಷಣೆಯು ನನ್ನ ವಿರುದ್ಧದ ಷಡ್ಯಂತ್ರ ಎಂದು ಮಾಜಿ ಸಂಸದ ಎಲ್ಆರ್ ಶಿವರಾಮೇಗೌಡ ಹೇಳಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಶಿವರಾಮೇಗೌಡ ಸ್ಪಷ್ಟನೆ ನೀಡಿದ್ದು, ಕೆಲ ಅಪರಿಚಿತ ದುಷ್ಕರ್ಮಿಗಳು ತಮ್ಮ ಧ್ವನಿಯನ್ನು ಮಾರ್ಫಿಂಗ್ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

'ನನ್ನ 40 ವರ್ಷಗಳ ರಾಜಕೀಯ ಜೀವನದಲ್ಲಿ ನಾನು ರಾಜಕೀಯವಾಗಿ ಟೀಕಿಸಿದ್ದೇನೆ ಮತ್ತು ವೈಯಕ್ತಿಕವಾಗಿ ಎಂದಿಗೂ ಯಾರನ್ನೂ ಟೀಕಿಸಿಲ್ಲ. ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರ ಸಾವಿಗೆ ನಾನು ಎಂದಿಗೂ ಹಾರೈಸಿಲ್ಲ' ಎಂದು ಅವರು ಪೋಸ್ಟ್‌ನಲ್ಲಿ ಬರೆದಿದ್ದಾರೆ.

ಏಪ್ರಿಲ್ 29 ರಂದು ರಾಜ್ಯದಾದ್ಯಂತ ಪೆನ್ ಡ್ರೈವ್ ವಿಚಾರ ವೈರಲ್ ಆದಾಗ ದೇವರಾಜೇಗೌಡ ಅವರು ತಮ್ಮನ್ನು ಭೇಟಿಯಾಗಿದ್ದರು. ಪೆನ್ ಡ್ರೈವ್ ಪ್ರಕರಣದಲ್ಲಿ ನಾನು ಯಾವುದೇ ರೀತಿಯ ಸಂಪರ್ಕ ಹೊಂದಿಲ್ಲ. ಆದರೆ, ನನ್ನ ರಾಜಕೀಯ ಪ್ರತಿಸ್ಪರ್ಧಿಗಳು ಅದರೊಂದಿಗೆ ನನ್ನನ್ನು ಜೋಡಿಸುತ್ತಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಆಡಿಯೋವನ್ನು ತಿರುಚಿ ಅಪ್‌ಲೋಡ್ ಮಾಡಿರುವುದನ್ನು ನಾನು ಗಮನಿಸಿದ್ದೇನೆ ಮತ್ತು ಅದರ ಹಿಂದೆ ಯಾರಿದ್ದಾರೆಂದು ನನಗೆ ತಿಳಿದಿದೆ. ಸರಿಯಾದ ಸಮಯದಲ್ಲಿ ನಾನು ಅವರಿಗೆ ಉತ್ತರಿಸುತ್ತೇನೆ' ಎಂದು ಅವರು ಹೇಳಿದರು.

ತಮ್ಮ ವಿರುದ್ಧ ಷಡ್ಯಂತ್ರ ನಡೆಸುವವರ ವಿರುದ್ಧ ಪ್ರಕರಣ ದಾಖಲಿಸುವುದಾಗಿ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಶ್ಚಿಮ ಏಷ್ಯಾದ ಉದ್ವಿಗ್ನತೆ ನಡುವೆ ಮೋದಿ- ಪೆಜೆಶ್ಕಿಯನ್ ಮಾತುಕತೆ: ದೀರ್ಘಕಾಲೀನ, ಪರಸ್ಪರ ಲಾಭದಾಯಕ ಕಾರ್ಯತಂತ್ರಕ್ಕೆ ಒತ್ತು

ಲೋಕೋಪಯೋಗಿ ಇಲಾಖೆಯಲ್ಲಿ 'ಲಂಚ'; ವಿದೇಶಿ ಷೇರು ಹೂಡಿಕೆ ಇತ್ಯಾದಿ; ಸತೀಶ್ ಜಾರಕಿಹೊಳಿ ಮನೆಯಲ್ಲಿ ಸಿಕ್ಕಿದ್ದೇನು? EDಯಿಂದ ಅಧಿಕೃತ ಹೇಳಿಕೆ

ಬದರಿನಾಥದ 'ತಪ್ತ ಕುಂಡ'ದಲ್ಲಿ 108 ಬಾರಿ ಧಾರ್ಮಿಕ ಸ್ನಾನ: ರಾಜಸ್ಥಾನದ ಇಬ್ಬರು ವೃದ್ಧೆಯರು ಸಾವು!

BRICS 2026: ಪುಟಿನ್-ಮೋದಿ ಮಾತುಕತೆ: ಕಪ್ಪು ಸಮುದ್ರದಲ್ಲಿ ಭಾರತೀಯರ ಸುರಕ್ಷತೆಯ ವಿಷಯ ಪ್ರಸ್ತಾಪ ರಷ್ಯಾ ಅಧ್ಯಕ್ಷ ಹೇಳಿದ್ದೇನು?

ಬ್ರಿಕ್ಸ್ ಶೃಂಗಸಭೆ: ಭಾರಿ ಭದ್ರತೆ, ಐಷಾರಾಮಿ ವಿಮಾನದಲ್ಲಿ ನವದೆಹಲಿಗೆ ಆಗಮಿಸಿದ ಪುಟಿನ್! "ಡೂಮ್ಸ್ ಡೇ' ವಿಶೇಷತೆ ಏನು ಗೊತ್ತಾ? Video