ಬೆಂಗಳೂರು: ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಬಿಜೆಪಿಯಿಂದ ಮಾಜಿ ಶಾಸಕ ರಘುಪತಿ ಭಟ್ ಅವರನ್ನು ಉಚ್ಚಾಟನೆ ಮಾಡಲಾಗಿದೆ.
ನೈಋತ್ಯ ಪದವೀಧರ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ರಘುಪತಿ ಭಟ್ ಅವರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಹೀಗಾಗಿ ಪಕ್ಷೇತರ ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ಬಿಜೆಪಿ ಸೂಚಿಸಿತ್ತು. ಆದರೆ, ನಾಮಪತ್ರ ಹಿಂಪಡೆಯದೆ ಸ್ಪರ್ಧೆ ಮಾಡುತ್ತಿರುವ ರಘುಪತಿ ಭಟ್ ಅವರನ್ನು ಇದೀಗ ಉಚ್ಚಾಟನೆ ಮಾಡಲಾಗಿದೆ.
ಜೂನ್ 3ರಂದು ವಿಧಾನ ಪರಿಷತ್ನ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರ ಸೇರಿದಂತೆ 6 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಮಾಜಿ ಶಾಸಕ ರಘುಪತಿ ಭಟ್ ಸ್ಪರ್ಧೆ ಮಾಡುತ್ತಿರುವುದು ಬಿಜೆಪಿಗೆ ತಲೆನೋವಾಗಿ ಪರಿಣಮಿಸಿದೆ.