ಬೆಂಗಳೂರು: ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ಬಳಿಕ ಸಂಪುಟ ಪುನರ್‌ರಚನೆ ಸಾಧ್ಯತೆಗಳಿವೆ ಎಂದು ತೋಟಗಾರಿಕಾ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರು ಸೋಮವಾರ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟ ಪುನರ್‌ರಚನೆ ಮುಖ್ಯಮಂತ್ರಿ ಅವರಿಗೆ ಬಿಟ್ಟ ವಿಚಾರ. ಈ ಕುರಿತು ಅವರೇ ನಿರ್ಧಾರ ತೆಗೆದುಕೊಳ್ಳುತ್ತಾರೆ. ಪುನರ್‌ರಚನೆ ಆಗಬಹುದು ಎನ್ನುವ ಮೂಲಕ ಸಾಧ್ಯತೆಗಳ ಸುಳಿವು ನೀಡಿದರು.
ಚನ್ನಗಿರಿ ಲಾಕಪ್ ಸಾವು ಪ್ರಕರಣ ಕುರಿತು ತನಿಖೆ ನಡೆಯುತ್ತಿದೆ. ಲೋಪ ಕಂಡುಬಂದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತದೆ. ಇಂತಹ ವಿಚಾರಗಳಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎನ್ನುವ ಬಿಜೆಪಿ ಮೊದಲು ದೆಹಲಿಯ ವ್ಯವಸ್ಥೆ ಸರಿ ಮಾಡಲಿ ಎಂದು ಹೇಳಿದರು.
ಈ ಹಿಂದೆ ಹೇಳಿಕೆ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಚಿವ ಸಂಪುಟ ಪುನಾರಚನೆ ಮಾಡುವ ಯೋಚನೆ ಸದ್ಯಕ್ಕಿಲ್ಲ. ಯಾವುದೇ ಕಾರಣಕ್ಕೂ ನಾವು ಯಾವುದೇ ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸುವುದಿಲ್ಲ. ಕಾಂಗ್ರೆಸ್ ಸರ್ಕಾರ ಇರುವಷ್ಟೂ ದಿನ ಗ್ಯಾರಂಟಿ ಯೋಜನೆ ಮುಂದುವರೆಯುತ್ತದೆ ಎಂದರು.