ಸಿಎಂ ಸಿದ್ದರಾಮಯ್ಯ 
ರಾಜಕೀಯ

ವಿಧಾನ ಪರಿಷತ್ ಚುನಾವಣೆ: ಟಿಕೆಟ್​​ಗಾಗಿ ಮುಂದುವರಿದ ಲಾಬಿ; ನಿಷ್ಠಾವಂತರಿಗೆ ಅವಕಾಶ ನೀಡುವಂತೆ ಸಿಎಂಗೆ 'ಕೈ' ಪಡೆ ಒತ್ತಾಯ

ಎಂಎಲ್‌ಸಿ ಟಿಕೆಟ್‌ಗಾಗಿ ತೀವ್ರ ಲಾಬಿ ನಡೆಯುತ್ತಿದ್ದು, ಪಕ್ಷಕ್ಕೆ ನಿಷ್ಠರಾಗಿರುವ ಮತ್ತು ಸಂಘಟನಾಶೀಲರಾಗಿರುವವರನ್ನು ಆಯ್ಕೆ ಮಾಡುವಂತೆ ಕಾಂಗ್ರೆಸ್ ಮುಖಂಡರ ಒಂದು ವರ್ಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದೆ.

ಬೆಂಗಳೂರು: ಎಂಎಲ್‌ಸಿ ಟಿಕೆಟ್‌ಗಾಗಿ ತೀವ್ರ ಲಾಬಿ ನಡೆಯುತ್ತಿದ್ದು, ಪಕ್ಷಕ್ಕೆ ನಿಷ್ಠರಾಗಿರುವ ಮತ್ತು ಸಂಘಟನಾಶೀಲರಾಗಿರುವವರನ್ನು ಆಯ್ಕೆ ಮಾಡುವಂತೆ ಕಾಂಗ್ರೆಸ್ ಮುಖಂಡರ ಒಂದು ವರ್ಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದೆ.

ಟಿಕೆಟ್‌ ಆಕಾಂಕ್ಷಿಗಳಾದ ವಿಜಯ್‌ ಮುಳಗುಂದ, ವಿ ಶಂಕರ್‌, ಬಿಆರ್‌ ನಾಯ್ಡು, ಎಸ್‌ ಮನೋಹರ್‌, ಅಬ್ದುಲ್‌ ವಾಜಿದ್‌, ಎ ಕೆಂಚೇಗೌಡ, ವಿಎಸ್‌ ಆರಾಧ್ಯ ಮತ್ತು ಎಂ ರಾಮಚಂದ್ರಪ್ಪ ಸೇರಿದಂತೆ ಪಕ್ಷದ ಎಂಟು ಮುಖಂಡರು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದಾರೆ.

ವಿಧಾನಪರಿಷತ್ ನ 11 ಸ್ಥಾನಗಳಿಗೆ ಜೂನ್ 13 ರಂದು ಚುನಾವಣೆ ನಿಗದಿಯಾಗಿದೆ. ಎಂಎಲ್'ಸಿಗಳನ್ನು ಶಾಸಕರು ಆಯ್ಕೆ ಮಾಡಲಿದ್ದು, ಪಕ್ಷಗಳು ಹೊಂದಿರುವ ಶಾಸಕರ ಸಂಖ್ಯೆಯ ಆಧಾರದ ಮೇಲೆ, ಕಾಂಗ್ರೆಸ್ ಏಳು ಎಂಎಲ್‌ಸಿಗಳನ್ನು, ಬಿಜೆಪಿ ಮೂರು ಮತ್ತು ಜೆಡಿಎಸ್ ಒಬ್ಬರನ್ನು ಆಯ್ಕೆ ಮಾಡುವ ಅವಕಾಶವನ್ನು ಪಡೆದುಕೊಂಡಿದೆ.

ಪ್ರತಿ ಬಾರಿ ಎಂಎಲ್‌ಸಿ ಚುನಾವಣೆ ನಡೆದಾಗ ಪಕ್ಷಕ್ಕೆ ನಿಷ್ಠರಾಗಿರುವವರನ್ನು ಮಾತ್ರ ಆಯ್ಕೆ ಮಾಡಬೇಕು ಎಂಬ ಧ್ವನಿ ಶುರುವಾಗುತ್ತದೆ. ಆದರೆ ಕಾರಣಾಂತರಗಳಿಂದ ಹಿರಿಯ ನಾಯಕರು ಹಾಗೂ ಹೈಕಮಾಂಡ್ ಆಯ್ಕೆ ಮಾಡಿದವರಿಗೆ ಮಾತ್ರ ಅವಕಾಶ ಸಿಗುತ್ತಿದೆ. ಆದರೆ. ಪಕ್ಷದ ಸಂಘಟನೆಯಲ್ಲಿ ಯಾರು ಎಷ್ಟು ಕೆಲಸ ಮಾಡಿದ್ದಾರೆ ಎಂಬ ಸ್ಪಷ್ಟ ಮಾಹಿತಿ ನಿಮ್ಮ ಬಳಿ ಇದ್ದೇ ಇರುತ್ತದೆ. ಹೀಗಾಗಿ ಅಂತಹವರು ನಾಮನಿರ್ದೇಶನಗೊಳ್ಳುವಂತೆ ನೋಡಿಕೊಳ್ಳುವುದು ನಿಮ್ಮ ಜವಾಬ್ದಾರಿಯಾಗಿದೆ ಎಂದು ಮನವಿ ಪತ್ರದಲ್ಲಿ ಆಗ್ರಹಿಸಲಾಗಿದೆ.

ಈಗಾಗಲೇ ಎಂಎಲ್‌ಸಿ, ಸಚಿವ ಅಥವಾ ಇತರೆ ಸ್ಥಾನಗಳಲ್ಲಿ ಸೇವೆ ಸಲ್ಲಿಸಿದವರನ್ನು ಪರಿಗಣಿಸಬಾರದು. ಪಕ್ಷದ ಸಾಮಾನ್ಯ ಕಾರ್ಯಕರ್ತರು ಹಾಗೂ ಸಂಘಟನಾ ಚಟುವಟಿಕೆಯಲ್ಲಿ ತೊಡಗಿರುವವರನ್ನು ಆಯ್ಕೆ ಮಾಡುವುದರಿಂದ ಉತ್ತಮ ಸಂದೇಶ ರವಾನೆಯಾಗುತ್ತದೆ ಎಂದು ಮನವಿ ಪತ್ರದಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT