ಡಿ ಕೆ ಶಿವಕುಮಾರ್ 
ರಾಜಕೀಯ

ಸುಳ್ಳಿಗೆ ಮತ್ತೊಂದು ಹೆಸರೇ ಕುಮಾರಸ್ವಾಮಿ; ಬಿಜೆಪಿ- ಜೆಡಿಎಸ್ ನಲ್ಲಿ ಭವಿಷ್ಯವಿಲ್ಲ ಎಂದು ಗುಂಪು ಗುಂಪಾಗಿ ಕಾಂಗ್ರೆಸ್ ಸೇರುತ್ತಿದ್ದಾರೆ: DKS

ಕುಮಾರಸ್ವಾಮಿ ತನ್ನ ಸ್ಥಾನವನ್ನೇ ಉಳಿಸಿಕೊಳ್ಳುವುದು ಕಷ್ಟವಾಗಿದೆ. ಬಿಜೆಪಿ ನಾಯಕರೇ ಕುಮಾರಸ್ವಾಮಿ ಅವರಿಗೆ ಉತ್ತರ ನೀಡುತ್ತಾರೆ. ಅವರ ಪಕ್ಷ ಗಟ್ಟಿಯಾಗಿ ಉಳಿಯುತ್ತದೆಯೋ ಇಲ್ಲವೋ ಎಂಬುದನ್ನು ಸಮಯ ಬಂದಾಗ ಉತ್ತರ ನೀಡುತ್ತೇನೆ.

ರಾಮನಗರ: ಬಿಜೆಪಿ ಹಾಗೂ ಜೆಡಿಎಸ್ ಪಕ್ಷದಲ್ಲಿ ಭವಿಷ್ಯವಿಲ್ಲ ಎಂಬ ಕಾರಣಕ್ಕೆ ಆ ಪಕ್ಷದ ಮುಖಂಡರು, ಕಾರ್ಯಕರ್ತರು ಗುಂಪು ಗುಂಪಾಗಿ ಕಾಂಗ್ರೆಸ್ ಸೇರುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಚನ್ನಪಟ್ಟಣದ ಜೆಡಿಎಸ್ ಮತ್ತು ಬಿಜೆಪಿ ಮುಖಂಡರು, ಕಾರ್ಯಕರ್ತರು ರಾಮನಗರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ಪಕ್ಷಕ್ಕೆ ಸೇರಿಸಿಕೊಂಡ ನಂತರ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು. ಕುಮಾರಸ್ವಾಮಿ ತನ್ನ ಸ್ಥಾನವನ್ನೇ ಉಳಿಸಿಕೊಳ್ಳುವುದು ಕಷ್ಟವಾಗಿದೆ. ಬಿಜೆಪಿ ನಾಯಕರೇ ಕುಮಾರಸ್ವಾಮಿ ಅವರಿಗೆ ಉತ್ತರ ನೀಡುತ್ತಾರೆ. ಅವರ ಪಕ್ಷ ಗಟ್ಟಿಯಾಗಿ ಉಳಿಯುತ್ತದೆಯೋ ಇಲ್ಲವೋ ಎಂಬುದನ್ನು ಸಮಯ ಬಂದಾಗ ಉತ್ತರ ನೀಡುತ್ತೇನೆ. ಬಿಜೆಪಿಯಲ್ಲಿ ಅವರನ್ನು ಯಾವ ರೀತಿ ನಡೆಸಿಕೊಳ್ಳುತ್ತಿದ್ದಾರೆ ಎಂದೂ ಗೊತ್ತಿದೆ. ಜೆಡಿಎಸ್ ಹಾಗೂ ಬಿಜೆಪಿ ಪಕ್ಷದಲ್ಲಿ ಭವಿಷ್ಯವಿಲ್ಲ ಎಂಬ ಕಾರಣಕ್ಕೆ ಗುಂಪು ಗುಂಪಾಗಿ ಆ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಸೇರುತ್ತಿದ್ದಾರೆ. ಎಲ್ಲೋ ಹಳ್ಳಿಗಳಲ್ಲಿ ಭಿನ್ನಾಭಿಪ್ರಾಯದಿಂದ ಒಂದಿಬ್ಬರು ಮಾತ್ರ ನಮ್ಮ ಪಕ್ಷ ಬಿಟ್ಟಿರಬಹುದು. ಐದು ಬೆರಳು ಸೇರಿ ಕೈ ಮುಷ್ಟಿಯಾಯಿತು, ಐದು ಗ್ಯಾರಂಟಿ ಸೇರಿ ಕೈ ಗಟ್ಟಿಯಾಯಿತು. ಕಾಂಗ್ರೆಸ್ ಪಕ್ಷದಿಂದ ಮಾತ್ರ ಜನರಿಗೆ ಒಳ್ಳೆಯದಾಗಲು ಸಾಧ್ಯ ಎಂದು ಯೋಗೇಶ್ವರ್ ಅವರು ಕಾಂಗ್ರೆಸ್ ಪಕ್ಷ ಸೇರಿದ್ದಾರೆ" ಎಂದು ತಿಳಿಸಿದರು.

ಈ ಸರ್ಕಾರ ಆತ್ಮಹತ್ಯೆ ಮಾಡಿಕೊಳ್ಳಲಿದೆ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, "ಕುಮಾರಸ್ವಾಮಿ ಮಾತಿಗೆ ಉತ್ತರ ನೀಡುವುದಿಲ್ಲ, ಸುಳ್ಳಿಗೆ ಮತ್ತೊಂದು ಹೆಸರು ಕುಮಾರಸ್ವಾಮಿ" ಎಂದು ತಿಳಿಸಿದರು. ಮೂರು ತಿಂಗಳ ಹಿಂದೆಯೇ ಕೆ.ಜೆ ಜಾರ್ಜ್ ಅವರು ಯೋಗೇಶ್ವರ್ ಅವರನ್ನು ಡೀಲ್ ಮಾಡಿದ್ದರು ಎಂಬ ಆರ್. ಅಶೋಕ್ ಅವರ ಹೇಳಿಕೆ ಬಗ್ಗೆ ಕೇಳಿದಾಗ, "ಅದೆಲ್ಲವೂ ಸುಳ್ಳು. ಯಾವ ಡೀಲು ಇಲ್ಲ. ಇದಕ್ಕೆಲ್ಲ ಯೋಗೇಶ್ವರ್ ಉತ್ತರ ನೀಡುತ್ತಾರೆ" ಎಂದು ತಿಳಿಸಿದರು. ಚನ್ನಪಟ್ಟಣದಲ್ಲಿ ಭಾವನಾತ್ಮಕವಾಗಿ ಮತ ಸೆಳೆಯಲಾಗುತ್ತಿದೆ ಎಂದು ಕೇಳಿದಾಗ, ಭಾವನೆ ಮೇಲೆ ಮತ ಕೇಳುವುದಲ್ಲ. ಬದುಕಿನ ಮೇಲೆ ಮತ ಕೇಳಬೇಕು. ಅವರು ಭಾವನೆ ಮೇಲೆ ಮತ ಕೇಳಿದರೆ, ನಾವು ಬದುಕಿನ ಮೇಲೆ ಮತ ಕೇಳುತ್ತೇವೆ. ಜನರ ಬದುಕು, ಅವರ ಅಭಿವೃದ್ಧಿ ನಮಗೆ ಮುಖ್ಯ. ಕೆರೆಗೆ ನೀರು ತುಂಬಿಸುವುದು, ರಸ್ತೆ, ಮನೆಗಳು, ನಿವೇಶನ ನೀಡುವುದು ಮುಖ್ಯ ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್