ಅಮಿತ್ ಶಾ PTI
ರಾಜಕೀಯ

ವಕ್ಫ್ ಬೋರ್ಡ್‌ ಆಸ್ತಿ ವಿವಾದ: ಅಮಿತ್ ಶಾ, ಸಂಸತ್‌ ಜಂಟಿ ಸದನ ಸಮಿತಿಗೆ ಆರ್ ಅಶೋಕ್ ಪತ್ರ

ಪ್ರತಿಪಕ್ಷ ನಾಯಕ ಆರ್ ಅಶೋಕ್ ಅವರು ಈ ಸಂಬಂಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಸಂಸತ್‌ ಜಂಟಿ ಸದನ ಸಮಿತಿ ಅಧ್ಯಕ್ಷೆ ಜಗದಾಂಬಿಕಾ ಪಾಲ್ ಅವರಿಗೆ ಪತ್ರ ಬರೆದಿದ್ದು, ತಕ್ಷಣೆವೇ ವಕ್ಫ್ ಬೋರ್ಡ್‌ ಗೆ ಆಸ್ತಿ ನೋಂದಣಿಯನ್ನು ಸ್ಥಗಿತಗೊಳಿಸುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚಿಸುವಂತೆ ಮನವಿ ಮಾಡಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ವಕ್ಫ್ ಬೋರ್ಡ್‌ ಆಸ್ತಿ ವಿವಾದ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಸೋಮವಾರ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದೆ.

ಈ ಮಧ್ಯೆ, ಪ್ರತಿಪಕ್ಷ ನಾಯಕ ಆರ್ ಅಶೋಕ್ ಅವರು ಈ ಸಂಬಂಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಸಂಸತ್‌ ಜಂಟಿ ಸದನ ಸಮಿತಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಅವರಿಗೆ ಪತ್ರ ಬರೆದಿದ್ದು, ತಕ್ಷಣೆವೇ ವಕ್ಫ್ ಬೋರ್ಡ್‌ ಗೆ ಆಸ್ತಿ ನೋಂದಣಿಯನ್ನು ಸ್ಥಗಿತಗೊಳಿಸುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚಿಸುವಂತೆ ಮನವಿ ಮಾಡಿದ್ದಾರೆ.

ಕರ್ನಾಟಕದಲ್ಲಿ ರಾಜ್ಯ ಸರ್ಕಾರ ಮತ್ತು ವಕ್ಫ್‌ ಮಂಡಳಿಯು ಕಂದಾಯ ದಾಖಲೆಗಳನ್ನು ತಿದ್ದುವ ಹಾಗೂ ರೈತರ ಜಮೀನುಗಳ ಮಾಲೀಕತ್ವ ವರ್ಗಾಯಿಸಿಕೊಳ್ಳುವ ಪ್ರಯತ್ನ ಆರಂಭವಾಗಿದೆ. ಈ ರೀತಿ ತರಾತುರಿಯಲ್ಲಿ ಜಮೀನುಗಳನ್ನು ವಕ್ಫ್​​ ಮಂಡಳಿ ನೋಂದಾಯಿಸಿಕೊಳ್ಳುತ್ತಿರುವ ಪರಿಣಾಮ ಸಾವಿರಾರು ಬಡವರು ಹಾಗೂ ರೈತರು ವಂಶಪಾರಂಪರ್ಯವಾಗಿ ಬಂದ ಭೂಮಿಯನ್ನು ಕಳೆದುಕೊಳ್ಳುತ್ತಿದ್ದಾರೆ.

ಜೆಪಿಸಿಯು ವಕ್ಫ್ ಕಾಯಿದೆಗೆ ತರಬಹುದಾದ ತಿದ್ದುಪಡಿಯ ನಿರೀಕ್ಷೆಯಲ್ಲಿ ವಕ್ಫ್ ಮಂಡಳಿಯು ರೈತರ ಜಮೀನುಗಳನ್ನು ನೋಂದಾಯಿಸಲು "ತರಾತುರಿ ಪ್ರಯತ್ನಗಳು" ನಡೆಸುತ್ತಿದೆ ಎಂದು ಪ್ರತಿಪಕ್ಷ ನಾಯಕರು ಪತ್ರದಲ್ಲಿ ಆರೋಪಿಸಿದ್ದಾರೆ.

ವಿಜಯಪುರ ಜಿಲ್ಲೆಯಲ್ಲಿ 15,000 ಎಕರೆ ಜಮೀನನ್ನು ವಶಪಡಿಸಿಕೊಳ್ಳಲು ನೋಟಿಸ್‌ ನೀಡಲಾಗಿದೆ ಎಂದು ನೂರಾರು ರೈತರು ಹೇಳಿದ ಬಳಿಕ ಈ ಸಂಗತಿ ಬೆಳಕಿಗೆ ಬಂದಿದೆ. ಎಲ್ಲಾ ಜಿಲ್ಲೆಗಳಲ್ಲಿ ತಲಾ 10,000 ಎಕರೆ ಜಮೀನನ್ನು ವಕ್ಫ್​ ನೋಂದಣಿ ಮಾಡಿಕೊಳ್ಳುವ ಪ್ರಯತ್ನ ಮಾಡಿದೆ ಎಂದು ಹೇಳಲಾಗಿದೆ. ವಕ್ಫ್​ ಮಂಡಳಿಯು ದೇವಸ್ಥಾನ, ಮಠ ಹಾಗೂ ಇತರೆ ಹಿಂದೂ ಧಾರ್ಮಿಕ ಸಂಸ್ಥೆಗಳ ಜಮೀನುಗಳನ್ನು ಕೂಡ ತನ್ನದು ಎಂದು ಹೇಳಿಕೊಂಡಿದೆ. ಹಿಂದೂ ಸ್ಮಶಾನ ಕೂಡ ತನ್ನದು ಎಂದು ವಕ್ಫ್​ ಉಲ್ಲೇಖಿಸಿರುವುದು ಇನ್ನಷ್ಟು ಆಘಾತದ ಸಂಗತಿ ಎಂದು ಆರ್ ಅಶೋಕ್ ಹೇಳಿದ್ದಾರೆ.

"ಇದಲ್ಲದೆ, ವಕ್ಫ್ ಮಂಡಳಿಯು ದೇವಾಲಯಗಳು, ಮಠಗಳು ಮತ್ತು ಇತರ ಧಾರ್ಮಿಕ ಸಂಸ್ಥೆಗಳಿಗೆ ಸೇರಿದ ಭೂಮಿಯ ಮೇಲೂ ಹಕ್ಕು ಸಾಧಿಸುತ್ತಿದೆ. 13ನೇ ಶತಮಾನದಷ್ಟು ಇತಿಹಾಸ ಹೊಂದಿರುವ ವಿರಕ್ತ ಮಠಕ್ಕೆ ಸೇರಿದ ಸಿಂದಗಿಯ 1.28 ಎಕರೆ ಜಮೀನು, ವಿಜಯಪುರದ ಐತಿಹಾಸಿಕ ಸೋಮೇಶ್ವರ ದೇವಾಲಯ, ಕಲಬುರ್ಗಿಯ ಬೀರದೇವರ ಗುಡಿ ಸೇರಿದಂತೆ ಅನೇಕ ಜನಪ್ರಿಯ ಸ್ಥಳಗಳನ್ನು ಕೂಡ ವಕ್ಫ್​ ತನ್ನದೆಂದು ಘೋಷಿಸಿಕೊಂಡಿದೆ. ಇದು ಜನರಲ್ಲಿ ಆತಂಕ ಉಂಟುಮಾಡಿದ್ದು, ಹಾವೇರಿಯಲ್ಲಿ ಹಿಂಸಾಚಾರ, ಗಲಭೆ ಕೂಡ ನಡೆದಿದೆ. ಈ ಎಲ್ಲಾ ಘಟನೆಗಳ ಹಿನ್ನೆಲೆಯಲ್ಲಿ, ಜಂಟಿ ಸಮಿತಿ ಕೂಡಲೇ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಯ ಜೊತೆ ಮಾತನಾಡಬೇಕು. ವಕ್ಫ್​ಗೆ ಸಂಬಂಧಿಸಿದ ಜಮೀನು ನೋಂದಣಿ ಸ್ಥಗಿತಗೊಳಿಸಲು ಸೂಚಿಸಬೇಕು ಎಂದು ಪತ್ರದ ಮೂಲಕ ಆರ್‌.ಅಶೋಕ್ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT