ಸಾಂದರ್ಭಿಕ ಚಿತ್ರ  
ರಾಜಕೀಯ

ಮಹಾರಾಷ್ಟ್ರ ವಿಧಾನಸಭೆ ಚುನಾವಣೆ: ಕರ್ನಾಟಕದ ಗಡಿ ಜಿಲ್ಲೆಗಳ ಕಾಂಗ್ರೆಸ್ ನಾಯಕರಿಗೆ ಪ್ರಚಾರದ ಜವಾಬ್ದಾರಿ

ಬೀದರ್, ಕಲಬುರಗಿ, ವಿಜಯಪುರ ಮತ್ತು ಬೆಳಗಾವಿ ಜಿಲ್ಲೆಗಳ ಅನೇಕ ಕನ್ನಡಿಗರ ಬಂಧುಗಳು ಮಹಾರಾಷ್ಟ್ರದ ಆರು ಜಿಲ್ಲೆಗಳಲ್ಲಿ ನೆಲೆಸಿದ್ದಾರೆ.

ಕಲಬುರಗಿ: ನವೆಂಬರ್ 20 ರಂದು ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆ ಕಾಂಗ್ರೆಸ್ ಪಾಲಿಗೆ ಅತ್ಯಂತ ನಿರ್ಣಾಯಕವಾಗಿದ್ದು, ವಿಶೇಷವಾಗಿ ಉತ್ತರ ಕರ್ನಾಟಕದ ನಾಂದೇಡ್, ಲಾತೂರ್, ಉಸ್ಮಾನಾಬಾದ್ (ಈಗ ಧಾರಾಶಿವ), ಸೋಲಾಪುರ, ಸಾಂಗ್ಲಿ, ಕೊಲ್ಲಾಪುರ, ಸಿಂಧುದುರ್ಗ ಸೇರಿದಂತೆ ಕೆಲವು ಜಿಲ್ಲೆಗಳ ಪಕ್ಷದ ನಾಯಕರಿಗೆ ಬಹಳ ಮಹತ್ವದ್ದಾಗಿದೆ. ಈ ಜಿಲ್ಲೆಗಳು ಕರ್ನಾಟಕದ ಬೀದರ್, ಕಲಬುರಗಿ, ವಿಜಯಪುರ ಮತ್ತು ಬೆಳಗಾವಿ ಜಿಲ್ಲೆಗಳನ್ನು ಒಳಗೊಂಡಿರುವ ಉತ್ತರ ಕರ್ನಾಟಕ ಪ್ರದೇಶದ ಗಡಿ ಜಿಲ್ಲೆಗಳಿಗೆ ತಾಗಿಕೊಂಡಿವೆ.

ಬೀದರ್, ಕಲಬುರಗಿ, ವಿಜಯಪುರ ಮತ್ತು ಬೆಳಗಾವಿ ಜಿಲ್ಲೆಗಳ ಅನೇಕ ಕನ್ನಡಿಗರ ಬಂಧುಗಳು ಮಹಾರಾಷ್ಟ್ರದ ಆರು ಜಿಲ್ಲೆಗಳಲ್ಲಿ ನೆಲೆಸಿದ್ದಾರೆ. ಈ ಜಿಲ್ಲೆಗಳ ಅಭ್ಯರ್ಥಿಗಳ ಗೆಲುವಿಗೆ ಸಂಬಂಧಿಸಿದಂತೆ ಅವರ ಮತಗಳು ನಿರ್ಣಾಯಕವಾಗಿವೆ. ವಿಶೇಷವಾಗಿ ಸೊಲ್ಲಾಪುರ ಮತ್ತು ಲಾತೂರ್ ಜಿಲ್ಲೆಗಳಲ್ಲಿ ಹೆಚ್ಚಿನ ಸಂಖ್ಯೆಯ ಕನ್ನಡಿಗರಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮರಾಠಿ ಮಾತೃಭಾಷೆ ಮಾತನಾಡುವ ಹಚ್ಚಿನ ಸಂಖ್ಯೆಯ ಜನರನ್ನು ಹೊಂದಿರುವ ಕಲಬುರಗಿ (ಅವರ ಜನ್ಮ ಸ್ಥಳ ಬೀದರ್ ಜಿಲ್ಲೆಯ ವಾರವತ್ತಿ) ಯಿಂದ ಬಂದಿರುವ ಕಾರಣ ಮಹಾರಾಷ್ಟ್ರ ಚುನಾವಣೆಯು ಕಾಂಗ್ರೆಸ್‌ಗೆ ಪ್ರತಿಷ್ಠಿತ ವಿಷಯವಾಗಿದೆ. ಸ್ವತಃ ಖರ್ಗೆಯವರು ಮರಾಠಿ ಭಾಷೆಯಲ್ಲೂ ಪರಿಣಿತರಾಗಿದ್ದಾರೆ.

ಬೀದರ್, ಕಲಬುರಗಿ, ವಿಜಯಪುರ ಮತ್ತು ಬೆಳಗಾವಿ ಜಿಲ್ಲೆಗಳ ನಾಯಕರ ಪಟ್ಟಿಯನ್ನು ಕಾಂಗ್ರೆಸ್ ಸಿದ್ಧಪಡಿಸಿದ್ದು, ಅವರು ಮಹಾರಾಷ್ಟ್ರ ಗಡಿಭಾಗದ ಆರು ಜಿಲ್ಲೆಗಳಲ್ಲಿ ಕಾಂಗ್ರೆಸ್ ಪರವಾಗಿ ಪ್ರಚಾರ ಮಾಡುವಂತೆ ಸೂಚಿಸಲಾಗಿದೆ. ದೀಪಾವಳಿ ಹಬ್ಬ ಆಚರಣೆ ಈಗ ಮುಗಿದಿದ್ದು, ಪ್ರಚಾರ ಮುಗಿಯುವವರೆಗೂ ಈ ನಾಯಕರು ಮಹಾರಾಷ್ಟ್ರದಲ್ಲಿ ಬೀಡು ಬಿಡಲಿರುವ ಹಿನ್ನೆಲೆಯಲ್ಲಿ ಹಲವು ಕಾಂಗ್ರೆಸ್ ನಾಯಕರು ಒಂದೆರೆಡು ದಿನದಲ್ಲಿ ತಮಗೆ ವಹಿಸಿರುವ ಜಿಲ್ಲೆಗಳಿಗೆ ತೆರಳಲಿದ್ದಾರೆ. ಅಲ್ಲಿ ಎನ್‌ಡಿಎ ಮೈತ್ರಿಕೂಟ ವಿರುದ್ಧ ಚುನಾವಣೆ ಎದುರಿಸುತ್ತಿರುವ ಮಹಾ ವಿಕಾಸ್ ಅಘಾಡಿ (MVA) ಮೈತ್ರಿಯಲ್ಲಿ ಕಾಂಗ್ರೆಸ್ ಪ್ರಮುಖ ಪಾಲುದಾರ ಪಕ್ಷವಾಗಿದೆ.

ಸದ್ಯ ಮಹಾರಾಷ್ಟ್ರದಲ್ಲಿ ಎನ್‌ಡಿಎ ಮೈತ್ರಿಕೂಟ ಅಧಿಕಾರದಲ್ಲಿದೆ. ಮಹಾರಾಷ್ಟ್ರದಲ್ಲಿ ನೆಲೆಸಿರುವ ಕನ್ನಡಿಗ ಮತದಾರರನ್ನು ಓಲೈಸಲು ಮರಾಠಿ ಮಾತನಾಡಬಲ್ಲ ಉತ್ತರ ಕರ್ನಾಟಕದ ನಾಯಕರನ್ನು ಬಿಜೆಪಿ ಕೂಡ ಪ್ರಚಾರಕ್ಕೆ ಕಳುಹಿಸುತ್ತಿದೆ.

ಈಗಾಗಲೇ ಮಹಾರಾಷ್ಟ್ರ ಮತ್ತು ಕರ್ನಾಟಕದ ಗಡಿ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳು ಸಭೆ ನಡೆಸಿ ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ಮದ್ಯ ಪೂರೈಕೆಯಾಗದಂತೆ ತಡೆಯಲು ಮತ್ತು ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ಸಮಾಜವಿರೋಧಿಗಳು ಪ್ರವೇಶವನ್ನು ತಡೆಯಲು ಕಾರ್ಯತಂತ್ರಗಳನ್ನು ರೂಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

SCROLL FOR NEXT