ಡಿಕೆ ಸುರೇಶ್-ಎಚ್ ಡಿ ಕುಮಾರಸ್ವಾಮಿ 
ರಾಜಕೀಯ

ಚನ್ನಪಟ್ಟಣ ಉಪಚುನಾವಣೆ: ಕುಮಾರಸ್ವಾಮಿ ಆಡಿಯೋ ಹರಿಬಿಟ್ಟ ಡಿಕೆ ಸುರೇಶ್; ಡಿಕೆ ಸಹೋದರರೇ ಸಿಡಿ ಪ್ಲೇಯರ್ಸ್ ಎಂದ HDK

ಅಭಿವೃದ್ಧಿಗೆ ಜನ ಮತ ಹಾಕಲ್ಲ, ಎಂಟು ದಿನದ ಹಿಂದೆ ಜನರ ಬಳಿ ಹೋಗಬೇಕು. ಚುನಾವಣಾ ತಂತ್ರ ಮಾಡಬೇಕು ಎಂದು ಆಗಿನ ಸಿಎಂ ಆಗಿದ್ದ ಕುಮಾರಸ್ವಾಮಿ ಹೇಳಿದ್ದರು ಎಂದು ಡಿಕೆ ಸುರೇಶ್ ವ್ಯಂಗ್ಯವಾಡಿದ್ದಾರೆ.

ರಾಮನಗರ: ಚನ್ನಪಟ್ಟಣ ಉಪಚುನಾವಣೆ ಕಣದಲ್ಲಿ ಕಾಂಗ್ರೆಸ್​ ಮತ್ತು ಎನ್​ಡಿಎ ನಾಯಕರು ಆರೋಪ-ಪ್ರತ್ಯಾರೋಪಗಳಲ್ಲಿ ನಿರತರಾಗಿದ್ದಾರೆ. ಎಚ್ ಡಿ ಕುಮಾರಸ್ವಾಮಿ ರಾಜಿನಾಮೆಯಿಂದ ತೆರವಾಗಿದ್ದ ಕ್ಷೇತ್ರವನ್ನು ಉಳಿಸಿಕೊಳ್ಳಲು ಎನ್​ಡಿಎ ಕಸರತ್ತು ನಡೆಸಿದೆ.

ಈ ಮಧ್ಯೆ ಮಾಜಿ ಸಂಸದ ಡಿಕೆ ಸುರೇಶ್ ಅವರು ಕುಮಾರಸ್ವಾಮಿಯವರ ಆಡಿಯೋ ಸಿಡಿಯೊಂದನ್ನು ಬಿಡುಗಡೆ ಮಾಡಿದ್ದಾರೆ. ಮತದಾರರ ಬಳಿ ಹೆಚ್ಚಾಗಿ ಹೋಗಬಾರದು. ಮತದಾನಕ್ಕೆ ಕೆಲ ದಿನ ಇರುವಾಗ ಹೋಗಿ ಪ್ರಚಾರ ಮಾಡಬೇಕು ಎಂದು ಕುಮಾರಸ್ವಾಮಿ ಈ ಹಿಂದೆ ಹೇಳಿದ್ದ ಆಡಿಯೋ ಸಿಡಿಯೊಂದನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಿ ಟೀಕಿಸಿದ್ದಾರೆ.

ಅಭಿವೃದ್ಧಿಗೆ ಜನ ಮತ ಹಾಕಲ್ಲ, ಎಂಟು ದಿನದ ಹಿಂದೆ ಜನರ ಬಳಿ ಹೋಗಬೇಕು. ಚುನಾವಣಾ ತಂತ್ರ ಮಾಡಬೇಕು ಎಂದು ಆಗಿನ ಸಿಎಂ ಆಗಿದ್ದ ಕುಮಾರಸ್ವಾಮಿ ಹೇಳಿದ್ದರು ಎಂದು ಡಿಕೆ ಸುರೇಶ್ ವ್ಯಂಗ್ಯವಾಡಿದ್ದಾರೆ.

ಈ ಆಡಿಯೋ ರಿಲೀಸ್ ಮಾಡಿರುವುದಕ್ಕೆ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಡಿ ಆಡಿಯೋ, ವಿಡಿಯೋ ಬಿಡುವಂತ ಪರಿಣಿತರಿವರು. ಅವರನ್ನು ಹಿಡಿಯಲು ಆಗುತ್ತಾ? ಆಡಿಯೋ ನಾನು ವಿಧಾನಸಭೆಯಲ್ಲಿ ಮಾತನಾಡಿದ್ದು ಎಂದು ಸ್ಪಷ್ಟಪಡಿಸಿದರು.

ಇನ್ನು ಈ ಆಡಿಯೋವನ್ನು ಒಂದು ವಾರದಿಂದ ಕಟಿಂಗ್ ಮಾಡಿ ಹಂಚುತ್ತಿದ್ದಾರೆ. ಅದು ನನ್ನ ಹೇಳಿಕೆಯಲ್ಲ. ವಾಸ್ತವ ಪರಿಸ್ಥಿತಿ ಬಗ್ಗೆ ಮಾತನಾಡಿದ್ದು, ಮದ್ದೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿಚಾರವಾಗಿ ಹೇಳಿದ್ದೆ ಎಂದು ಹೇಳಿರುವ ಕುಮಾರಸ್ವಾಮಿ, ನನ್ನ ಚುನಾವಣೆಯಲ್ಲಿ ಕಾರ್ಯಕರ್ತರೇ ಮತ ಕೇಳುತ್ತಾರೆ. ನಾನು ಆ ರೀತಿ ಮಾತನಾಡುವ ಅವಶ್ಯಕತೆ ಇಲ್ಲ. ಇಂದಿನ ರಾಜಕೀಯ ಪರಿಸ್ಥಿತಿಯಲ್ಲಿ ಉತ್ತಮ ಕೆಲಸ ಮಾಡಿದವರು ಇಂತವರಿಂದ ನಗಣ್ಯ ಆಗುತ್ತಾರೆ ಎನ್ನುವ ಹಿನ್ನೆಲೆಯಲ್ಲಿ ಹೇಳಿದ್ದೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

Idre Nemdiyaag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

SCROLL FOR NEXT