ಆರ್. ಅಶೋಕ್ 
ರಾಜಕೀಯ

ಅಬಕಾರಿ ಸಚಿವರಿಂದ ವಾರಕ್ಕೆ 18 ಕೋಟಿ ರೂ ಹಫ್ತಾ ವಸೂಲಿ: ಆರ್ ಅಶೋಕ್ ಆರೋಪ

ಅಬಕಾರಿ ಸಚಿವರ ಹಫ್ತಾ ವಸೂಲಿ ಬಗ್ಗೆ ಮದ್ಯದಂಗಡಿ ಮಾಲೀಕರೇ ರಾಜ್ಯಪಾಲರಿಗೆ ದೂರು ಕೊಟ್ಟಿದ್ದಾರೆ. ರಾಜ್ಯದಲ್ಲಿ 11 ಸಾವಿರಕ್ಕೂ ಹೆಚ್ಚು ವೈನ್ ಸ್ಟೋರ್​​ಗಳಿವೆ.

ಬೆಂಗಳೂರು: ಈ ಹಿಂದೆ ಬೆಂಗಳೂರಿನಲ್ಲಿ ರೌಡಿಗಳು ಹಫ್ತಾ ವಸೂಲಿ ಮಾಡುತ್ತಿದ್ದರು. ಆದರೆ ಈಗ ಅಬಕಾರಿ ಸಚಿವರೇ ಹಫ್ತಾ ವಸೂಲಿಗೆ ಇಳಿದಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಅವರು ಬುಧವಾರ ಆರೋಪಿಸಿದ್ದಾರೆ.

ರಾಜ್ಯ ಅಬಕಾರಿ ಇಲಾಖೆಯು ಮದ್ಯದಂಗಡಿಗಳಿಂದ ‘ಮಂಥ್ಲಿ ಮನಿ’ ಹೆಸರಿನಲ್ಲಿ ಲಂಚ ಪಡೆಯುತ್ತಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಇಂದು ಸುದ್ದಿಗೋಷ್ಠಿ ನಡೆಸಿದ ಆರ್ ಅಶೋಕ್ ಅವರು, ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರ ಅವರು ಮದ್ಯದಂಗಡಿಗಳಿಂದ ವಾರಕ್ಕೆ 18 ಕೋಟಿ ರೂ. ಹಫ್ತಾ ವಸೂಲಿ ಮಾಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.

ಅಬಕಾರಿ ಸಚಿವರ ಹಫ್ತಾ ವಸೂಲಿ ಬಗ್ಗೆ ಮದ್ಯದಂಗಡಿ ಮಾಲೀಕರೇ ರಾಜ್ಯಪಾಲರಿಗೆ ದೂರು ಕೊಟ್ಟಿದ್ದಾರೆ. ರಾಜ್ಯದಲ್ಲಿ 11 ಸಾವಿರಕ್ಕೂ ಹೆಚ್ಚು ವೈನ್ ಸ್ಟೋರ್​​ಗಳಿವೆ. ಪ್ರತಿಯೊಂದರಿಂದ 20 ಸಾವಿರ ರೂ. ವಸೂಲಿ ಮಾಡುತ್ತಿದ್ದಾರೆ ಎಂದು ಅಶೋಕ್ ಆರೋಪಿಸಿದರು.

ನಮ್ಮ ವಿರುದ್ಧ ಹಿಂದೆ ಪೇಸಿಎಂ ಪೋಸ್ಟರ್ ಅಂಟಿಸಿದ್ದಿರಿ. ಆಗ ನಾವು ನಿಮ್ಮನ್ನು ಸನ್ಮಾನ ಮಾಡಲು ಆಗಲಿಲ್ಲ. ಈಗ ಪೇಸಿಎಂ ಪೋಸ್ಟರ್ ಅಂಟಿಸಿದಾಗ ಹೇಳಿ ಬಂದು ಸನ್ಮಾನ ಮಾಡುತ್ತೇವೆ ಎಂದು ಅಶೋಕ್ ವ್ಯಂಗ್ಯವಾಡಿದರು.

ಲೋಕಾಯುಕ್ತ ಅಧಿಕಾರಿಗಳಿಂದ ಸಿದ್ದರಾಮಯ್ಯ ವಿಚಾರಣೆ ವಿಚಾರವಾಗಿ ಪ್ರತಿಕ್ರಿಯಿಸಿದ ಅಶೋಕ್, ಈ ಸರ್ಕಾರದಲ್ಲಿ ಪ್ರತಿ ನಿತ್ಯ ಒಬ್ಬರಲ್ಲ ಒಬ್ಬ ಸಚಿವರು ಲೂಟಿ ಹೊಡೆಯುತ್ತಿದ್ದಾರೆ. 40 ವರ್ಷದ ರಾಜಕೀಯ ಜೀವನ ತೆರೆದ ಪುಸ್ತಕ ಎಂದಿದ್ದರು. ತೆರೆದ ಪುಸ್ತಕ ಎಂದವರು ಲೋಕಾಯುಕ್ತ ವಿಚಾರಣೆಗೆ ಹೋಗಿದ್ದಾರೆ. ಮುಖ್ಯಮಂತ್ರಿ ಆಗಿ ವಿಚಾರಣೆ ಎದುರಿಸುತ್ತಿದ್ದಾರೆ. ನಾಚಿಕೆ ಆಗಲ್ವಾ ಎಂದು ವಾಗ್ದಾಳಿ ನಡೆಸಿದರು,

ಬೆಳಗ್ಗೆ ವಿಚಾರಣೆ ಅಂತೆ, ಮಧ್ಯಾಹ್ನ ಪ್ರಚಾರ ಅಂತೆ. ಸಿಎಂ ಮೊದಲೇ ಟೈಮ್ ಫಿಕ್ಸ್ ಮಾಡಿಕೊಂಡು ಹೋಗಿದ್ದಾರೆ. ಇದೇನು ಮ್ಯಾಚ್ ಫಿಕ್ಸಿಂಗ್ ಕೇಸಾ? ತನಿಖಾಧಿಕಾರಿಗಳು ಎಷ್ಟು ಹೊತ್ತು ವಿಚಾರಣೆ ನಡೆಸ್ತಾರೆಂದು ಇವರಿಗೆ ಗೊತ್ತಾ? ಇವರೇ ಲೋಕಾಯುಕ್ತ ವಿಚಾರಣೆಗೆ ಸಮಯ ನಿಗದಿ ಮಾಡಿದ್ದಾರಾ? ಎಂದು ಅಶೋಕ್ ಪ್ರಶ್ನಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಿಂಧು ಜಲ ಒಪ್ಪಂದ ರದ್ದಾದರೆ ಜಾಗತಿಕ ವ್ಯವಸ್ಥೆಯೇ ಕುಸಿಯಲಿದೆ': 'ದಯಮಾಡಿ ನೆರವು ನೀಡಿ' ಜಗತ್ತಿಗೆ ಪಾಕಿಸ್ತಾನ ಮನವಿ

‘ಸಿಯಾ ಸಿಗ್ನಲ್ ಕೊಟ್ಟಳು, ಇಬ್ಬರೂ ಸೇರಿ ಕೇತನ್‌ನನ್ನು ತಳ್ಳಿದೆವು’: ಲೋಹಗಢ ಕೋಟೆಯಲ್ಲಿ ಕೊಲೆ ದೃಶ್ಯ ಮರುಸೃಷ್ಟಿ ವೇಳೆ ಆರೋಪಿ ಪ್ರಿಯಕರ ಚೇತನ್!

'ಸುರಕ್ಷಿತ ಪಾದಚಾರಿ ಮಾರ್ಗ' ಅಭಿಯಾನ: ಬೆಂಗಳೂರಿನಲ್ಲಿ ಪಾದಚಾರಿ ಮಾರ್ಗಗಳ ಮೇಲಿನ ಅತಿಕ್ರಮಣ ತೆರವು ಆರಂಭಿಸಿದ GBA, Video

29 ವರ್ಷಗಳ ನಂತರ ‘ಅಮೆರಿಕಾ ಅಮೆರಿಕಾ 2’ ಚಿತ್ರ ಘೋಷಿಸಿದ ನಾಗತಿಹಳ್ಳಿ ಚಂದ್ರಶೇಖರ್; ನಾಯಕ, ನಾಯಕಿ ಯಾರೂ?

ಮಹುವಾ ಮೊಯಿತ್ರಾ ಮೇಲೆ ಮೊಟ್ಟೆ ಎಸೆದ ಬಿಜೆಪಿ ಕಾರ್ಯಕರ್ತರು; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ ಎಂದ TMC ಸಂಸದೆ!