ಧರಣಿ ಅಂತ್ಯ 
ರಾಜಕೀಯ

JPC ಅಧ್ಯಕ್ಷರಿಂದ ವಕ್ಫ್ ಕಾಯ್ದೆಗೆ ತಿದ್ದುಪಡಿ ಭರವಸೆ: ಯತ್ನಾಳ್ ಅನಿರ್ದಿಷ್ಟಾವಧಿ ಧರಣಿ ಅಂತ್ಯ

ಇಂದು ಧರಣಿ ಸ್ಥಳಕ್ಕೆ ಜಂಟಿ ಸಂಸದೀಯ ಸಮಿತಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಹಾಗೂ ಜೆಪಿಸಿ ಸದಸ್ಯ ತೇಜಸ್ವಿ ಸೂರ್ಯ ಅವರು ಭೇಟಿ ನೀಡಿದರು.

ವಿಜಯಪುರ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನೇತೃತ್ವದಲ್ಲಿ 'ವಕ್ಫ್ ಹಠಾವೋ, ದೇಶ ಬಚಾವೋ' ಎಂಬ ಘೋಷಣೆಯೊಂದಿಗೆ ವಿಜಯಪುರ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಕಳೆದ ನಾಲ್ಕು ದಿನಗಳಿಂದ ನಡೆಯುತ್ತಿದ್ದ ಅನಿರ್ದಿಷ್ಟಾವಧಿ ಧರಣಿ ಗುರುವಾರ ಅಂತ್ಯವಾಗಿದೆ.

ಇಂದು ಧರಣಿ ಸ್ಥಳಕ್ಕೆ ಜಂಟಿ ಸಂಸದೀಯ ಸಮಿತಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಹಾಗೂ ಜೆಪಿಸಿ ಸದಸ್ಯ ತೇಜಸ್ವಿ ಸೂರ್ಯ ಅವರು ಭೇಟಿ ನೀಡಿ, ವಕ್ಪ್ ಬೋರ್ಡ್ ಸಮಸ್ಯೆ ಆಲಿಸಿ ಅಹವಾಲು ಸ್ವೀಕರಿಸಿದರು. ಅಲ್ಲದೆ ಎಲ್ಲಾ ಸಮಸ್ಯೆಗಳಿಗೆ ಹೊಸ ವಕ್ಪ್ ತಿದ್ದುಪಡಿ ಕಾಯ್ದೆ ಮೂಲಕ ಪರಿಹಾರ ನೀಡುವ ಭರವಸೆ ನೀಡಿದ ನಂತರ ಧರಣಿ ಹಿಂಪಡೆಯಲಾಯಿತು.

ಈ ವೇಳೆ ಮಾತನಾಡ ಪಾಲ್ ಅವರು, ಜೆಪಿಸಿ ಮೂಲಕ ವಕ್ಪ್ ಕಾಯ್ದೆಗೆ ಪಾರದರ್ಶಕ ತಿದ್ದುಪಡಿ ತರಲಾಗುವುದು. ಮುಂದಿನ ಚಳಿಗಾಲದ ಅಧಿವೇಶನದಲ್ಲಿ ಈ ಮಸೂದೆಯನ್ನು ಮಂಡಿಸಲಾಗುವುದು. ಭವಿಷ್ಯದಲ್ಲಿ ವಕ್ಪ್ ನಿಂದ ರೈತರಿಗೆ, ಮಠ, ಮಂದಿರ, ಐತಿಹಾಸಿಕ ಸ್ಮಾರಕ ಸೇರಿದಂತೆ ಯಾರಿಗೂ ತೊಂದರೆಯಾಗದಂತೆ ಅಗತ್ಯ ತಿದ್ದುಪಡಿ ತರಲು ಜೆಪಿಸಿ ಪೂರಕ ಸಲಹೆ ನೀಡಲಿದೆ ಎಂದು ಹೇಳಿದರು.

ಅಗತ್ಯಬಿದ್ದರೆ ರೈತರಿಗೆ ನೋಟಿಸ್ ನೀಡಿರುವ ಜಿಲ್ಲಾಧಿಕಾರಿಗಳು, ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ವಕ್ಫ್ ಬೋರ್ಡ್ ಅಧಿಕಾರಿಗಳನ್ನು ದೆಹಲಿಗೆ ಕರೆಯಿಸಿ ವಿಚಾರಣೆಗೆ ಒಳಪಡಿಸಲಾಗುವುದು ಎಂದು ಪಾಲ್ ಎಚ್ಚರಿಕೆ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್