ಶಾಸಕ ರಮೇಶ್ ಬಂಡಿಸಿದ್ದೇಗೌಡ 
ರಾಜಕೀಯ

ಜಮೀರ್​ರಿಂದ ಆ ಮಾತನ್ನು ಕುಮಾರಸ್ವಾಮಿ ಹೇಳಿಸಿರಬೇಕು: ಕಾಂಗ್ರೆಸ್ ಶಾಸಕ ರಮೇಶ್ ಬಂಡಿಸಿದ್ದೇಗೌಡ ಹೊಸ ಬಾಂಬ್

ಕುಮಾರಸ್ವಾಮಿ- ಜಮೀರ್ ಅಹ್ಮದ್ ಖಾನ್ ಗಳಸ್ಯ- ಕಂಠಸ್ಯ, ಅವರಿಬ್ಬರೂ ಚೆನ್ನಾಗಿದ್ದಾರೆ. ಕರಿಯ ಅಂತ ಜಮೀರ್ ಬಾಯಲ್ಲಿ ಕುಮಾರಸ್ವಾಮಿಯೇ ಹೇಳಿಸಿರಬಹುದು.

ಬೆಂಗಳೂರು: ಚನ್ನಪಟ್ಟಣ ಉಪ ಚುನಾವಣೆ ಪ್ರಚಾರದ ವೇಳೆಯಲ್ಲಿ ಜಮೀರ್ ಆಡಿದ್ದ ಮಾತೇ ಕಾಂಗ್ರೆಸ್ ಪಕ್ಷಕ್ಕೆ ಮುಳುವಾಗುತ್ತೆಂಬ ಚರ್ಚೆ ಶುರುವಾಗಿದೆ. ದೇವೇಗೌಡರ ಕುಟುಂಬವನ್ನ ಖರೀದಿಸ್ತೀವಿ. ಕರಿಯಾ ಎಂದು ಜಮೀರ್ ನೀಡಿದ್ದ ಹೇಳಿಕೆಗಳಿಂದ ಒಕ್ಕಲಿಗ ಸಮುದಾಯದ ಮತಗಳು ಕೈ ತಪ್ಪಿವೆ ಎಂಬಂತಹ ಮಾತುಗಳನ್ನು ಸ್ವತ: ಸಿ. ಪಿ. ಯೋಗೇಶ್ವರ್ ಅವರೇ ಹೇಳಿದ್ದಾರೆ.

ಮತ್ತೊಂದೆಡೆ ಜಮೀರ್ ಹೇಳಿಕೆ ಖಂಡಿಸಿ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ತೀವ್ರ ವಾಗ್ದಾಳಿ ನಡೆಸುತ್ತಿದ್ದಾರೆ.

ಈ ನಡುವೆ ಕಾಂಗ್ರೆಸ್ ನಾಯಕ ರಮೇಶ್ ಬಂಡಿಸಿದ್ದೇಗೌಡ ನೀಡಿರುವ ಹೊಸ ಬಾಂಬ್ ಸಿಡಿಸಿದ್ದಾರೆ. ಕುಮಾರಸ್ವಾಮಿ- ಜಮೀರ್ ಅಹ್ಮದ್ ಖಾನ್ ಗಳಸ್ಯ- ಕಂಠಸ್ಯ, ಅವರಿಬ್ಬರೂ ಚೆನ್ನಾಗಿದ್ದಾರೆ. ಕರಿಯ ಅಂತ ಜಮೀರ್ ಬಾಯಲ್ಲಿ ಕುಮಾರಸ್ವಾಮಿಯೇ ಹೇಳಿಸಿರಬಹುದು ಎಂದರು.

ಉಪ ಚುನಾವಣೆ ನಡೆದ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ. ಚನ್ನಪಟ್ಟಣದಲ್ಲಿ ಪಕ್ಷದ ಅಭ್ಯರ್ಥಿ ಸಿಪಿ ಯೋಗೇಶ್ವರ್ ಗೆ ಅವರದೇ ಆದ ಮತಗಳಿವೆ. ಅವರನ್ನು ಜನ ಇಷ್ಟಪಟ್ಟಿದ್ದು, ಗೆದ್ದೇ ಗೆಲ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಒಕ್ಕಲಿಗ ಪ್ರಾಬಲ್ಯದ ಚನ್ನಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದರೆ ಸಿಎಂ ಹುದ್ದೆ ರೇಸ್ ನಲ್ಲಿರುವ ಡಿಸಿಎಂ ಡಿಕೆ ಶಿವಕುಮಾರ್ ಪ್ರಾಬಲ್ಯ ಹೆಚ್ಚಾಗುವ ಆತಂಕದಲ್ಲಿ ಸಿಎಂ ಆಪ್ತರಾಗಿರುವ ಜಮೀರ್ ಅಹ್ಮದ್ ಖಾನ್ ಅವರಿಂದ ಉದ್ದೇಶಪೂರ್ವಕವಾಗಿಯೇ ಕರಿಯ ಎಂಬಂತಹ ಹೇಳಿಕೆ ನೀಡಿಸಲಾಗಿದೆ ಎಂಬಂತಹ ಮಾತುಗಳು ಕೇಳಿಬರುತ್ತಿವೆ. ಒಟ್ಟಾರೇ ಫಲಿತಾಂಶ ತಿಳಿಯಲು ನವೆಂಬರ್ 23ರವರೆಗೂ ಕಾಯಬೇಕಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT