ಯೋಗೇಶ್ವರ್, ನಿಖಿಲ್, ಭರತ್ ಮತ್ತು ಬಂಗಾರು ಹನುಮಂತ್ 
ರಾಜಕೀಯ

ಉಪಚುನಾವಣೆ ಫಲಿತಾಂಶಕ್ಕೆ 48 ಗಂಟೆ ಬಾಕಿ: ಅವುಡು ಕಚ್ಚಿ ಕುಳಿತ ಅಭ್ಯರ್ಥಿಗಳು; ಚನ್ನಪಟ್ಟಣ-ಶಿಗ್ಗಾಂವಿಯಲ್ಲಿ ಫೋಟೋ ಫಿನಿಶ್‌ ರಿಸಲ್ಟ್!

ಎರಡು ಸ್ಥಾನಗಳಲ್ಲಿ ಪ್ರಬಲ ಸ್ಪರ್ಧೆಯಿದ್ದು ಫಲಿತಾಂಶದ ಲೆಕ್ಕಾಚಾರ ತಲೆಕೆಳಗಾಗುವ ಸಾಧ್ಯತೆಯಿದೆ ಎಂದು ರಾಜಕೀಯ ವಿಶ್ಲೇಷಕರು ಹೇಳಿದ್ದಾರೆ. ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ತಲಾ ಒಂದನ್ನು ಗೆಲ್ಲುವ ಸಾಧ್ಯತೆಯಿದೆ ಎಂಬುದು ರಾಜಕೀಯ ಪಂಡಿತರ ಅಭಿಪ್ರಾಯ.

ಬೆಂಗಳೂರು: ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾಂವಿ ಕ್ಷೇತ್ರ ಗಳಿಗೆ ನಡೆದ ಉಪಚುನಾವಣೆಯ ಮತ ಎಣಿಕೆ ಶನಿವಾರ ನಡೆಯಲಿದೆ. ಉಪಚುನಾವಣೆ ಫಲಿತಾಂಶ ಪ್ರಕಟವಾಗಲು ಇನ್ನು 48 ಗಂಟೆ ಬಾಕಿ ಉಳಿದಿದ್ದು, ಕಾಂಗ್ರೆಸ್ ಪಾಳಯದಲ್ಲಿ ಉತ್ಸಾಹ ಮೂಡಿದ್ದು, ಮೂರೂ ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಲ್ಲಿದೆ.

ಎರಡು ಸ್ಥಾನಗಳಲ್ಲಿ ಪ್ರಬಲ ಸ್ಪರ್ಧೆಯಿದ್ದು ಫಲಿತಾಂಶದ ಲೆಕ್ಕಾಚಾರ ತಲೆಕೆಳಗಾಗುವ ಸಾಧ್ಯತೆಯಿದೆ ಎಂದು ರಾಜಕೀಯ ವಿಶ್ಲೇಷಕರು ಹೇಳಿದ್ದಾರೆ. ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ತಲಾ ಒಂದನ್ನು ಗೆಲ್ಲುವ ಸಾಧ್ಯತೆಯಿದೆ ಎಂಬುದು ರಾಜಕೀಯ ಪಂಡಿತರ ಅಭಿಪ್ರಾಯ.

ನವೆಂಬರ್ 13 ರಂದು ಮತದಾನ ನಡೆದಿದ್ದು, ನ.23 ರಂದು ಮತ ಎಣಿಕೆ ನಡೆಯಲಿದೆ. ಸಂಡೂರಿನಲ್ಲಿ ಬಿಜೆಪಿಯಲ್ಲಿನ ಆಂತರಿಕ ಕಚ್ಚಾಟವನ್ನು ಕಾಂಗ್ರೆಸ್ ಲಾಭವಾಗಿಸಿಕೊಂಡಿದೆ. ಬಿಜೆಪಿ ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಸಂಡೂರು ಉಪ ಚುನಾವಣೆ ಗೆಲ್ಲುವ ಜವಾಬ್ದಾರಿಯನ್ನು ನೀಡಿತ್ತು. ಆದರೆ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಸ್ಥಳೀಯ ಕೆಲ ಮುಖಂಡರ ಮನಗೆದ್ದಿಲ್ಲ ಎಂಬ ಆರೋಪ ಕೇಳಿ ಬಂದಿದೆ.

ಬಳ್ಳಾರಿ ಸಂಸದ ಇ.ತುಕಾರಾಂ ಅವರ ಪತ್ನಿ, ಕಾಂಗ್ರೆಸ್ ಅಭ್ಯರ್ಥಿ ಇ ಅನ್ನಪೂರ್ಣ ಅವರಿಗೆ ಇದು ವರವಾಗಿದೆ ಎಂದು ಕಾಂಗ್ರೆಸ್ ಮುಖಂಡರೊಬ್ಬರು ವಿಶ್ವಾಸ ವ್ಯಕ್ತಪಡಿಸಿದರು. ಬಿಜೆಪಿಯ ಬಂಗಾರು ಹನುಮಂತು ಪ್ರಬಲ ಪೈಪೋಟಿ ನೀಡಿದ್ದರೂ ಬೆಟ್ಟಿಂಗ್ ಕಟ್ಟುವವರಿಗೆ ಅನ್ನಪೂರ್ಣ ಫೇವರಿಟ್ ಆಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇನ್ನೂ ಶಿಗ್ಗಾಂವಿಯಲ್ಲಿ ಚುನಾವಣಾ ಸನ್ನಿವೇಶ ಸಂಪೂರ್ಣ ಬದಲಾಗಿದೆ. ಆರಂಭದಲ್ಲಿ ಭರತ್ ಪರವಾಗಿ ಏಕಪಕ್ಷೀಯವಾಗಿ ಕಾಣುತ್ತಿದ್ದ ಸ್ಪರ್ಧೆ ಕ್ರಮೇಣ ಟ್ವಿಸ್ಟ್ ಪಡೆಯಿತು. ಈ ಹಿಂದೆ ಕಾಂಗ್ರೆಸ್‌ನ ಮತ್ತೋರ್ವ ಆಕಾಂಕ್ಷಿಯಾಗಿದ್ದ ಸೈಯದ್‌ ಅಜೀಂಪೀರ್‌ ಖಾದ್ರಿ ಅವರಿಗೆ ಟಿಕೆಟ್‌ ನೀಡದಿದ್ದಕ್ಕೆ ಬೇಸರಗೊಂಡಿದ್ದರು, ಆದರೆ ನಂತರ ಬಿಜೆಪಿಯಲ್ಲಿ ಆಂತರಿಕ ಕಚ್ಚಾಟ ನಡೆದಿದ್ದರಿಂದ ಪರಿಸ್ಥಿತಿ ಕಾಂಗ್ರೆಸ್‌ ಪರವಾಗಿ ತಿರುಗಿತು ಎಂದು ಮೂಲಗಳು ತಿಳಿಸಿವೆ.

2024ರ ಲೋಕಸಭೆ ಚುನಾವಣೆಯಲ್ಲಿ ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಒಳಪಡುವ ಬೊಮ್ಮಾಯಿ ಅವರಿದ್ದ ಶಿಗ್ಗಾಂವ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ 8,500 ಮತಗಳ ಮುನ್ನಡೆ ಸಾಧಿಸಿತ್ತು. ಆದರೆ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಗೆಲುವು ಸಾಧಿಸುವಲ್ಲಿ ಯಶಸ್ವಿಯಾದರು. ಇದೇ ರೀತಿ ಮುಂದುವರಿದರೆ ಶಿಗ್ಗಾಂವ್‌ನಲ್ಲಿ ಫೋಟೊ ಫಿನಿಶ್ ಆಗಲಿದೆ ಎಂದು ಬಲ್ಲ ಮೂಲಗಳು ತಿಳಿಸಿವೆ. ಚನ್ನಪಟ್ಟಣದಲ್ಲಿ ಕಾಂಗ್ರೆಸ್‌ನ ಸಿ ಪಿ ಯೋಗೇಶ್ವರ್ ಮತ್ತು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಮೊಮ್ಮಗ ಹಾಗೂ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ನಡುವಿನ ಹೈವೋಲ್ಟೇಜ್ ಫೈಟ್ ಫೋಟೋ ಫಿನಿಶ್‌ನಲ್ಲಿ ಕೊನೆಗೊಳ್ಳುವ ಸಾಧ್ಯತೆ ಇದೆ. ಯೋಗೇಶ್ವರ ಅವರೇ ಈ ಬಗ್ಗೆ ಭವಿಷ್ಯ ನುಡಿದಿದ್ದರು.

ವಸತಿ ಸಚಿವ ಝಮೀರ್ ಅಹ್ಮದ್ ಖಾನ್ ಅವರು ಕುಮಾರಸ್ವಾಮಿ ವಿರುದ್ಧ ಮಾಡಿದ ಜನಾಂಗೀಯ ನಿಂದನೆ ಹೇಳಿಕೆಗಳು ಫಲಿತಾಂಶದ ಮೇಲೆ ಪರಿಣಾಮ ಬೀರಿದೆಯೇ, ಅದು ನಿಖಿಲ್ ಅಥವಾ ಯೋಗೇಶ್ವರ ಅವರಿಗೆ ಒಲವು ತೋರಿದೆಯೇ ಎಂಬುದು ಫಲಿತಾಂಶದ ನಂತರ ತಿಳಿಯಲಿದೆ. 2023 ರ ವಿಧಾನಸಭಾ ಚುನಾವಣೆ ಫಲಿತಾಂಶ ಗಮನಿಸಿದರೇ ಎಲ್ಲಾ ಮೂರು ಪಕ್ಷಗಳು ತಲಾ ಒಂದು ಸ್ಥಾನವನ್ನು ಗೆಲ್ಲುವ ಸಾಧ್ಯತೆಯಿದೆ ಎಂದು ರಾಜಕೀಯ ವಿಶ್ಲೇಷಕರು ಹೇಳಿದ್ದಾರೆ. ಸಂಡೂರು ಹೊರತು ಪಡಿಸಿ ಶಿಗ್ಗಾಂವ್ ಮತ್ತು ಚನ್ನಪಟ್ಟಣದಲ್ಲಿ ಎನ್ ಡಿ ಎ ಅಭ್ಯರ್ಥಿ ಗೆಲ್ಲಬಹುದು ಎಂದು ಬಿಜೆಪಿ ನಾಯಕರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT