ಮಧು ಬಂಗಾರಪ್ಪ, ಕೆ,ಎನ್ ರಾಜಣ್ಣ ಮತ್ತು ಎಂ.ಸಿ ಸುಧಾಕರ್ 
ರಾಜಕೀಯ

ಅಧಿವೇಶನದ ನಂತರ ಸಂಪುಟ ಪುನಾರಚನೆ: ಹಲವರಿಗೆ ಕೊಕ್; ಹಿಟ್ ಲಿಸ್ಟ್ ನಲ್ಲಿ ಮಧು, ರಾಜಣ್ಣ, ಸುಧಾಕರ್!

ಮುಡಾ ಹಗರಣ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರೇ ಹಿನ್ನಡೆ ಎದುರಿಸುತ್ತಿದ್ದಾರೆ. ಅದರ ಜೊತೆಗೆ ಅವರ ಸಂಪುಟದ ಕೆಲವು ಸಹೋದ್ಯೋಗಿಗಳು ಸಹ ಹಗರಣಗಳಲ್ಲಿ ಭಾಗಿಯಾಗಿರುವುದರಿಂದ ಆಕಾಂಕ್ಷಿಗಳು ಆಶಾದಾಯಕರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬೆಂಗಳೂರು: ಸಂಪುಟ ಪುನಾರಚನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಒತ್ತಡ ಹೆಚ್ಚಾಗುವ ಸಾಧ್ಯತೆಯಿದೆ, ಹನ್ನೆರಡು ಆಕಾಂಕ್ಷಿಗಳು ಸಚಿವ ಸ್ಥಾನ ನೀಡುವಂತೆ ಒತ್ತಡ ಹೇರುತ್ತಿದ್ದಾರೆ.

ಮುಡಾ ಹಗರಣ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರೇ ಹಿನ್ನಡೆ ಎದುರಿಸುತ್ತಿದ್ದಾರೆ. ಅದರ ಜೊತೆಗೆ ಅವರ ಸಂಪುಟದ ಕೆಲವು ಸಹೋದ್ಯೋಗಿಗಳು ಸಹ ಹಗರಣಗಳಲ್ಲಿ ಭಾಗಿಯಾಗಿರುವುದರಿಂದ ಆಕಾಂಕ್ಷಿಗಳು ಆಶಾದಾಯಕರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಡಿಸೆಂಬರ್ 9 ರಿಂದ ಬೆಳಗಾವಿಯಲ್ಲಿ ನಡೆಯಲಿರುವ ವಿಧಾನಮಂಡಲದ ಚಳಿಗಾಲದ ಅಧಿವೇಶನದ ನಂತರ ಸಚಿವ ಸಂಪುಟ ಪುನಾರಚನೆಗೆ ಸಿದ್ದರಾಮಯ್ಯ ಬಯಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ತನ್ನ ಅಧಿಕಾರವನ್ನು ದೃಢವಾಗಿ ಸ್ಥಾಪಿಸಲು ಪಕ್ಷದೊಳಗೆ ಮತ್ತು ಪ್ರತಿಪಕ್ಷಗಳು ಹೇಳುತ್ತಿರುವ ಸಿಎಂ ಬದಲಾವಣೆ ಸುದ್ದಿಯ ಊಹಾಪೋಹಗಳಿಗೆ ತೆರೆ ಎಳೆಯುವುದು ತಂತ್ರವಾಗಿದೆ ಎಂದು ರಾಜಕೀಯ ವಿಶ್ಲೇಷಕರು ಹೇಳಿದ್ದಾರೆ.

ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಮತ್ತು ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ಆಸಿಫ್ ಸೇಠ್ ಅವರು ಸಚಿವರಾಗುವ ಆಸೆಯನ್ನು ಬಹಿರಂಗವಾಗಿ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಹೈಕಮಾಂಡ್ ಕೀಡ ಸಂಪುಟ ಪುನಾರಚನೆಗೆ ಮನಸ್ಸು ಮಾಡಿರುವಂತಿದೆ. ನರೇಂದ್ರಸ್ವಾಮಿ ಅವರು ಗುರುವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ತಮ್ಮ ಸಚಿವ ಸ್ಥಾನದ ಬೇಡಿಕೆ ಇರಿಸಿದ್ದಾರೆ. ಶುಕ್ರವಾರ ಹಿರಿಯ ನಾಯಕ ಹಾಗೂ ನವದೆಹಲಿಯಲ್ಲಿರುವ ರಾಜ್ಯದ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಕೂಡ ಖರ್ಗೆ ಅವರನ್ನು ಭೇಟಿ ಮಾಡಿದ್ದರು.

ಪಕ್ಷದ ಹೈಕಮಾಂಡ್ ಕೂಡ ಸಿದ್ದರಾಮಯ್ಯ ಸಂಪುಟದ ಕೆಲವು ಸಚಿವರ ಕಳಪೆ ಪ್ರದರ್ಶನದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದೆ. ಅವರಲ್ಲಿ ಕೆಲವರು ಅಬಕಾರಿ ಸಚಿವ ಆರ್‌ಬಿ ತಿಮ್ಮಾಪುರ ಅವರನ್ನು ಕೈಬಿಡಬಹುದು ಅಥವಾ ಪುನರ್ರಚನೆಯ ಭಾಗವಾಗಿ ಬೇರೆ ಖಾತೆಯನ್ನು ನೀಡಬಹುದು ಎಂದು ವರದಿಯಾಗಿದೆ. ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ಅವರು ಪುನರ್ವಿಂಗಡಣೆಯಾದಾಗ ಆದಾಯ ಖಾತೆಯನ್ನು ಪಡೆಯಬಹುದು ಎಂದು ಮೂಲವೊಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದೆ.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಸಹಕಾರ ಸಚಿವ ಕೆ.ಎನ್.ರಾಜಣ್ಣ, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ.ಮಹದೇವಪ್ಪ, ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ.ಸುಧಾಕರ್ ಹಿಟ್ ಲಿಸ್ಟ್‌ನಲ್ಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅಧಿವೇಶನಕ್ಕೂ ಮುನ್ನವೇ ಸಿದ್ದರಾಮಯ್ಯ ಅವರು ಮಾಜಿ ಬುಡಕಟ್ಟು ಕಲ್ಯಾಣ ಸಚಿವ ಬಿ.ನಾಗೇಂದ್ರ ಅವರನ್ನು ಸಂಪುಟಕ್ಕೆ ಮರು ಸೇರ್ಪಡೆ ಮಾಡಿಕೊಳ್ಳುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ. ಮಹರ್ಷಿ ವಾಲ್ಮೀಕಿ ಎಸ್‌ಟಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ಹಗರಣ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ನಾಗೇಂದ್ರ ರಾಜೀನಾಮೆ ನೀಡಿದ್ದರು. ಇಡಿ ಮತ್ತು ಎಸ್‌ಐಟಿ ಪ್ರಕರಣದ ತನಿಖೆ ನಡೆಸುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT