ಜೆಡಿಎಸ್ ನಾಯಕ ಜಿ.ಟಿ.ದೇವೇಗೌಡ 
ರಾಜಕೀಯ

ಸಿದ್ದರಾಮಯ್ಯ ಖುದ್ದಾಗಿ ಯಾವತ್ತೂ ಕಾಂಗ್ರೆಸ್​ಗೆ ಆಹ್ವಾನಿಸಿಲ್ಲ: ಜಿ.ಟಿ ದೇವೇಗೌಡ

ಜಿ.ಟಿ.ದೇವೇಗೌಡ ಅವರು ಈ ಹಿಂದೆ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೆಂಬಲಿಸಿ ಮಾತನಾಡಿದ್ದರು.

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖುದ್ದಾಗಿ ಯಾವತ್ತೂ ಕಾಂಗ್ರೆಸ್​ಗೆ ಆಹ್ವಾನಿಸಿಲ್ಲ. ನಾನು ದಸರಾದಲ್ಲಿ ಅವರ ಜೊತೆ ವೇದಿಕೆ ಹಂಚಿಕೆ ಕೊಂಡಿದ್ದು ಬಿಟ್ಟರೆ ಮತ್ತೆ ಅವರನ್ನು ಭೇಟಿ ಮಾಡಿಲ್ಲ ಜೆಡಿಎಸ್ ಹಿರಿಯ ಶಾಸಕ ಜಿ.ಟಿ.ದೇವೇಗೌಡ ಅವರು ಶನಿವಾರ ಹೇಳಿದ್ದಾರೆ.

ಜಿ.ಟಿ.ದೇವೇಗೌಡ ಅವರು ಈ ಹಿಂದೆ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೆಂಬಲಿಸಿ ಮಾತನಾಡಿದ್ದರು. ಇದು ಕೇಂದ್ರ ಸಚಿವ ಎಚ್​ಡಿ ಕುಮಾರಸ್ವಾಮಿ ಅವರ ಆಕ್ರೋಶಕ್ಕೆ ಕಾರಣವಾಗಿತ್ತು. ಹೀಗಾಗಿ ಜಿ.ಟಿ.ದೇವೇಗೌಡರನ್ನು ಪಕ್ಷದ ಕಾರ್ಯ ಚಟುವಟಿಕೆಗಳಿಂದ ದೂರವಿಡಲಾಗಿತ್ತು. ಇದು ಅವರ ಅಸಮಾಧಾನಕ್ಕೆ ಕಾರಣವಾಗಿತ್ತು. ಬಳಿಕ ಕಾಂಗ್ರೆಸ್​ ಸೇರುತ್ತಾರೆ ಎನ್ನಲಾಗಿತ್ತು.

ಇಂದು ಕಾಂಗ್ರೆಸ್ ಸೇರುವ ಬಗ್ಗೆ ಪ್ರತಿಕ್ರಿಯಿಸಿದ ಜಿ.ಟಿ.ದೇವೇಗೌಡ ಅವರು, ನಾನು ದಸರಾದಲ್ಲಿ ಅವರ ಜೊತೆ ವೇದಿಕೆ ಹಂಚಿಕೆ ಕೊಂಡಿದ್ದು ಬಿಟ್ಟರೆ ಮತ್ತೆ ಅವರನ್ನು ಭೇಟಿ ಮಾಡಿಲ್ಲ. ಅವರು ಯಾವತ್ತಿಗೂ ಪಕ್ಷಕ್ಕೆ ಬಾ ಎಂದು ವೈಯಕ್ತಿಕವಾಗಿ ಹೇಳಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಯಾವುದೊ ಸಭೆಯಲ್ಲಿ ಅವರು ಹೇಳಿರಬಹುದು. ಅದು ನನಗೆ ಗೊತ್ತಿಲ್ಲ. ಸಾರ್ವತ್ರಿಕ ಚುನಾವಣೆಗೂ ಮುನ್ನ ಡಿಸಿಎಂ ಡಿಕೆ ಶಿವಕುಮಾರ್, ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿಯ ಆಪ್ತ ಕಾರ್ಯದರ್ಶಿ ಪಕ್ಷಕ್ಕೆ ಬರುವಂತೆ ಆಹ್ವಾನ ನೀಡಿದ್ದರು. ಆಗಲೇ ನಾನು ಕಾಂಗ್ರೆಸ್​ ಪಕ್ಷಕ್ಕೆ ಹೋಗಿಲ್ಲ ಎಂದಿದ್ದಾರೆ.

ಚನ್ನಪಟ್ಟಣ ಕ್ಷೇತ್ರದಲ್ಲಿ ನಿಖಿಲ್ ಸೋಲಿಗೆ ಕಾರಣ ಗೊತ್ತಿಲ್ಲ. ಆ ಕ್ಷೇತ್ರದಲ್ಲಿ ಪ್ರಚಾರಕ್ಕೆ ಹೋಗಿಲ್ಲ. ಅಲ್ಲಿ ಏನಾಗಿದೆ ಎಂದು ತಿಳಿದು ಮಾತಾಡುತ್ತೇನೆ. ಮೂರು ಬಾರಿ ಸೋತವರು ಗೆದ್ದು ಉನ್ನತ ಸ್ಥಾನಕ್ಕೆ ಹೋಗಿದ್ದಾರೆ. ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು. ಧೈರ್ಯವಾಗಿ ಮತ್ತೆ ಪಕ್ಷ ಸಂಘಟನೆಯಲ್ಲಿ ತೊಡಗಬೇಕು ಎಂದು ಸಲಹೆ ನೀಡಿದ್ದಾರೆ.

ಚನ್ನಪಟ್ಟಣ ಪ್ರಚಾರಕ್ಕೆ ನನ್ನನ್ನು ಯಾರು ಕರೆದಿದ್ದರು ಹೇಳಿ? ಅಭ್ಯರ್ಥಿ ಕರೆಯಲಿಲ್ಲ, ದೊಡ್ಡವರು ಕೂಡ ಪ್ರಚಾರಕ್ಕೆ ಕರೆದಿಲ್ಲ. ಅವರಿಗೆ ನನ್ನ ಅವಶ್ಯಕತೆ ಇದ್ದಂತೆ ಕಾಣುತ್ತಿಲ್ಲ. ಜಿ.ಟಿ.ದೇವೇಗೌಡಗೆ ವಯಸ್ಸಾಗಿದೆ, ರಾಜಕೀಯದಿಂದ ನಿವೃತ್ತಿಯಾಗಲಿ, ನಮಗೆ ಅವರ ಮಗ ಹರೀಶ್‌ಗೌಡ ಸಾಕು ಎಂಬ ಆದೇಶ ಅವರಿಂದ ಆಗಿದೆ. ನನಗೆ ರಾಜಕೀಯದಿಂದ ನಿವೃತ್ತಿ‌ಕೊಡಿಸಲು ಅವರು ತಯಾರಿದ್ದಾರೆ. ಅವರಿಗೆ ಗೊತ್ತು ಕಾಂಗ್ರೆಸ್ ಫುಲ್ ಆಗಿದೆ, JDS, ಬಿಜೆಪಿ ಒಂದಾಗಿದೆ. ಹೀಗಾಗಿ ಜಿಟಿ ದೇವೇಗೌಡ ನಿವೃತ್ತಿ ತೆಗೆದುಕೊಳ್ಳಲಿ ಎಂಬ ಭಾವನೆಯಲ್ಲಿದ್ದಾರೆ‌ ಎಂದು ಸ್ವಪಕ್ಷದ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT