ಸಿಎಂ ಸಿದ್ದರಾಮಯ್ಯ, ಆರ್.ಅಶೋಕ್ ಸಾಂದರ್ಭಿಕ ಚಿತ್ರ 
ರಾಜಕೀಯ

ಉಪ ಚುನಾವಣೆ: ಮೂರು ಲೋಕ ಗೆದ್ದು ಬಿಟ್ಟ ಭ್ರಮೆಯಲ್ಲಿ ಕಾಂಗ್ರೆಸ್- ಆರ್. ಅಶೋಕ್ ವಾಗ್ದಾಳಿ

ವಾಲ್ಮೀಕಿ ನಿಗಮದಲ್ಲಿ ಕೋಟಿ ಕೋಟಿ ಹಣ ಅವ್ಯವಹಾರ ಆಗಿದೆ ಎಂದು ಸ್ವತಃ ತಾವೇ ಸದನದಲ್ಲಿ ಒಪ್ಪಿಕೊಂಡರಲ್ಲ, ಅದು ಸುಳ್ಳಾ? ಮೂಡಾ ಹಗರಣದಲ್ಲಿ ತಮ್ಮ ಪತ್ನಿಯವರ ಹೆಸರಿನಲ್ಲಿರುವ 14 ಸೈಟು ವಾಪಸ್ಸು ಕೊಡುವ ಮೂಲಕ ಪರೋಕ್ಷವಾಗಿ ತಮ್ಮ ತಪ್ಪನ್ನ ಒಪ್ಪಿಕೊಂಡಿದ್ದೀರಲ್ಲ ಅದು ಸುಳ್ಳಾ?

ಬೆಂಗಳೂರು: ಕಾಂಗ್ರೆಸ್ ಪಕ್ಷ ಹಣದ ಹೊಳೆ ಹರಿಸಿ, ಓಲೈಕೆ ರಾಜಕಾರಣದ ಮೂಲಕ ಒಂದು ಸಮುದಾಯದ ಮತ ಗಳಿಸಿ ಉಪಚುನಾವಣೆ ಗೆದ್ದ ಮಾತ್ರಕ್ಕೆ ಮೂರು ಲೋಕವನ್ನೇ ಗೆದ್ದು ಬಿಟ್ಟೆವು ಎಂಬ ಭ್ರಮೆಯಲ್ಲಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಭಾನುವಾರ ವಾಗ್ದಾಳಿ ನಡೆಸಿದ್ದಾರೆ.

ಅಪ ಪ್ರಚಾರ ವಿರುದ್ಧ ದಿಗ್ವಿಜಯ ಎಂಬ ಮಾಧ್ಯಮವೊಂದರ ವರದಿಯನ್ನು ಸಾಮಾಜಿಕ ಜಾಲ ತಾಣ ಎಕ್ಸ್ ನಲ್ಲಿ ಹಂಚಿಕೊಂಡಿರುವ ಮುಖ್ಯಮಂತ್ರಿ ವಿರುದ್ಧ ಕಿಡಿಕಾರಿರುವ ಅಶೋಕ್, ಸಿಎಂ ಸಿದ್ದರಾಮಯ್ಯ ನವರೇ, ಯಾವುದು ಸುಳ್ಳು, ಯಾವುದು ಅಪಪ್ರಚಾರ? ಎಂದು ಪ್ರಶ್ನಿಸಿದ್ದಾರೆ.

ವಾಲ್ಮೀಕಿ ನಿಗಮದಲ್ಲಿ ಕೋಟಿ ಕೋಟಿ ಹಣ ಅವ್ಯವಹಾರ ಆಗಿದೆ ಎಂದು ಸ್ವತಃ ತಾವೇ ಸದನದಲ್ಲಿ ಒಪ್ಪಿಕೊಂಡರಲ್ಲ, ಅದು ಸುಳ್ಳಾ? ಮೂಡಾ ಹಗರಣದಲ್ಲಿ ತಮ್ಮ ಪತ್ನಿಯವರ ಹೆಸರಿನಲ್ಲಿರುವ 14 ಸೈಟು ವಾಪಸ್ಸು ಕೊಡುವ ಮೂಲಕ ಪರೋಕ್ಷವಾಗಿ ತಮ್ಮ ತಪ್ಪನ್ನ ಒಪ್ಪಿಕೊಂಡಿದ್ದೀರಲ್ಲ ಅದು ಸುಳ್ಳಾ? ಮೂಡಾ ಹಗರಣದಲ್ಲಿ ತಮ್ಮ ವಿರುದ್ಧ ತನಿಖೆ ಅಗತ್ಯ ಇದೆ ಮಾನ್ಯ ಹೈಕೋರ್ಟ್ ಘಂಟಾಘೋಷವಾಗಿ ಹೇಳಿದ್ದು ಸುಳ್ಳಾ? ಎಂದು ಸರಣಿ ಪ್ರಶ್ನೆಗಳನ್ನು ಕೇಳಿದ್ದಾರೆ,

ಮದ್ಯ ಮಾರಾಟಗಾರರ ಸಂಘ ತಮಗೆ ಬರೆದಿರುವ ಪತ್ರದಲ್ಲಿ ಅಬಕಾರಿ ಇಲಾಖೆಯಲ್ಲಿ 'ಮಂಥ್ಲಿ ಮನಿ' ಹೆಸರಿನಲ್ಲಿ, ವರ್ಗಾವಣೆ ದಂಧೆಯಲ್ಲಿ, ಲೈಸೆನ್ಸ್ ನವೀಕರಣದಲ್ಲಿ 700 ಕೋಟಿ ರೂ. ಲಂಚದ ವ್ಯವಹಾರ ನಡೆದಿದೆ ಎಂದು ಹೇಳಿರುವುದು ಸುಳ್ಳಾ? ವಕ್ಫ್ ಮಂಡಳಿ ಹೆಸರಿನಲ್ಲಿ ಸರ್ಕಾರಿ ಆಸ್ತಿ ಪಾಸ್ತಿ, ಮಠ ಮಂದಿರಗಳ ಜಾಗ, ರೈತರ ಕೃಷಿ ಜಮೀನುಗಳಿಗೆ ಕಳಿಸಿ, ರಾತ್ರೋರಾತ್ರಿ ದಾಖಲೆಗಳನ್ನು ತಿದ್ದುತ್ತಿರುವುದು ಸುಳ್ಳಾ?ತಮ್ಮ ಸರ್ಕಾರದ ಭ್ರಷ್ಟಾಚಾರಕ್ಕೆ, ಕಿರುಕುಳಕ್ಕೆ ಈವರೆಗೂ ನಾಲ್ಕು ಜನ ಪ್ರಾಮಾಣಿಕ ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿಗಳು, ಗುತ್ತಿಗೆದಾರರು ಆತ್ಮಹತ್ಯೆಗೆ ಶರಣಾಗಿರುವ ಘಟನೆಗಳು ಸುಳ್ಳಾ? ಎಂದು ಟೀಕಾ ಪ್ರಹಾರ ನಡೆಸಿದ್ದಾರೆ.

ಸಿದ್ದರಾಮಯ್ಯ ಅವರ ಈ ಕುತಂತ್ರ, ಷಡ್ಯಂತ್ರ, ನಾಟಕ ಜಾಸ್ತಿ ದಿನ ನಡೆಯುವುದಿಲ್ಲ. ತಡವಾದರೂ ಸತ್ಯಕ್ಕೆ ಎಂದಿಗೂ ಜಯ. ಸತ್ಯಮೇವ ಜಯತೇ! ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT