ಜೆಡಿಎಸ್ 
ರಾಜಕೀಯ

ಹರಕು ಬಾಯಿಗಳಿಗೆ, ತೂತುಬಿದ್ದ ಮಡಿಕೆಯಂತಾಗಿರುವ ಪಕ್ಷಕ್ಕೆ ಮೊದಲು ತ್ಯಾಪೆ ಹಚ್ಚಿ; ಇನ್ನೊಬ್ಬರ ಬಚ್ಚಲು ಮನೆ ಮೂಸಿ ನೋಡುವ ಚಟ ಬಿಡಿ!

ಮಹಾರಾಷ್ಟ್ರದಲ್ಲಿ ನೆಲಕಚ್ಚಿದೆ. ಅಲ್ಲಿ 6ನೇ ಸ್ಥಾನಕ್ಕೆ, ಜಾರ್ಖಂಡ್ ನಲ್ಲಿ 3ನೇ ಸ್ಥಾನಕ್ಕೆ ಜಾರಿದೆ. ಆದರೂ ಕರ್ನಾಟಕದಲ್ಲಿ ವಾಮಮಾರ್ಗದಲ್ಲಿ ಗೆದ್ದ 3 ಬೈಎಲೆಕ್ಷನ್ ಸೀಟುಗಳನ್ನು ಮುಖದ ಮೇಲಿಟ್ಟುಕೊಂಡು ಮೆರೆಯುತ್ತಿದೆ, ಮೆರೆಯಲಿ...

ಬೆಂಗಳೂರು: ಅನ್ಯರ ಬಗ್ಗೆ ಹಗುರವಾಗಿ ಮಾತಾನಾಡುವ ನಿಮ್ಮ ಹರಕು ಬಾಯಿಗಳಿಗೆ, ನಿಮ್ಮ ತೂತುಬಿದ್ದ ಮಡಿಕೆಯಂತಾಗಿರುವ ನಿಮ್ಮ ಪಕ್ಷಕ್ಕೆ ಮೊದಲು ತ್ಯಾಪೆ ಹಚ್ಚಿ ಎಂದು ಕಾಂಗ್ರೆಸ್ ಪಕ್ಷದ ನಾಯಕರಿಗೆ ಜೆಡಿಎಸ್ ಟಾಂಗ್ ನೀಡಿದೆ.

ಈ ಸಂಬಂಧ ತನ್ನ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಜೆಡಿಎಸ್, ಪಳೆಯುಳಿಕೆ ಪಾರ್ಟಿ ಕಾಂಗ್ರೆಸ್! ನಶಿಸುತ್ತಿರುವ ಶತಮಾನಗಳ ಪಳೆಯುಳಿಕೆ ಕಾಂಗ್ರೆಸ್ ಪಕ್ಷದ ಪಕಳೆಗಳು ದೇಶಾದ್ಯಂತ ಒಂದೊಂದೇ ಉದುರುತ್ತಿವೆ. ಮಹಾರಾಷ್ಟ್ರದಲ್ಲಿ ನೆಲಕಚ್ಚಿದೆ. ಅಲ್ಲಿ 6ನೇ ಸ್ಥಾನಕ್ಕೆ, ಜಾರ್ಖಂಡ್ ನಲ್ಲಿ 3ನೇ ಸ್ಥಾನಕ್ಕೆ ಜಾರಿದೆ. ಆದರೂ ಕರ್ನಾಟಕದಲ್ಲಿ ವಾಮಮಾರ್ಗದಲ್ಲಿ ಗೆದ್ದ 3 ಬೈಎಲೆಕ್ಷನ್ ಸೀಟುಗಳನ್ನು ಮುಖದ ಮೇಲಿಟ್ಟುಕೊಂಡು ಮೆರೆಯುತ್ತಿದೆ, ಮೆರೆಯಲಿ ಎಂದಿದೆ.

ಮಹಾರಾಷ್ಟ್ರದಲ್ಲಿ ಮತದಾರರು ಕೈ ಪಕ್ಷದ ಪೋಸ್ಟ್ ಮಾರ್ಟಮ್ ಮಾಡಿದ್ದಾರೆ. ಕಾಂಗ್ರೆಸ್ಸಿಗರೇ.. ಅನ್ಯರ ಬಗ್ಗೆ ಹಗುರವಾಗಿ ಮಾತಾನಾಡುವ ನಿಮ್ಮ ಹರಕು ಬಾಯಿಗಳಿಗೆ, ನಿಮ್ಮ ತೂತುಬಿದ್ದ ಮಡಿಕೆಯಂತಾಗಿರುವ ನಿಮ್ಮ ಪಕ್ಷಕ್ಕೆ ಮೊದಲು ತ್ಯಾಪೆ ಹಚ್ಚಿ. 288 ಸೀಟುಗಳ ಮಹಾರಾಷ್ಟ್ರದಲ್ಲಿ ಹದಿನಾರೇ ಸೀಟಿಗೆ ಬೋರಲು ಬಿದ್ದ ಸೋಕಾಲ್ಡ್ ನ್ಯಾಷನಲ್ ಪಾರ್ಟಿ ನಾಯಕರೇ, ಇನ್ನೊಬ್ಬರ ಬಚ್ಚಲು ಮನೆ ಮೂಸಿ ನೋಡುವ ಚಟ ಬಿಡಿ. ಇನ್ನು ಜಾರ್ಖಂಡ್; ಜೆಎಂಎಂ ಪರಾವಲಂಬಿಯಾಗಿ ಪರದೇಸಿ ಬಾಳ್ವೆ ಮಾಡಿಕೊಂಡು 81 ಸೀಟಿನ ಪೈಕಿ ಹದಿನಾರಕ್ಕೆ ಅಡ್ಡಡ್ಡ ಬಿದ್ದ ನಿಮ್ಮ ಪಕ್ಷಕ್ಕೆ ಅಲ್ಲಿಯೂ ಜನ ಚಟ್ಟ ಕಟ್ಟಿದ್ದಾರೆ. ಸರಳ ಲೆಕ್ಕ ಕಾಂಗ್ರೆಸ್ಸಿಗರೇ.. 288+81=369. ಇಷ್ಟರಲ್ಲಿ ಒಟ್ಟು ಎಷ್ಟು ಗೆದ್ದಿದ್ದೀರಿ? ಕೇವಲ.. ಕೇವಲ.. 32!! ಅದರಲ್ಲಿಯೂ ಮಹಾರಾಷ್ಟ್ರದಲ್ಲಿ -28!! ಛೀ.. ನಿಮ್ಮ ಜನ್ಮಕ್ಕೆ.. ನಿಮಗಿಂತ ನಾವು ಕಳಪೆಯೇ..? 224 ಕ್ಷೇತ್ರಗಳಲ್ಲಿ 19 ಗೆದ್ದಿದ್ದೆವು. ಅದೂ ಯಾವ ಮೈತ್ರಿಯೂ ಇಲ್ಲದೆ!! ನಾವು ಪ್ರಾದೇಶಿಕ, ನೀವು ಸೋಕಾಲ್ಡ್ ನ್ಯಾಶನಲ್ ಎಂದು ಜೆಡಿಎಸ್ ಲೇವಡಿ ಮಾಡಿದೆ.

ಐರೆನ್ ಲೆಗ್ ಪಾರ್ಟಿ ಕಾಂಗ್ರೆಸ್, ಮಹಾರಾಷ್ಟ್ರದಲ್ಲಿ ಮೈತ್ರಿ ಪಕ್ಷಗಳನ್ನು ವ್ಯವಸ್ಥಿತವಾಗಿ ಮುಗಿಸಿದೆ. ಅದಕ್ಕೆ ಬಲಿಯಾದ ಪಕ್ಷ ಉದ್ಧವ್ ಠಾಕ್ರೆಯವರ ಶಿವಸೇನೆ!! ಮೈತ್ರಿಗೆ, ಮೈತ್ರಿ ಪಕ್ಷಗಳಿಗೆ ಮಿತ್ರದ್ರೋಹ ಮಾಡುತ್ತಿರುವ ಕಾಂಗ್ರೆಸ್ ಸಂವಿಧಾನವನ್ನೇ ಅಣಕಿಸುತ್ತಿದೆ. ಅನ್ಯರ ಅಣಕವೇ ಮನೆಹಾಳು ಕಾಂಗ್ರೆಸ್ಸಿನ ಕಾಯಕ ಎಂದು ವ್ಯಂಗ್ಯವಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Cockroach Janta Partyಗೆ ಬಿಗ್ ಶಾಕ್: ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸರು, 57 ಮೆಟ್ರೋ ನಿಲ್ದಾಣಗಳು ಬಂದ್..!

ಕೇಂದ್ರ ಸಚಿವ, ಬಿಜೆಪಿ ನಾಯಕನಿಂದ ಸ್ಟಿಂಗ್ ಆಪರೇಷನ್‌ಗೆ ಸಂಚು: Congress ಶಾಸಕ ಗಣಿಗ ರವಿ ಸ್ಫೋಟಕ ಆರೋಪ; Video

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

ಯೋಗೀಶ್ ಗೌಡ ಕೊಲೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್‌ ಕುಲಕರ್ಣಿಗೆ ತಾತ್ಕಾಲಿಕ ರಿಲೀಫ್‌; ಅ.27ಕ್ಕೆ ವಿಚಾರಣೆ ಮುಂದೂಡಿಕೆ

ಬಾಲಿವುಡ್ ನಟ ನಾನಾ ಪಾಟೇಕರ್ ನಿಧನಕ್ಕೆ ಬಿಗ್ ಟ್ವಿಸ್ಟ್: ಅಸಹಜ ಸಾವು ಕೇಸ್ ದಾಖಲಿಸಿದ ಗೋವಾ ಪೊಲೀಸರು!