ಸಿಎಂ ಸಿದ್ದರಾಮಯ್ಯ 
ರಾಜಕೀಯ

ಸಂಪುಟ ಪುನರ್ ರಚನೆ ಕಲ್ಪಿತ ಸುದ್ದಿ; ಪಕ್ಷದ ಸಹಯೋಗದಲ್ಲಿ ಸ್ವಾಭಿಮಾನಿ ಸಮಾವೇಶ: ಸಿಎಂ ಸಿದ್ದರಾಮಯ್ಯ

ಸಂಪುಟ ಪುನಾರಚನೆ, ವಿಸ್ತರಣೆ ಕುರಿತಂತೆ ನಾನು ರಾಹುಲ್ ಗಾಂಧಿಯವರು ಅಥವಾ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಚರ್ಚೆ ಮಾಡಿಲ್ಲ.

ನವದೆಹಲಿ: ರಾಜ್ಯ ಸಚಿವ ಸಂಪುಟ ಪುನರ್ ರಚನೆಯ ಸುದ್ದಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ತಳ್ಳಿ ಹಾಕಿದ್ದಾರೆ.

ರಾಷ್ಟ್ರ ರಾಜಧಾನಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ಸಂಪುಟ ಪುನಾರಚನೆ, ವಿಸ್ತರಣೆ ಕುರಿತಂತೆ ನಾನು ರಾಹುಲ್ ಗಾಂಧಿಯವರು ಅಥವಾ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಚರ್ಚೆ ಮಾಡಿಲ್ಲ. ನಾಗೇಂದ್ರ ಅವರು ಸಂಪುಟಕ್ಕೆ ಸೇರ್ಪಡೆ ಆಗಲಿದ್ದಾರೆ. ಆದರೆ ಈಗಲೇ ಅಲ್ಲ ಎಂದು ತಿಳಿಸಿದರು.

ಮಾಧ್ಯಮಗಳು ಸಂಪುಟ ಪುನರ್ ರಚನೆಯ ಬಗ್ಗೆ ಸುದ್ದಿಗಳನ್ನು ಬಿತ್ತರಿಸುತ್ತಿವೆ. ಸಂಭವನೀಯ ಸಚಿವರ ಪಟ್ಟಿಯನ್ನೂ ಪ್ರಕಟಿಸುತ್ತಿವೆ. ಹೀಗಾಗಿ ಪುನರ್‌ರಚನೆ, ವಿಸ್ತರಣೆ ಕುರಿತಾದ ಪ್ರಶ್ನೆಗಳಿಗೆ ಮಾಧ್ಯಮಗಳೇ ಉತ್ತರಿಸಬೇಕು ಎಂದರು.

ಹಾಸನದಲ್ಲಿ ಡಿಸೆಂಬರ್ 5ರಂದು ಕಾಂಗ್ರೆಸ್ ಪಕ್ಷ ಹಾಗೂ ಹಿಂದುಳಿದ ವರ್ಗಗಳ ಒಕ್ಕೂಟದ ಆಶ್ರಯದಲ್ಲಿ ಸ್ವಾಭಿಮಾನಿ ಸಮಾವೇಶ ಅಯೋಜಿಸಲಾಗಿದೆ. ಸಮಾವೇಶಕ್ಕೆ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಹಾಗೂ ರಾಜ್ಯ ಉಸ್ತುವಾರಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಅವರನ್ನೂ ಸಂಘಟಕರು ಆಹ್ವಾನಿಸಿದ್ದಾರೆ ಎಂದು ತಿಳಿಸಿದರು.

ಸಿದ್ದರಾಮಯ್ಯ ಶಕ್ತಿ ಪ್ರದರ್ಶನಕ್ಕೆ ಸ್ವಾಭಿಮಾನಿ ಸಮಾವೇಶ ಮಾಡಲಾಗುತ್ತಿದೆ ಎಂಬ ಮಾತುಗಳು ಕೇಳಿಬಂದಿತ್ತು. ಸಮಾವೇಶʼದ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅನಾಯಮಧೇಯ ವ್ಯಕ್ತಿಯಿಂದ ದೂರು ಸಲ್ಲಿಕೆ ಮಾಡಲಾಗಿತ್ತು. ಹೀಗಾಗಿ ಸಮಾವೇಶ ವಿಚಾರದಲ್ಲಿ ಎಐಸಿಸಿ ಎಂಟ್ರಿಯಾಗಿದ್ದು, ಪಕ್ಷದ ವೇದಿಕೆಯಿಂದಲೇ ಸಮಾವೇಶ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಲ್ಲಿಕಾರ್ಜುನ ಖರ್ಗೆ ಸೂಚಿಸಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ