ಸಂಗ್ರಹ ಚಿತ್ರ 
ರಾಜಕೀಯ

ಸಿದ್ದರಾಮಯ್ಯಗೆ MUDA ಉರುಳು ಮತ್ತಷ್ಟು ಬಿಗಿ: ಡಿಕೆಶಿ-ಪರಮೇಶ್ವರ್ ಭೇಟಿ; ಕುತೂಹಲ ಮೂಡಿಸಿದ CM ಸ್ಥಾನದ ಆಕಾಂಕ್ಷಿಗಳ ಮಾತುಕತೆ

ಖುದ್ದು ಡಿ.ಕೆ.ಶಿವಕುಮಾರ್‌ರವರೇ ಪರಮೇಶ್ವರ್‌ ಅವರ ಮನೆಗೆ ಭೇಟಿ ನೀಡಿ, ಮಾತುಕತೆ ನಡೆಸಿದ್ದು, ನಾನಾ ವ್ಯಾಖ್ಯಾನಗಳಿಗೆ ಕಾರಣವಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಸೈಟು ಹಂಚಿಕೆ ಹಗರಣ ಬಿಗಿಯಾದ ಬೆನ್ನಲ್ಲಿಯೇ ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರ ಮನೆಗೆ ಆಗಮಿಸಿ ಗೌಪ್ತವಾಗಿ ಮಾತುಕತೆ ನಡೆಸಿರುವುದು, ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.

ಖುದ್ದು ಡಿ.ಕೆ.ಶಿವಕುಮಾರ್‌ರವರೇ ಪರಮೇಶ್ವರ್‌ ಅವರ ಮನೆಗೆ ಭೇಟಿ ನೀಡಿ, ಮಾತುಕತೆ ನಡೆಸಿದ್ದು, ನಾನಾ ವ್ಯಾಖ್ಯಾನಗಳಿಗೆ ಕಾರಣವಾಗಿದೆ.

ಆದರೆ, ಡಿಕೆ.ಶಿವಕುಮಾರ್ ಅವರು ಮುಡಾ ಹಗರಣ ವಿಚಾರಕ್ಕೆ ಬಿಜೆಪಿಗೆ ತಿರುಗೇಟು ನೀಡಲು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧದ ಪ್ರಕರಣಗಳ ಕುರಿತು ಕಾರ್ಯತಂತ್ರ ರೂಪಿಸಲುವ ಕುರಿತು ಚರ್ಚೆ ನಡೆಸಿದ್ದಾರೆಂದು ಹೇಳಲಾಗುತ್ತಿದೆ.

ಕುಮಾರಸ್ವಾಮಿ ವಿರುದ್ಧದ ಸಂಡೂರು ಗಣಿಗಾರಿಕೆ ಪ್ರಕರಣದ ತನಿಖೆ ನಡೆಸುತ್ತಿರುವ ಲೋಕಾಯುಕ್ತ ವಿಶೇಷ ತನಿಖಾ ತಂಡದ (ಎಸ್‌ಐಟಿ) ಎಡಿಜಿಪಿ ಎಂ.ಚಂದ್ರಶೇಖರ್ ಅವರ ಕುರಿತು ನಾಯಕರು ಚರ್ಚೆ ನಡೆಸಿದ್ದಾರೆಂದು ಮೂಲಗಳು ತಿಳಿಸಿವೆ.

ಕುಮಾರಸ್ವಾಮಿಯವರು ಅಸ್ತಿತ್ವದಲ್ಲಿಲ್ಲದ ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್‌ಗೆ ಗಣಿಗಾರಿಕೆ ಗುತ್ತಿಗೆ ನೀಡಿದ್ದಾರೆ ಎಂದು ಆರೋಪಿಸಲಾಗಿದ್ದು, ಈ ಕುರಿತ ವಿಚಾರಣೆಗೆ ರಾಜ್ಯಪಾಲ ತಾವರ್‌ಚಂದ್ ಗೆಹ್ಲೋಟ್‌ರ ಅನುಮತಿಯನ್ನು ಎಸ್‌ಐಟಿ ಕೋರಿತ್ತು.

ಮಾತುಕತೆ ವೇಳೆ ವೇಳೆ ಕೆಲ ಅಧಿಕಾರಿಗಳಿಂದ ಕುಮಾರಸ್ವಾಮಿಗೆ ಮಾಹಿತಿ ಸೋರಿಕೆಯಾಗುತ್ತಿದೆ ಎಂದು ಶಿವಕುಮಾರ್ ಹೇಳಿದ್ದು, ಈ ಸಂಬಂಧ ಪರಮೇಶ್ವರ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಡಿಕೆ.ಶಿವಕುಮಾರ್ ಅವರ ಭೇಟಿ ಬಳಿಕ ಪರಮೇಶ್ವರ ಅವರು ಸಿದ್ದರಾಮಯ್ಯ ಅವರ ಅಧಿಕೃತ ನಿವಾಸ ಕಾವೇರಿಗೆ ಭೇಟಿ ನೀಡಿದ್ದು, ಈ ವೇಳೆ ಚುನಾವಣಾ ಬಾಂಡ್ ಹಗರಣದಲ್ಲಿ ನಿರ್ಮಲಾ ಸೀತಾರಾಮನ್ ವಿರುದ್ಧ ದಾಖಲಾಗಿರುವ ಎಫ್‌ಐಆರ್ ಬಗ್ಗೆ ಚರ್ಚಿಸಿದ್ದಾರೆಂದು ವರದಿಗಳು ತಿಳಿಸಿವೆ.

ಭೇಟಿ ಬಳಿಕ ಪ್ರತಿಕ್ರಿಯೆ ನೀಡಿದ ಪರಮೇಶ್ವರ್ ಅವರು, ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಿದ್ದಾರೆ. ನಾವು ಮಾತಾಡಿಕೊಳ್ಳದಿದ್ದರೆ ಇನ್ನ್ಯಾರು ಮಾತಾಡಿಕೊಳ್ಳಬೇಕು? ನಮ್ಮ ಸಮಸ್ಯೆಗಳ ಬಗ್ಗೆ ನಾವೇ ಚರ್ಚೆ ಮಾಡಬೇಕು. ನಾನು‌ ಮತ್ತು ಡಿ.ಕೆ.ಶಿವಕುಮಾರ್ ಅವರು ಹೊಸದಾಗಿ ಭೇಟಿ ಆಗುತ್ತಿದ್ದೇವೆಯೇ? ಎಂದು ಪ್ರಶ್ನಿಸಿದರು.

ಡಿಸಿಎಂ ಭೇಟಿಯನ್ನು ಬೇರೆ ರೀತಿಯ ದೃಷ್ಟಿಕೋನದಲ್ಲಿ‌ ನೋಡಬೇಕಿಲ್ಲ. ನಾವು ಭೇಟಿ‌ ಮಾಡುವುದರನ್ನು ಬೇರೆಬೇರೆ ಅರ್ಥ ಕಲ್ಪಿಸುವ ಅವಶ್ಯಕತೆ ಇಲ್ಲ ಎಂದು ಸ್ಪಷ್ಟಪಡಿಸಿದರು.

ಐದು ಗ್ಯಾರಂಟಿ ಯೋಜನೆ ಭರವಸೆಗಳನ್ನು ಈಡೇರಿಸಿದ್ದೇವೆ. ಎತ್ತಿನಹೊಳೆ ಯೋಜನೆ ವೇಗವಾಗಿ ಆಗುತ್ತಿಲ್ಲ. ಹಣ ಬಿಡುಗಡೆ ಆಗಬೇಕಿದೆ. ದೊಡ್ಡಬಳ್ಳಾಪುರದಲ್ಲಿ ನೀರು ಸಂಗ್ರಹಕ್ಕೆ ಐದು ಸಾವಿರ ಎಕರೆ ಭೂಮಿ ಪ್ರಸ್ತಾಪ‌ ಮಾಡಲಾಗಿತ್ತು. ಅದರಲ್ಲಿ 2500 ಎಕರೆ ಭೂಮಿ ಕೊರಟಗೆರೆ ಕ್ಷೇತ್ರದ ವ್ಯಾಪ್ತಿಗೆ ಬರುತ್ತದೆ. ಹಿಂದಿನ ಸರ್ಕಾರ ಇದನ್ನು ಬದಲಾಯಿಸಿ, ನಿಲ್ಲಿಸಿತ್ತು. ಅದು ಆಗಬಾರದು ಎಂಬ ಚರ್ಚೆ ನಡೆಯುತ್ತಿತ್ತು. ಮುಂದಿನ ವರ್ಷಕ್ಕಾದರು ಜಿಲ್ಲೆಗೆ ನೀರು ಬರಬೇಕು. ಈ ಬಗ್ಗೆ ಚರ್ಚಿಸಲು ಭೇಟಿ ಮಾಡುವುದಾಗಿ ಡಿಸಿಎಂ‌ ಅವರಿಗೆ ಹೇಳಿದ್ದೆ. ಡಿಸಿಎಂ ಅವರು ನಾನೇ ಬರುತ್ತೇನೆ, ಮಾತಾಡೋಣ ಎಂದಿದ್ದರು. ಬನ್ನಿ ಎಂದು ಕರೆದಿದ್ದೆ. ನಮ್ಮ‌ ಕೆಲಸ ಕಾರ್ಯಗಳಾಗಬೇಕಾಗುತ್ತದೆ. ಗುಬ್ಬಿಯಿಂದ‌ ಕುಣಿಗಲ್‌ವರೆಗೆ ಎಕ್ಸ್‌ಪ್ರೆಸ್ ಕೆನಲ್ ಮಾಡಲು ಅನುಮತಿ ಸಿಕ್ಕಿದೆ. ಕೆಲಸ‌ ಆರಂಭಿಸುವಾಗ ಜನರು ತಡೆದಿದ್ದಾರೆ. ಈ ಬಗ್ಗೆಯೂ ಚರ್ಚಿಸಲಾಗಿದೆ. ನೀರಾವರಿ ಸಚಿವರಾದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಾಂತ್ರಿಕ ಸಮಿತಿ ಮಾಡಿದ್ದಾರೆ. ಅದರ ವರದಿ ಕೊಟ್ಟಮೇಲೆ ಮುಂದುವರಿಯುತ್ತದೆ ಎಂದರು.

ಅಧಿಕಾರಿಗಳ ಗೈರುಹಾಜರಿಯಲ್ಲಿ ನಿಮ್ಮನ್ನು ಭೇಟಿಯಾಗಲು ಕಾರಣವೇನು ಎಂದು ಪ್ರಶ್ನೆಗೆ ಉತ್ತರಿಸಿ, ಎಲ್ಲ ಕಾಂಗ್ರೆಸ್ ಶಾಸಕರು ಒಟ್ಟಿಗೆ ಇದ್ದಾರೆ, ರಾಜಕಾರಣಿಗಳ ಹಿಂದೆ ಅಧಿಕಾರಿಗಳು ಬರುವ ಅಗತ್ಯವಿಲ್ಲ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT