ಜಿ ಟಿ ದೇವೇಗೌಡ-ಸಿದ್ದರಾಮಯ್ಯ  
ರಾಜಕೀಯ

ಸಿದ್ದರಾಮಯ್ಯ ಏಕೆ ರಾಜೀನಾಮೆ ಕೊಡ್ಬೇಕು, ಹಾಗಾದ್ರೆ ಕುಮಾರಸ್ವಾಮಿ ಕೊಡ್ತಾರಾ: ಅಚ್ಚರಿ ಮೂಡಿಸಿದ ಜಿ ಟಿ ದೇವೇಗೌಡ ಹೇಳಿಕೆ

ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಏಕೆ ರಾಜೀನಾಮೆ ನೀಡಬೇಕು ಎಂದು ಪ್ರಶ್ನಿಸಿದರು. ಹಾಗಾದರೆ ಎಚ್‌ಡಿ ಕುಮಾರಸ್ವಾಮಿ ರಾಜೀನಾಮೆ ಕೊಡ್ತಾರಾ? ಎಂದು ಜೆಡಿಎಸ್ ನಾಯಕರ ವಿರುದ್ದನೇ ಹರಿಹಾಯ್ದರು.

ಮೈಸೂರು: ಮುಡಾ ಹಗರಣದಲ್ಲಿ ಲೋಕಾಯುಕ್ತ ಎಫ್ ಐರ್ ದಾಖಲಿಸಿ ತನಿಖೆ ನಡೆಸುತ್ತಿದ್ದರೆ ಇತ್ತ ಇಡಿ ಸಹ ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಸು ದಾಖಲಿಸುತ್ತಿದ್ದಂತೆ ಅವರು ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಮತ್ತು ಜೆಡಿಎಸ್ ನಾಯಕರು ಆಗ್ರಹಿಸುತ್ತಿದ್ದರೆ, ಜೆಡಿಎಸ್ ಶಾಸಕ ಜಿಟಿ ದೇವೇಗೌಡ ಅವರು ಸಿದ್ದರಾಮಯ್ಯ ಪರವಾಗಿ ಮಾತನಾಡಿ ಅಚ್ಚರಿ ಮೂಡಿಸಿದ್ದಾರೆ.

ಇಂದು ಮೈಸೂರು ದಸರಾ ಉದ್ಘಾಟನೆಯಾದ ನಂತರ ವೇದಿಕೆಯಲ್ಲಿ ಮಾತನಾಡುವ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಪರವಾಗಿ ಮಾತನಾಡಿ ಸುದ್ದಿಯಾಗಿದ್ದಾರೆ.

ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಏಕೆ ರಾಜೀನಾಮೆ ನೀಡಬೇಕು ಎಂದು ಪ್ರಶ್ನಿಸಿದರು. ಹಾಗಾದರೆ ಎಚ್‌ಡಿ ಕುಮಾರಸ್ವಾಮಿ ರಾಜೀನಾಮೆ ಕೊಡ್ತಾರಾ? ಎಂದು ಜೆಡಿಎಸ್ ನಾಯಕರ ವಿರುದ್ದನೇ ಹರಿಹಾಯ್ದರು. ಸಿದ್ದರಾಮಯ್ಯನವರು ಚಾಮುಂಡೇಶ್ವರಿ ತಾಯಿಯ ವರಪುತ್ರರು ಹೌದು. ಚಾಮುಂಡೇಶ್ವರಿ ಕ್ಷೇತ್ರಕ್ಕೆ ಕಾಲಿಟ್ಟ ವೇಳೆಯಿಂದಲೂ ಸಿದ್ದರಾಮಯ್ಯ ಸಚಿವರಾಗಿ, ಡಿಸಿಎಂ ಆಗಿ, ಎರಡು ಬಾರಿ ಸಿಎಂ ಆಗಿದ್ದಾರೆ, ಎಂದರೆ ತಾಯಿ ಚಾಮುಂಡೇಶ್ವರಿ ಆಶೀರ್ವಾದ ಇದಕ್ಕೆ ಕಾರಣ. ಎಂತಹ ಸಂದರ್ಭದಲ್ಲಿಯೂ ತಾಯಿ ಚಾಮುಂಡೇಶ್ವರಿ ಅವರ ಪಾಲಿಗೆ ಇದ್ದಾರೆ ಎಂದರು.

ಉಪ ಚುನಾವಣೆ ವೇಳೆ ಸಿದ್ದರಾಮಯ್ಯರನ್ನು ಸೋಲಿಸಲಿಕ್ಕೆ ನಾವು ತೀರ್ಮಾನ ಮಾಡಿದ್ವಿ. ಆದರೆ ಸಿದ್ದರಾಮಯ್ಯ ಆ ಚುನಾವಣೆಯಲ್ಲಿ ಗೆದ್ದರು. ಇದಕ್ಕೆ ಕಾರಣ ತಾಯಿ ಚಾಮುಂಡೇಶ್ವರಿ ಆಶೀರ್ವಾದ ಅವರಿಗೆ ಇದೆ. ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಡಿಸಿಎಂ ಡಿ ಕೆ ಶಿವಕುಮಾರ್ ಕೂಡ ಕಾರಣ. ಸಚಿವ ಮಹದೇವಪ್ಪ ಎಲ್ಲಾ ಸಚಿವ ಸ್ಥಾನವನ್ನು ಪಡೆದಿದ್ದಾರೆ. ಒಬ್ಬ ದಲಿತ ನಾಯಕನನ್ನು ರಾಜ್ಯ ಮಟ್ಟಕ್ಕೆ ಕೊಂಡೊಯ್ದದ್ದು ಸಿದ್ದರಾಮಯ್ಯ ಎಂದು ಹೇಳುವ ಮೂಲಕ ಸಿಎಂ, ಡಿಸಿಎಂ, ಸಚಿವ ಮಹದೇವಪ್ಪರನ್ನು ಹಾಡಿ ಹೊಗಳಿದರು.

ಸಿದ್ದರಾಮಯ್ಯ ಯಾವತ್ತೂ ಕುಟುಂಬ ನೋಡಿದವರಲ್ಲ. ಈಗ ಎಲ್ಲಾ ಗಾಜಿನ ಮನೆಯಲ್ಲಿ ಕೂತಿದ್ದಾರೆ. ಎಫ್ ಐ ಆರ್ ಆದವರು ರಾಜೀನಾಮೆ ಕೊಡಬೇಕಾಗಿದ್ದರೆ, ಜೆಡಿಎಸ್ ನಲ್ಲಿ ಇರೋರು ಇಲ್ವಾ, ರಾಜೀನಾಮೆ ಕೊಡಲು ನ್ಯಾಯಾಲಯ ಹೇಳಿದೆಯಾ, ಕೇಂದ್ರದಲ್ಲಿ ಮಂತ್ರಿ ಆದವರಿಗೆ ಜವಾಬ್ದಾರಿ ಬೇಡ್ವಾ, ಕುಮಾರಸ್ವಾಮಿಗೆ ರಾಜೀನಾಮೆ ಕೊಡು ಅಂದರೆ ಕೊಡುತ್ತಾರಾ ಎಂದು ಪ್ರಶ್ನಿಸಿದರು.

136 ಸ್ಥಾನ ಗೆದ್ದು ಸಿಎಂ ಆಗಿರುವ ಸಿದ್ದರಾಮಯ್ಯ ರಾಜೀನಾಮೆ ಕೊಡಲು ಆಗುತ್ತಾ. ರಾಜೀನಾಮೆ ಕೊಡಿ, ರಾಜೀನಾಮೆ ಕೊಡಿ ಅಂದರೆ ಕೊಡುವುದಕ್ಕೆ ಆಗುತ್ತಾ? ಒಂದು ಅತ್ಯಾಚಾರ, ಕೊಲೆ ಪ್ರಕರಣವನ್ನು ತಿಂಗಳು ಗಟ್ಟಲೆ ಮಾಧ್ಯಮ ತೋರಿಸುತ್ತದೆ. ಒಂದು ಎಫ್ ಐ ಆರ್ ನಾ ಎಷ್ಟು ದಿನ ತೋರಿಸುತ್ತೀರಾ? ಯಾರ ಯಾರ ಮೇಲೆ ಎಫ್ ಐ ಆರ್ ಆಗಿದ್ಯೋ ಅವರೆಲ್ಲರೂ ರಾಜೀನಾಮೆ ಕೊಡಿ. ಎಲ್ಲಾ ವಿಧಾನಸೌಧದ ಮುಂದೆ ನಿಂತುಕೊಳ್ಳಿ, ಬನ್ನಿ ನೋಡೋಣ. ಕೇಂದ್ರದಿಂದ ರಾಜ್ಯಕ್ಕೆ ಏನು ತರಬೇಕೋ ಅದನ್ನು ನೋಡಿ. ಅದನ್ನು ಬಿಟ್ಟು ಬರೀ ರಾಜೀನಾಮೆ ಕೇಳುತ್ತಾ ಕೂತರೆ ಹೇಗೆ ಎಂದು ಕಿಡಿಕಾರಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ. ಹರಿಪ್ರಸಾದ್

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

SCROLL FOR NEXT