ಸಾಂದರ್ಭಿಕ ಚಿತ್ರ 
ರಾಜಕೀಯ

ಮುಡಾ ಹಗರಣದ ತನಿಖೆ CBIಗೆ ವರ್ಗಾಯಿಸಿ: ಸರ್ಕಾರಕ್ಕೆ BJP ಆಗ್ರಹ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆಯಲ್ಲಿ ನಡೆದಿರುವ ಅಕ್ರಮಗಳ ತನಿಖೆಯನ್ನು ಸಿಬಿಐಗೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಬಿಜೆಪಿ ಒತ್ತಾಯಿಸಿದೆ.

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆಯಲ್ಲಿ ನಡೆದಿರುವ ಅಕ್ರಮಗಳ ತನಿಖೆಯನ್ನು ಸಿಬಿಐಗೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಬಿಜೆಪಿ ಒತ್ತಾಯಿಸಿದೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ಎಂಎಲ್‌ಸಿ ಎನ್‌ ರವಿಕುಮಾರ್‌ಅವರು, ಸಿಎಂ ಸಿದ್ದರಾಮಯ್ಯ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಬೇಕೆಂದು ಆಗ್ರಹಿಸಿದರು.

ಮುಡಾ ಪ್ರಕರಣದಲ್ಲಿ ಜೆಡಿಎಸ್‌ನ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡ ಅವರು ಸಿದ್ದರಾಮಯ್ಯ ಅವರನ್ನು ಬೆಂಬಲಿಸಿರುವ ಕುರಿತು ಪ್ರತಿಕ್ರಿಯಿಸಿ, ತಮ್ಮ ನಿವೇಶನಗಳನ್ನು ಕಳೆದುಕೊಳ್ಳುವ ಭೀತಿಯಿಂದ ಈ ರೀತಿ ಹೇಳಿಕೆ ನೀಡಿರಬಹುದು ಎಂದು ಹೇಳಿದರು.

ದಸರಾ ಉದ್ಘಾಟನೆ ವೇಳೆ ಸಿಎಂ ರಾಜೀನಾಮೆ ನೀಡುವ ಅಗತ್ಯವಿಲ್ಲ ಎಂದು ಜೆಡಿಎಸ್ ಮುಖಂಡರು ಬಹಿರಂಗವಾಗಿಯೇ ಹೇಳಿಕೆ ನೀಡಿದ್ದರು.

ಇದೇ ವೇಳೆ ಮೈಸೂರಿನಲ್ಲಿ ಇತ್ತೀಚೆಗೆ ನಡೆದ ದಸರಾ ಉದ್ಘಾಟನಾ ಸಮಾರಂಭದಲ್ಲಿ ಖ್ಯಾತ ಸಾಹಿತಿ ಹಂಪ ನಾಗರಾಜಯ್ಯ ಅವರು ರಾಜಕೀಯ ಮಾತನಾಡಿದ್ದಕ್ಕಾಗಿ ಮತ್ತು ಸಿದ್ದರಾಮಯ್ಯನವರನ್ನು ಹೊಗಳಿದ್ದಕ್ಕಾಗಿ ವಾಗ್ದಾಳಿ ನಡೆಸಿದರು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕದ ಸುಂಕ: ಜವಳಿ ವಲಯದ ಒತ್ತಡ ಕಡಿಮೆ ಮಾಡಲು 40 ಪ್ರಮುಖ ಆಮದು ದೇಶ ಗುರುತು

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

SCROLL FOR NEXT