ಸಾಮಾಜಿಕ ಆರ್ಥಿಕ, ಶೈಕ್ಷಣಿಕ ಸಮೀಕ್ಷೆಯನ್ನು ಅಂಗೀಕಾರ ಮಾಡಿ, ಜಾರಿಗೆ ತರಬೇಕೆಂದು ಒತ್ತಾಯಿಸಿ ಸಿಎಂಗೆ ಮನವಿ ಸಲ್ಲಿಸಿದ ಶಾಸಕರು 
ರಾಜಕೀಯ

ಜಾತಿ ಗಣತಿ ವರದಿ ಜಾರಿ ಕುರಿತು ಅಕ್ಟೋಬರ್ 18 ರಂದು ಸಚಿವ ಸಂಪುಟದಲ್ಲಿ ಚರ್ಚೆ: ಸಿಎಂ ಸಿದ್ದರಾಮಯ್ಯ

ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಂಸದರಿಗೂ ಈ ಸಭೆಗೆ ಆಹ್ವಾನಿಸಲಾಗಿತ್ತು. ಆದರೆ ಯಾರೂ ಬಂದಿಲ್ಲ. ಬಿಜೆಪಿ ಎಂಎಲ್ ಸಿ ಎನ್ ರವಿಕುಮಾರ್ ಸೇರಿದಂತೆ ಸುಮಾರು 30 ಶಾಸಕರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಬೆಂಗಳೂರು: ಜಾತಿ ಗಣತಿ ಎಂದು ಜನಪ್ರಿಯವಾಗಿರುವ ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿ ಜಾರಿಗೊಳಿಸುವ ಬಗ್ಗೆ ಅಕ್ಟೋಬರ್ 18 ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಹೇಳಿದ್ದಾರೆ.

ಜಾತಿ ಗಣತಿ ವರದಿ ಕುರಿತು ಇಂದು ಹಿಂದುಳಿದ ವರ್ಗಗಳ ಸಚಿವರು ಮತ್ತು ಶಾಸಕರೊಂದಿಗೆ ಸಭೆ ನಡೆಸಿದ ನಂತರ ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಂಸದರಿಗೂ ಈ ಸಭೆಗೆ ಆಹ್ವಾನಿಸಲಾಗಿತ್ತು. ಆದರೆ ಯಾರೂ ಬಂದಿಲ್ಲ. ಬಿಜೆಪಿ ಎಂಎಲ್ ಸಿ ಎನ್ ರವಿಕುಮಾರ್ ಸೇರಿದಂತೆ ಸುಮಾರು 30 ಶಾಸಕರು ಸಭೆಯಲ್ಲಿ ಪಾಲ್ಗೊಂಡಿದ್ದರು ಮತ್ತು ಸಾಮಾಜಿಕ ಆರ್ಥಿಕ, ಶೈಕ್ಷಣಿಕ ಸಮೀಕ್ಷೆಯನ್ನು ಅಂಗೀಕಾರ ಮಾಡಿ, ಜಾರಿಗೆ ತರಬೇಕೆಂದು ಒತ್ತಾಯಿಸಿ ಮನವಿ ಸಲ್ಲಿಸಿದ್ದಾರೆ ಎಂದರು.

ಇಡೀ ದೇಶದಲ್ಲಿ ಇಂತಹ ಸಮೀಕ್ಷೆ ನಡೆಸಿದ ಪ್ರಥಮ ರಾಜ್ಯ ಕರ್ನಾಟಕ. ಅಕ್ಟೋಬರ್ 18 ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿದ ನಂತರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.

ಇದು ಹಿಂದುಳಿದ ವರ್ಗಗಳ ಜಾತಿ ಸಮೀಕ್ಷೆ ಮಾತ್ರ ಅಲ್ಲ ಎಂದು ಸ್ಪಷ್ಟಪಡಿಸಲು ಬಯಸುತ್ತೇನೆ. ಇದು 7 ಕೋಟಿ ಕನ್ನಡಿಗರ ಸಮೀಕ್ಷೆಯಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.

2013–18ರಲ್ಲಿ ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಎಚ್.ಕಾಂತರಾಜು ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಆಯೋಗದವರು ಸಾಕಷ್ಟು ಸಮಯ ತೆಗೆದುಕೊಂಡು ಸಮೀಕ್ಷೆ ನಡೆಸಿದ್ದಾರೆ. ರಾಜ್ಯದ ಮನೆಮನೆಗೆ ಭೇಟಿ ನೀಡಿ ಸಮೀಕ್ಷೆ ಮಾಡಿರುವುದಾಗಿ ಕಾಂತರಾಜು ಅವರು ತಿಳಿಸಿದ್ದಾರೆ. ನಾನು ಇಲ್ಲಿಯವರೆಗೂ ವರದಿಯನ್ನು ಪರಿಶೀಲಿಸಿಲ್ಲ.

ಹಿಂದೆ ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಕಾಂತರಾಜು ವರದಿ ಪೂರ್ಣಗೊಂಡಿರಲಿಲ್ಲ. ಆದ್ದರಿಂದ ನನ್ನ ಅವಧಿಯಲ್ಲಿ ಜಾತಿ ಗಣತಿ ವರದಿಯನ್ನು ಸ್ವೀಕರಿಸಲು ಮತ್ತು ಜಾರಿಗೊಳಿಸಲು ಸಾಧ್ಯವಾಗಿರಲಿಲ್ಲ. ನಂತರ ಎಚ್.ಡಿ.ಕುಮಾರಸ್ವಾಮಿಯವರು ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಕಾಂತುರಾಜು ಅವರು ವರದಿಯನ್ನು ಸಲ್ಲಿಸಲು ಸಿದ್ಧತೆ ನಡೆಸಿದ್ದರು. ಆದರೆ ಎಚ್​ಡಿ ಕುಮಾರಸ್ವಾಮಿ ವರದಿ ಸ್ವೀಕರಿಸಲು ಒಪ್ಪಿರಲಿಲ್ಲ. ನಂತರ ಬಿಜೆಪಿ ಸರ್ಕಾರ ಬಂದರೂ, ವರದಿಯನ್ನು ಸ್ವೀಕರಿಸಲಿಲ್ಲ ಎಂದರು.

ಕಾಂತರಾಜು ಅವರ ಅಧ್ಯಕ್ಷಾವಧಿ ಪೂರ್ಣಗೊಂಡ ನಂತರ ಜಯಪ್ರಕಾಶ್ ಹೆಗ್ಗಡೆಯವರು ಆಯೋಗದ ಅಧ್ಯಕ್ಷರಾದರು. ಅವರು ಕೋರಿದಂತೆ ವರದಿ ಸಲ್ಲಿಕೆಗೆ ಮೂರು ತಿಂಗಳ ಅವಕಾಶ ಕೊಡಲಾಗಿತ್ತು. ನಂತರ ಆ ವರದಿಯನ್ನು ಸ್ವೀಕರಿಸಲಾಗಿದೆ. ಸ್ವೀಕರಿಸಿದ ವರದಿಯನ್ನು ಜಾರಿಗೊಳಿಸಲು ಎಲ್ಲರಿಂದಲೂ ಒತ್ತಾಯ ಬಂದಿದೆ. ಈ ಹಿನ್ನಲೆಯಲ್ಲಿ ಇಂದು ಹಿಂದುಳಿದ ವರ್ಗಗಳ ಶಾಸಕರು ಸಭೆ ನಡೆಸಿ ವರದಿಯನ್ನು ಜಾರಿಗೊಳಿಸುವಂತೆ ಮನವಿ ಸಲ್ಲಿಸಿದ್ದಾರೆ.

ಇತ್ತೀಚೆಗಷ್ಟೇ ಮೈಸೂರಿನ ಒಂದು ಕಾರ್ಯಕ್ರಮದಲ್ಲಿ ನಾನು ತಿಳಿಸಿದಂತೆ, ಸಾಮಾಜಿಕ ಆರ್ಥಿಕ, ಶೈಕ್ಷಣಿಕ ಸಮೀಕ್ಷೆಯನ್ನು ಸ್ವೀಕರಿಸಲಾಗಿದ್ದು, ಈ ವರದಿಯ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ ನಂತರ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದೆ. ಅಕ್ಟೋಬರ್ 18 ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ವರದಿಯನ್ನು ಬಹುತೇಕ ಮಂಡಿಸುವ ಸಾಧ್ಯತೆಯಿದೆ. ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ ನಂತರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದಿದ್ದಾರೆ.

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಂದಿನ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ ಅವರು ಕಳೆದ ಫೆ. 29ರಂದು ಸಿಎಂ ಸಿದ್ದರಾಮಯ್ಯ ಅವರಿಗೆ ವರದಿ ಸಲ್ಲಿಸಿದ್ದರು.

ಸಮಾಜದ ಕೆಲವು ವರ್ಗಗಳು ಮತ್ತು ಆಡಳಿತಾರೂಢ ಕಾಂಗ್ರೆಸ್‌ನ ಆಕ್ಷೇಪಗಳ ನಡುವೆ ವರದಿಯನ್ನು ಸಲ್ಲಿಸಲಾಗಿತ್ತು. ಆದರೆ ರಾಜ್ಯದ ಎರಡು ಪ್ರಬಲ ಸಮುದಾಯಗಳಾದ ಒಕ್ಕಲಿಗರು ಮತ್ತು ಲಿಂಗಾಯತರು ಈ ಸಮೀಕ್ಷೆಯನ್ನು "ಅವೈಜ್ಞಾನಿಕ" ಎಂದು ಕರೆದಿದ್ದು, ಇದನ್ನು ತಿರಸ್ಕರಿಸಬೇಕು ಮತ್ತು ಹೊಸದಾಗಿ ಸಮೀಕ್ಷೆ ನಡೆಸಬೇಕು ಎಂದು ಒತ್ತಾಯಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಕಾಂಗ್ರೆಸ್ ಗೆ ಅವಮಾನವಾಗುವ ಹೇಳಿಕೆ ನೀಡಲು ನಿಮಗೆ ಯಾರ ಒತ್ತಡವಿದೆ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

SCROLL FOR NEXT