ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ 
ರಾಜಕೀಯ

ಸಿದ್ದರಾಮಯ್ಯ ಬದಲಿಗೆ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲು ಸಾಧ್ಯವಾಗದು; ಕಾಂಗ್ರೆಸ್ ನಾಯಕರು ಅವರನ್ನು ಒಪ್ಪಲ್ಲ: ವಿಜಯೇಂದ್ರ

ಮುಡಾ ಹಗರಣವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುರ್ಚಿಗೆ ಕಂಟಕ ತಂದಿದ್ದು, ಅವರು ತಮ್ಮ ಅವಧಿಯನ್ನು ಪೂರ್ಣಗೊಳಿಸುವುದಿಲ್ಲ ಎಂದು ಅವರ ಸಂಪುಟದ ಮಂತ್ರಿಗಳಿಗೆ ತಿಳಿದಿತ್ತು.

ಬೆಳಗಾವಿ: ಸಿಎಂ ಹುದ್ದೆಯಿಂದ ಸಿದ್ದರಾಮಯ್ಯ ಅಧಿಕಾರದಿಂದ ಕೆಳಗಿಳಿದರೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ಪ್ರಬಲ ಆಕಾಂಕ್ಷಿ ಎಂದು ನಂಬಲಾಗಿದೆ, ಆದರೆ ಶಿವಕುಮಾರ್ ಮುಂದಿನ ಸಿಎಂ ಆಗುವುದಿಲ್ಲ.ಡಿ.ಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿಯಾಗಿ ಒಪ್ಪಿಕೊಳ್ಳಲು ಕಾಂಗ್ರೆಸ್ ನಾಯಕರು ಸಿದ್ಧರಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ.

ಗುರುವಾರ ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ವಿಜಯೇಂದ್ರ, ಕಾಂಗ್ರೆಸ್ ಸರ್ಕಾರ ರಚನೆಯಾದಾಗಿನಿಂದ ಯಾವುದೇ ಅಭಿವೃದ್ಧಿ ಯೋಜನೆಗಳನ್ನು ಕೈಗೆತ್ತಿಕೊಳ್ಳದ ಕಾರಣ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಕೋಮಾದಲ್ಲಿದೆ ಎಂದು ಜನರು ಭಾವಿಸಿದ್ದಾರೆ. ರಾಜ್ಯ ಸಚಿವ ಸಂಪುಟದ ಯಾವೊಬ್ಬ ಸಚಿವರು ಜಿಲ್ಲೆಗಳಿಗೆ ಭೇಟಿ ನೀಡದೇ ಬೆಂಗಳೂರಿಗೆ ಸೀಮಿತರಾಗಿದ್ದಾರೆ ಎಂದರು. ಮುಡಾ ಹಗರಣವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುರ್ಚಿಗೆ ಕಂಟಕ ತಂದಿದ್ದು, ಅವರು ತಮ್ಮ ಅವಧಿಯನ್ನು ಪೂರ್ಣಗೊಳಿಸುವುದಿಲ್ಲ ಎಂದು ಅವರ ಸಂಪುಟದ ಮಂತ್ರಿಗಳಿಗೆ ತಿಳಿದಿತ್ತು.

ಮುಡಾ ಹಗರಣದಲ್ಲಿ ಸಿಲುಕಿರುವ ಸಿದ್ದರಾಮಯ್ಯ ಶೀಘ್ರವೇ ಅಧಿಕಾರದಿಂದ ಕೆಳಗಿಳಿಯಲಿದ್ದು, ಮುಂದಿನ ಸಿಎಂ ಆಯ್ಕೆ ಮಾಡುವುದು ಕಾಂಗ್ರೆಸ್ ನಾಯಕರಿಗೆ ಬಿಟ್ಟ ವಿಚಾರ ಎಂದು ವಿಜಯೇಂದ್ರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ರಾಜ್ಯದಲ್ಲಿ ಬಿಜೆಪಿಯು ಕಳೆದ ಮೂರು ತಿಂಗಳಲ್ಲಿ ಪ್ರಮುಖವಾಗಿ ವಾಲ್ಮೀಕಿ ನಿಗಮ ಮತ್ತು ಮುಡಾಕ್ಕೆ ಸಂಬಂಧಿಸಿದ ಹಲವಾರು ಪ್ರಮುಖ ಹಗರಣಗಳನ್ನು ಸಮರ್ಥವಾಗಿ ಬಯಲು ಮಾಡಿದೆ ಎಂದರು.

ಎರಡನೇ ಬಾರಿಗೆ ಸಿಎಂ ಆಗುವ ಯತ್ನದಲ್ಲಿ ಸಿದ್ದರಾಮಯ್ಯ ವೀರಶೈವ ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರವನ್ನೇ ಬಂಡವಾಳ ಮಾಡಿಕೊಳ್ಳಲು ಯತ್ನಿಸಿದ್ದರು. ವಿಶ್ವಾಸ ಕಳೆದುಕೊಂಡ ಅವರ ಮಂತ್ರಿಗಳು ರಾಜ್ಯದಲ್ಲಿ ಸಿಎಂ ಬದಲಾವಣೆಯ ವಿಷಯದ ಬಗ್ಗೆ ಚರ್ಚಿಸಲು ಗೌಪ್ಯ ಸಭೆಗಳನ್ನು ನಡೆಸುತ್ತಿದ್ದರು.

ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿಗಳ ಪಟ್ಟಿ ದೊಡ್ಡದಿದ್ದು ಮುಂದಿನ ಚಳಿಗಾಲದ ಅಧಿವೇಶನದ ವೇಳೆಗೆ ಕರ್ನಾಟಕಕ್ಕೆ ಹೊಸ ಮುಖ್ಯಮಂತ್ರಿ ಬರಲಿದ್ದಾರೆ, ಬರಮಾಡಿಕೊಳ್ಳಲು ಸಿದ್ಧರಾಗಿ ಎಂದು ಹೇಳಿದರು. ಕಾಂಗ್ರೆಸ್‌ನ ಒಳ ಜಗಳದಿಂದ ಸಿದ್ದರಾಮಯ್ಯನವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಪ್ರಯತ್ನಿಸುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರಗಳಲ್ಲಿ ಮುಳುಗಿದೆ. ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳು ವಿಫಲವಾಗಿವೆ. ಬರುವ ಚಳಿಗಾಲ ಅಧಿವೇಶನದ ವೇಳೆಗೆ ಕರ್ನಾಟಕಕ್ಕೆ ಹೊಸ ಮುಖ್ಯಮಂತ್ರಿಯನ್ನು ಬರಮಾಡಿಕೊಳ್ಳಲು ಸಿದ್ಧರಾಗಿ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

SCROLL FOR NEXT