ಡಿಸಿಎಂ ಡಿಕೆ.ಶಿವಕುಮಾರ್ 
ರಾಜಕೀಯ

ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್'ಗೆ ಗೆಲುವು: ಡಿ.ಕೆ ಶಿವಕುಮಾರ್ ವಿಶ್ವಾಸ

ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾಂವಿ ಕ್ಷೇತ್ರಗಳಿಗೆ ಚುನಾವಣಾ ಆಯೋಗ ಉಪಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಗೆ ಈಗಾಗಲೇ ಸಿದ್ಥತೆ ಆರಂಭಿಸಿದ್ದು, ಗೆಲ್ಲುವ ವಿಶ್ವಾಸವಿದೆ.

ಬೆಂಗಳೂರು: ಉಪಚುನಾವಣೆ ಸೇರಿದಂತೆ ಎಲ್ಲಾ ಚುನಾವಣೆಗಳಿಗೂ ಕಾಂಗ್ರೆಸ್ ಸಿದ್ಧವಿದ್ದು, ಮೂರೂ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವ ಸಾಧಿಸುವ ವಿಶ್ವಾಸವಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಮಂಗಳವಾರ ಹೇಳಿದರು.

ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾಂವಿ ಕ್ಷೇತ್ರಗಳಿಗೆ ಚುನಾವಣಾ ಆಯೋಗ ಉಪಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಗೆ ಈಗಾಗಲೇ ಸಿದ್ಥತೆ ಆರಂಭಿಸಿದ್ದು, ಗೆಲ್ಲುವ ವಿಶ್ವಾಸವಿದೆ ಎಂದು ಹೇಳಿದರು.

ಇದೇ ವೇಳೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಯಾರು ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಈ ಚುನಾವಣೆಯಲ್ಲಿ ನಾವೇ ಅಭ್ಯರ್ಥಿಗಳು ಎಂದು ತಿಳಿಸಿದರು.

ಬಿಜೆಪಿ ಮುಖಂಡ ಸಿ.ಪಿ.ಯೋಗೇಶ್ವರ್ ಅವರು ತಮ್ಮ ಪಕ್ಷದ ವಿರುದ್ಧ ಬಂಡಾಯವೆದ್ದಿದ್ದಾರೆ ಎಂಬ ಊಹಾಪೋಹಗಳ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿ, ಜೆಡಿಎಸ್-ಬಿಜೆಪಿ ಮೈತ್ರಿಕೂಟ ಅಧಿಕೃತವಾಗಿ ಅಭ್ಯರ್ಥಿಯನ್ನು ಘೋಷಿಸಿದ ನಂತರ ಮತ್ತು ಯೋಗೇಶ್ವರ ಅವರ ನಿಲುವು ತಳೆದ ನಂತರವೇ ಈ ಬಗ್ಗೆ ಮಾತನಾಡುತ್ತೇನೆ ಎಂದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮಾತನಾಡಿ, ಉಪಚುನಾವಣೆಯಲ್ಲಿ ಬಿಜೆಪಿ ಪರ ಹಾಗೂ ಅಭಿವೃದ್ಧಿ ಪರ ಹೋರಾಟಕ್ಕೆ ಮತದಾರರು ಬೆಂಬಲ ನೀಡಿ, ರಾಜ್ಯದ ಅಭಿವೃದ್ಧಿ ಕಡೆಗಣಿಸಿರುವ ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!