ಡಿ.ಕೆ ಶಿವಕುಮಾರ್ 
ರಾಜಕೀಯ

ಪ್ರಕೃತಿಗೆ ಕಡಿವಾಣ ಹಾಕಲು ಸಾಧ್ಯವೇ? ವಿರೋಧ ಪಕ್ಷಗಳು ರಾಜ್ಯದ ಮಾನ ತೆಗೆಯುವುದನ್ನು ನಿಲ್ಲಿಸಲಿ: ಡಿ.ಕೆ ಶಿವಕುಮಾರ್

ಪ್ರಕೃತಿಗೆ ಕಡಿವಾಣ ಹಾಕಲು ಸಾಧ್ಯವೇ? ಚಂಡಮಾರುತ ತಡೆಯಲು ಸಾಧ್ಯವೇ? ಇದನ್ನು ಅರ್ಥ ಮಾಡಿಕೊಳ್ಳದ ವಿರೋಧ ಪಕ್ಷಗಳು ರಾಜ್ಯದ ಮಾನ ಹರಾಜು ಹಾಕುವುದನ್ನು ನಿಲ್ಲಿಸಬೇಕು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರು: ಬೆಂಗಳೂರಿನಲ್ಲಿ ಅನಿರೀಕ್ಷಿತವಾಗಿ ಸುರಿಯುತ್ತಿರುವ ಭಾರಿ ಮಳೆಯನ್ನು ನಿಭಾಯಿಸಲು ಸರ್ಕಾರ ಸಮರ್ಥವಾಗಿದೆ. ಪ್ರಕೃತಿಗೆ ಕಡಿವಾಣ ಹಾಕಲು ಸಾಧ್ಯವೇ? ಚಂಡಮಾರುತ ತಡೆಯಲು ಸಾಧ್ಯವೇ? ಇದನ್ನು ಅರ್ಥ ಮಾಡಿಕೊಳ್ಳದ ವಿರೋಧ ಪಕ್ಷಗಳು ರಾಜ್ಯದ ಮಾನ ಹರಾಜು ಹಾಕುವುದನ್ನು ನಿಲ್ಲಿಸಬೇಕು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಬುಧವಾರ ಪ್ರತಿಕ್ರಿಯೆ ನೀಡಿದ ಅವರು, ಬೆಂಗಳೂರಿನಲ್ಲಿ ಸುರಿಯುತ್ತಿರುವ ಭಾರಿ ಮಳೆ ಬಗ್ಗೆ ಪ್ರತಿಕ್ರಿಯಿಸಿದ ಅವರು ಬೆಂಗಳೂರಿನಲ್ಲಿ ಹೆಚ್ಚಿನ ಮಳೆಯಾಗುತ್ತಿರುವ ಹಿನ್ನೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶಾಲೆಗಳಿಗೆ ರಜೆ ನೀಡಲಾಗಿದೆ. ಇಂದು (ಬುಧವಾರ) ಕೂಡ ಮಳೆ ಸಾಧ್ಯತೆ ಇದೆ, ಸಂಚಾರ ದಟ್ಟಣೆಯಾಗಲಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ತಿಳಿಸಿದರು.

ಕಾವೇರಿ 5ನೇ ಹಂತದ ಕುಡಿಯುವ ನೀರಿನ ಯೋಜನೆ ಕಾರ್ಯಕ್ರಮದಿಂದ ಮರಳಿದ ನಂತರ ಇಂದು ಸಂಜೆ ಪೊಲೀಸ್ ಇಲಾಖೆ, ಬಿಬಿಎಂಪಿ ಹಾಗೂ ಅಗ್ನಿಶಾಮಕ ದಳದ ಅಧಿಕಾರಿಗಳ ಜತೆ ಮತ್ತೊಂದು ಸುತ್ತಿನ ಸಭೆ ನಡೆಸಿ ಪರಿಸ್ಥಿತಿ ಅವಲೋಕನ ಮಾಡುತ್ತೇನೆ ಎಂದು ತಿಳಿಸಿದರು. ವಿರೋಧ ಪಕ್ಷಗಳ ನಾಯಕರ ಟ್ವೀಟ್ ಗಳನ್ನು ನೋಡಿದೆ. ಪ್ರಕೃತಿಗೆ ನಾವು ಕಡಿವಾಣ ಹಾಕಿ ಬುದ್ದಿಹೇಳಲು ಸಾಧ್ಯವೇ? ಚಂಡಮಾರುತದ ಪರಿಣಾಮದಿಂದ ಅನಿರೀಕ್ಷಿತವಾಗಿ ಮಳೆ ಸುರಿದಿದ್ದು, ಇನ್ನು ಹೆಚ್ಚಿನ ಮಳೆ ಬಂದರೂ ಅದನ್ನು ನಿಭಾಯಿಸಲು ಸರ್ಕಾರ ಹಾಗೂ ಜನರು ಸಮರ್ಥರಿದ್ದೇವೆ" ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನಟ ದೇವರಾಜ್ 2ನೇ ಪುತ್ರ ನಟ ಪ್ರಣಮ್ ನಿಶ್ಚಿತಾರ್ಥ

Nepal Floods: ನೇಪಾಳದ ವಿನಾಶಕಾರಿ ಪ್ರವಾಹಕ್ಕೆ ಇದೇನಾ ಕಾರಣ? ಉಪಗ್ರಹ ಚಿತ್ರಗಳಲ್ಲಿ ಸ್ಫೋಟಕ ಸುಳಿವು!

'Chhatron Ki Goonj' ಕಾರ್ಯಕ್ರಮದ ವೇಳೆ Rahul Gandhi ಮಾಡಿದ 29 ತಪ್ಪುಗಳ ದಾಖಲೆ ನೀಡಿದ ಜೂಟ್ ಕಿ ಗೂಂಜ್ ವೆಬ್​ಸೈಟ್!

ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ವಿರೋಧ: ಮೇಯರ್ ಮಮ್ದಾನಿ ವಿರುದ್ಧ ಅಮೆರಿಕದ ಖ್ಯಾತ ಗಾಯಕಿ ಕಿಡಿ!