ಪ್ರಲ್ಹಾದ್ ಜೋಶಿ ವಿರುದ್ಧ ಲಂಚದ ಆರೋಪದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪ್ರತಿಭಟನೆ 
ರಾಜಕೀಯ

ಕೇಂದ್ರ ಸಚಿವ ಸ್ಥಾನದಿಂದ ಪ್ರಲ್ಹಾದ್ ಜೋಶಿ ವಜಾಕ್ಕೆ ಒತ್ತಾಯ: ಕಾಂಗ್ರೆಸ್ ಪ್ರತಿಭಟನೆ

ಪ್ರಲ್ಹಾದ್ ಜೋಶಿ ಸಂಬಂಧಿಕರು ಟಿಕೆಟ್ ಗಾಗಿ 2 ಕೋಟಿ ಕೇಳಿದ್ದಾರೆ ಎಂದು ಎಫ್‌ಐಆರ್ ದಾಖಲಿಸಲಾಗಿದೆ.

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚಿಸಿದ ಆರೋಪದ ಮೇಲೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಂಬಂಧಿಕರ ವಿರುದ್ಧ ಎಫ್ ಐಆರ್ ದಾಖಲಾದ ನಂತರ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ನಗರದ ಗಾಂಧಿ ಭವನದ ಬಳಿ ಪ್ರತಿಭಟನೆ ನಡೆಸಿದರು.

ಕೇಂದ್ರ ಸಚಿವ ಸ್ಥಾನದಿಂದ ಜೋಶಿ ಅವರನ್ನು ವಜಾಗೊಳಿಸಬೇಕು ಹಾಗೂ ಪ್ರಕರಣ ದಾಖಲಾಗಿರುವ ಅವರ ಕುಟುಂಬ ಸದಸ್ಯರನ್ನು ಬಂಧಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಪ್ರಲ್ಹಾದ್ ಜೋಶಿ ಸಂಬಂಧಿಕರು ಟಿಕೆಟ್ ಗಾಗಿ 2 ಕೋಟಿ ಕೇಳಿದ್ದಾರೆ ಎಂದು ಎಫ್‌ಐಆರ್ ದಾಖಲಿಸಲಾಗಿದೆ. ಬಿಜೆಪಿ ಯಾವಾಗಲೂ ಸಿದ್ದರಾಮಯ್ಯ, ಕಾಂಗ್ರೆಸ್ ಬಗ್ಗೆ ಮಾತನಾಡುತ್ತದೆ. ಎಫ್‌ಐಆರ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಹೆಸರನ್ನು ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ. ಅವರು ದೇಶಕ್ಕೆ ನೀಡುತ್ತಿರುವ ಸಂದೇಶವೇನು? ಯಾವಾಗಲೂ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಬಗ್ಗೆ ಮಾತನಾಡುವ ಅವರು ಈಗ ಯಾಕೆ ಬಾಕಿ ಮುಚ್ಚಿಕೊಂಡಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಇದೇ ವೇಳೆ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ್ ಕೆಲ ಆರೋಪಿಗಳನ್ನು ಬಂಧಿಸಲಾಗಿದ್ದು, ಗೋಪಾಲ್ ಜೋಶಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಆತನನ್ನು ಬಂಧಿಸಿದರೆ ಆತನ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲಿದೆ.ಸದ್ಯ ಗೋಪಾಲ್ ಜೋಶಿ ತಲೆಮರೆಸಿಕೊಂಡಿದ್ದಾನೆ. ತನಿಖೆ ಪೂರ್ಣಗೊಂಡ ನಂತರ, ಯಾರು ಭಾಗಿಯಾಗಿದ್ದಾರೆಂದು ನಮಗೆ ತಿಳಿಯುತ್ತದೆ ಎಂದರು.

ಲೋಕಸಭಾ ಚುನಾವಣೆಯಲ್ಲಿ ಸುನೀತಾ ಚೌಹಾಣ್ ಅವರ ಪತಿ ದೇವಾನಂದ ಫುಲ್ಸಿಂಗ್ ಚೌಹಾಣ್ ಅವರಿಗೆ ಬಿಜೆಪಿ ಟಿಕೆಟ್ ನೀಡುವ ಭರವಸೆ ನೀಡಿದ ಆರೋಪದ ಮೇಲೆ ಪ್ರಹ್ಲಾದ್ ಜೋಶಿ ಅವರ ಸಹೋದರ ಗೋಪಾಲ್ ಜೋಶಿ ಮತ್ತು ಸಹೋದರಿ ವಿಜಯ ಲಕ್ಷ್ಮಿ ಜೋಶಿ ಮತ್ತು ಗೋಪಾಲ್ ಜೋಶಿ ಅವರ ಪುತ್ರ ಅಜಯ್ ಜೋಶಿ ವಿರುದ್ಧ ಪ್ರಕರಣ ದಾಖಲಾಗಿದೆ. ಸುನೀತಾ ಚೌಹಾಣ್ ಅವರು ಪ್ರಹ್ಲಾದ್ ಜೋಶಿ ಅವರ ಸಹೋದರ ಗೋಪಾಲ್ ಜೋಶಿ, ಸಹೋದರಿ ವಿಜಯಲಕ್ಷ್ಮಿ ಮತ್ತು ಗೋಪಾಲ್ ಜೋಶಿ ಅವರ ಪುತ್ರ ಅಜಯ್ ಜೋಶಿ ವಿರುದ್ಧ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಗುರುವಾರ ಸಂಜೆ ಐದು ಗಂಟೆಗೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT