ಬಸನಗೌಡ ಪಾಟೀಲ್ ಯತ್ನಾಳ್ 
ರಾಜಕೀಯ

ಜೆಡಿಎಸ್ ಗೆ ಪುನರ್ಜನ್ಮ ಕೊಟ್ಟಿದ್ದೇವೆ; ಕುಮಾರಸ್ವಾಮಿ ಚನ್ನಪಟ್ಟಣ ಕ್ಷೇತ್ರ ತ್ಯಾಗ ಮಾಡಲಿ: ಬಸನಗೌಡ ಪಾಟೀಲ್ ಯತ್ನಾಳ್

ನಮಗೆ ಹೆಚ್.ಡಿ ಕುಮಾರಸ್ವಾಮಿ ಸಹಾಯಬೇಕು. ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಶಕ್ತಿ ಬೇಕು. ಮೈತ್ರಿಯಿಂದ ಎರಡೂ ಪಕ್ಷದವರಿಗೆ ಲಾಭ ಆಗಿದೆ. ನಮ್ಮ ಪಕ್ಷದ ಕಾರ್ಯಕರ್ತರಿಗೆ ಟಿಕೆಟ್ ಕೊಡಬೇಕು ಎಂಬುದು ಮುಖ್ಯ.

ಹುಬ್ಬಳ್ಳಿ: ಜೆಡಿಎಸ್ ಗೆ ನಾವು ಪುನರ್ಜನ್ಮ ನೀಡಿದ್ದೇವೆ. ಹೀಗಾಗಿ ಹೆಚ್.ಡಿ ಕುಮಾರಸ್ವಾಮಿ ಚನ್ನಪಟ್ಟಣ ಟಿಕೆಟ್ ತ್ಯಾಗ ಮಾಡಲಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ನಮಗೆ ಹೆಚ್.ಡಿ ಕುಮಾರಸ್ವಾಮಿ ಸಹಾಯಬೇಕು. ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಶಕ್ತಿ ಬೇಕು. ಮೈತ್ರಿಯಿಂದ ಎರಡೂ ಪಕ್ಷದವರಿಗೆ ಲಾಭ ಆಗಿದೆ. ನಮ್ಮ ಪಕ್ಷದ ಕಾರ್ಯಕರ್ತರಿಗೆ ಟಿಕೆಟ್ ಕೊಡಬೇಕು ಎಂಬುದು ಮುಖ್ಯ. ನಾವು ಜೆಡಿಎಸ್ ಗೆ ಪುನರ್ಜನ್ಮ ಕೊಟ್ಟಿದ್ದೇವೆ. ಹೀಗಾಗಿ ಕುಮಾರಸ್ವಾಮಿ ಟಿಕೆಟ್ ತ್ಯಾಗ ಮಾಡಬೇಕು, ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ಗೆ ಎನ್ ಡಿಎ ಟಿಕೆಟ್ ನೀಡಬೇಕು ಎಂದು ಹೇಳಿದರು. ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ದೊಡ್ಡ ಹೃದಯ ಪ್ರದರ್ಶಿಸಿ ಚನ್ನಪಟ್ಟಣ ಕ್ಷೇತ್ರವನ್ನು ಬಿಜೆಪಿಗೆ ಬಿಟ್ಟುಕೊಡಬೇಕು.

ಶಿಗ್ಗಾವಿ ಟಿಕೆಟ್ ಬೊಮ್ಮಾಯಿ ಮಗನಿಗೆ ನೀಡುವ ವಿಚಾರವಾಗಿ ಪ್ರತಿಕ್ರಿಯಿಸಿದ ಯತ್ನಾಳ್, ಬೊಮ್ಮಾಯಿ ಅವರನ್ನು ಯಾಕೆ ಎಳೆಯುತ್ತೀರಿ? ಅವರದ್ದೇನು ತಪ್ಪಿಲ್ಲ. ಕರ್ನಾಟಕದಲ್ಲಿ ನಂಬರ್ 1 ಇದ್ದವರಿಂದ ಇದು ಪಾಲನೆ ಆಗಬೇಕು. ಬೊಮ್ಮಾಯಿ ಅವರನ್ನ ಯಾಕೆ ಬಲಿ ಪಶು ಮಾಡ್ತೀರಿ? ಎಲ್ಲರಿಗೂ ಕೊಟ್ಟ ಮೇಲೆ ಅವರು ಮಗನಿಗೆ ಕೇಳಿದ್ದಾರೆ, ಉಪ ಚುನಾವಣೆ ಟಿಕೆಟ್ ವಿಚಾರವನ್ನು ನಮ್ಮ ಪಕ್ಷದ ಹಿರಿಯರು ನಿರ್ಣಯ ಮಾಡುತ್ತಾರೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಟಿ ತ್ರಿಶಾ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ಆರೋಪ: ನಾನು ಅವರ ಹೆಸರನ್ನೂ ಉಲ್ಲೇಖಿಸಿದ್ದೇನೆಯೇ? ಬಂಧನದ ಬಳಿಕ ಉದಯನಿಧಿ ಸ್ಟಾಲಿನ್

ನಟಿ ತ್ರಿಶಾ ಕುರಿತು ಆಕ್ಷೇಪಾರ್ಹ ಹೇಳಿಕೆ; DMK ನಾಯಕ ಉದಯನಿಧಿ ಸ್ಟಾಲಿನ್ ಪೊಲೀಸ್ ವಶಕ್ಕೆ, ತಮಿಳುನಾಡು ರಾಜಕೀಯದಲ್ಲಿ ತೀವ್ರ ಸಂಚಲನ..!

ಸಿದ್ದರಾಮಯ್ಯ ಮಾತಿಗೆ ಯಾವುದೇ ಬೆಲೆ ಇಲ್ಲ, ಅವರ ಆಪ್ತನಾಗಿದ್ದಕ್ಕೆ ಸಚಿವ ಸ್ಥಾನ ಕೈ ತಪ್ಪಿದೆ: CM ಡಿಕೆಶಿ ವಿರುದ್ಧ ಸುಧಾಕರ್ ಕಿಡಿ

Crass, cheap and derogatory': ನಟಿ ತ್ರಿಶಾಗೆ ಅಸಭ್ಯ, ಕೀಳುಮಟ್ಟದಲ್ಲಿ ಅಪಮಾನ, ಉದಯನಿಧಿ ಸ್ಟಾಲಿನ್ ಕ್ಷಮೆಯಾಚನೆಗೆ ಖುಷ್ಬೂ ಸುಂದರ್ ಒತ್ತಾಯ!

ಹೊಸ ಸುಂಕ ನೀತಿಗೆ ಅಮೆರಿಕದಲ್ಲೇ ಭಾರಿ ವಿರೋಧ: ಭಾರತ ಸೇರಿ 59 ದೇಶಗಳ ಪರ ನಿಂತ 25 ರಾಜ್ಯಗಳು; ಟ್ರಂಪ್ ಸರ್ಕಾರಕ್ಕೆ ಕಾನೂನು ಸಂಕಷ್ಟ..!