ಡಿಕೆ ಸುರೇಶ್ 
ರಾಜಕೀಯ

ಕುಮಾರಸ್ವಾಮಿ ಚದುರಂಗದಾಟದಿಂದ ನಿಖಿಲ್ ಗೆ ಟಿಕೆಟ್; ನಾಮಪತ್ರ ಸಲ್ಲಿಕೆ ನಂತರ ಕಣ್ಣೀರಿನ ನಾಟಕ ಪ್ರಾರಂಭ: ಡಿ.ಕೆ ಸುರೇಶ್

ಜೆಡಿಎಸ್ ಪಕ್ಷಕ್ಕೆ ಕುಮಾರಸ್ವಾಮಿ ಅವರೇ ಅಧಿನಾಯಕರು. ಎಲ್ಲವೂ ಅವರೇ ತೀರ್ಮಾನ ತೆಗೆದುಕೊಳ್ಳುತ್ತಾರೆ. ಬಲವಂತವಾಗಿ ಚುನಾವಣೆಗೆ ನಿಖಿಲ್ ಅವರನ್ನು ನಿಲ್ಲಿಸಲಾಗುತ್ತಿದೆ ಎನ್ನುವುದೆಲ್ಲಾ ಸುಳ್ಳು, ಅವರ ಉದ್ದೇಶ ಈ ಮೂಲಕ ಫಲ ನೀಡಿದೆ ಎಂದರು.

ಬೆಂಗಳೂರು: ನಿಖಿಲ್ ಅವರಿಗೆ ಚನ್ನಪಟ್ಟಣ ಟಿಕೆಟ್ ಸಿಗುವಂತೆ ಮಾಡಲು ಕುಮಾರಸ್ವಾಮಿ ಅವರು ಚದುರಂಗದಾಟ ಸೃಷ್ಟಿಸಿದರು ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಹಿರಿಯ ರಾಜಕಾರಣಿಯಾದ ಕುಮಾರಸ್ವಾಮಿ ಅವರು ಕಳೆದ 40 ವರ್ಷಗಳಿಂದ ಅವರ ದೃಷ್ಟಿಕೋನದಲ್ಲಿ ತಂತ್ರಗಾರಿಕೆ ಮಾಡಿಕೊಂಡು ಬಂದಿದ್ದಾರೆ. ಇದರ ಮುಂದುವರೆದ ಭಾಗವಿದು. ನಿಖಿಲ್ ಕುಮಾರಸ್ವಾಮಿ ಅಭ್ಯರ್ಥಿಯಾಗುತ್ತಾರೆ ಎನ್ನುವುದು ಚನ್ನಪಟ್ಟಣದ ಎಲ್ಲರಿಗೂ ತಿಳಿದಿದ್ದ ಸತ್ಯ ಎಂದರು.

ನಿಖಿಲ್ ಕುಮಾರಸ್ವಾಮಿ ಅವರೇ ಚನ್ನಪಟ್ಟಣ ಉಪಚುನಾವಣೆಯಲ್ಲಿ ಅಭ್ಯರ್ಥಿಯಾಗುತ್ತಾರೆ ಎನ್ನುವ ಸತ್ಯ ಎಲ್ಲರಿಗೂ ತಿಳಿದಿತ್ತು. ಜೆಡಿಎಸ್ ಪಕ್ಷಕ್ಕೆ ಕುಮಾರಸ್ವಾಮಿ ಅವರೇ ಅಧಿನಾಯಕರು. ಎಲ್ಲವೂ ಅವರೇ ತೀರ್ಮಾನ ತೆಗೆದುಕೊಳ್ಳುತ್ತಾರೆ. ಬಲವಂತವಾಗಿ ಚುನಾವಣೆಗೆ ನಿಖಿಲ್ ಅವರನ್ನು ನಿಲ್ಲಿಸಲಾಗುತ್ತಿದೆ ಎನ್ನುವುದೆಲ್ಲಾ ಸುಳ್ಳು, ಅವರ ಉದ್ದೇಶ ಈ ಮೂಲಕ ಫಲ ನೀಡಿದೆ” ಎಂದರು. ನಾಟಕ ಮಾಡಿ ನಿಖಿಲ್ ಗೆ ಟಿಕೆಟ್ ಗಳಿಸಿಕೊಂಡರೇ ಎಂದು ಕೇಳಿದಾಗ, “ಅದನ್ನು ಮಾಧ್ಯಮದವರು ಹೇಳಬೇಕು. ನಾಮಪತ್ರ ಸಲ್ಲಿಸಿದ ನಂತರ ನಾಟಕ ಪ್ರಾರಂಭವಾಗುತ್ತದೆ" ಎಂದರು. ಕಣ್ಣೀರು ಬರುತ್ತದೆಯೇ ಎಂದು ಮರುಪ್ರಶ್ನಿಸಿದಾಗ “ಬರಬಹುದೇನೋ, ಮಾಧ್ಯಮದವರು ಕಣ್ಣೀರು ಹಾಕಿ ಎಂದರೆ ಹಾಕುತ್ತಾರೆ” ಎಂದು ವ್ಯಂಗ್ಯವಾಗಿ ಉತ್ತರಿಸಿದರು.

ನಿಖಿಲ್ ಪ್ರಬಲ ಅಭ್ಯರ್ಥಿಯಾಗಬಲ್ಲರೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸುರೇಶ್, ಚುನಾವಣೆಗಳು ನಡೆಯುತ್ತಲೇ ಇರುತ್ತವೆ. ಇದರಿಂದ ಕುಮಾರಸ್ವಾಮಿ ಅವರಿಗೆ ಕಾರ್ಯಕರ್ತರ ಮೇಲಿನ ಪ್ರೀತಿ ಎಷ್ಟಿದೆ ಎಂಬುದು ತಿಳಿಯುತ್ತದೆ. ಚುನಾವಣೆಯಲ್ಲಿ ಒಂದೊಂದು ಮತವೂ ಮುಖ್ಯ ಎಂದು ಕಾಂಗ್ರೆಸ್ ಕೆಲಸ ಮಾಡುತ್ತಿದೆ. ಯಾರು ಪ್ರಭಾವಿಗಳು ಎನ್ನುವುದಕ್ಕಿಂತ, ನಾವು ಪಕ್ಷವನ್ನು ಗೆಲ್ಲಿಸಲು ಹೋರಾಟ ಮಾಡುತ್ತೇವೆ” ಎಂದರು.

ಒಂದು ವಾರಗಳ ಕಾಲ ದೇವೇಗೌಡರು ಚನ್ನಪಟ್ಟಣದಲ್ಲಿ ಪ್ರಚಾರ ಮಾಡುವುದರಿಂದ ಕಾಂಗ್ರೆಸ್ ಗೆಲುವಿಗೆ ತೊಡಕಾಗುವುದಿಲ್ಲವೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ದೇವೇಗೌಡರು ಇರುವುದೇ ಪ್ರಚಾರ ಮಾಡುವುದಕ್ಕೆ. ಅವರ ಮೊಮ್ಮಗನ ಪರವಾಗಿ ಪ್ರಚಾರ ಮಾಡಬೇಡಿ ಎಂದು ಹೇಳಲು ಆಗುತ್ತದೆಯೇ?. ನಾವು ನಮ್ಮ ಸರ್ಕಾರದ ಕಾರ್ಯಕ್ರಮಗಳನ್ನು ಮುಂದಿಟ್ಟುಕೊಂಡು ಚುನಾವಣೆಗೆ ಹೋಗುತ್ತೇವೆ” ಎಂದು ಹೇಳಿದರು.

ನೀವು ಅಭ್ಯರ್ಥಿಯಾಗಿಲ್ಲ ಎನ್ನುವ ಬೇಸರ ಹಾಗೂ ಪಕ್ಷದೊಳಗಿನ ಅಸಮಾಧಾನ ಸರಿಹೋಯಿತೇ ಎಂದು ಕೇಳಿದಾಗ, “ಪಕ್ಷದಲ್ಲಿ ಸಣ್ಣ ಬೇಸರವಿದೆ ಹೊರತು ಯಾವುದೇ ಅಸಮಾಧಾನವಿಲ್ಲ. ನಾನು ಮೊದಲಿನಿಂದಲೂ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದೇ, ಮಾಧ್ಯಮದವರೇ ನನ್ನ ಹೀರೋ ಮಾಡುತ್ತಿದ್ದಾರೆ” ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT