ಎಲ್.ಆರ್ ಶಿವರಾಮೇಗೌಡ 
ರಾಜಕೀಯ

ಮಂಡ್ಯ ಜನ ನರಸತ್ತವರು: HDK ವಿರುದ್ದ ವಾಗ್ದಾಳಿ ನಡೆಸುವ ಭರದಲ್ಲಿ ನಾಲಿಗೆ ಹರಿಬಿಟ್ಟ ಮಾಜಿ ಸಂಸದ ಶಿವರಾಮೇಗೌಡ

ರಾಮನಗರದಿಂದ ಕುಮಾರಸ್ವಾಮಿಯನ್ನ ಓಡಿಸಿದ್ದಾರೆ. ಆದರೆ, ಮಂಡ್ಯದವರೆಲ್ಲಾ ನರಸತ್ತವರು ಎಂದು ಇಲ್ಲಿಗೆ ಬಂದಿದ್ದಾರೆ. ಜಿಲ್ಲೆಯ ಮುಖಂಡರು ಈಗಲಾದರೂ ಎಚ್ಚೆತ್ತುಕೊಳ್ಳಿ. ನಿಮ್ಮಲ್ಲೂ ಗಂಡಸರಿದ್ದಾರೆ, ಹಾಸನದಿಂದ ಕರೆತಂದು ಮಂಡ್ಯದಲ್ಲಿ ಗಂಡಸರು ಮಾಡುವ ಅಗತ್ಯವಿಲ್ಲ, ಗಂಡಸರಾಗ್ರಪ್ಪ, ಕೈಗೆ ಬಳೆ‌ ತೊಟ್ಟುಕೊಳ್ಳಬೇಡಿ.

ಮಂಡ್ಯ: ಮಾಜಿ ಸಂಸದ ಎಲ್​ಆರ್​ ಶಿವರಾಮೇಶಗೌಡ ಬಿಜೆಪಿ ತೊರೆದು ಕಾಂಗ್ರೆಸ್​ ಸೇರುವ ನಿರ್ಧಾರ ಮಾಡಿದ್ದು, ಈ ನಡುವೆ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಅವರ ವಿರುದ್ಧ ವಾಗ್ದಾಳಿ ನಡೆಸುವ ಭರದಲ್ಲಿ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ.

ಜಿಲ್ಲೆಯ ನಾಗಮಂಗಲದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಂಸದ ಶಿವರಾಮೇಗೌಡ ಅವರು, ರಾಮನಗರದಿಂದ ಕುಮಾರಸ್ವಾಮಿಯನ್ನ ಓಡಿಸಿದ್ದಾರೆ. ಆದರೆ, ಮಂಡ್ಯದವರೆಲ್ಲಾ ನರಸತ್ತವರು ಎಂದು ಇಲ್ಲಿಗೆ ಬಂದಿದ್ದಾರೆ. ಜಿಲ್ಲೆಯ ಮುಖಂಡರು ಈಗಲಾದರೂ ಎಚ್ಚೆತ್ತುಕೊಳ್ಳಿ. ನಿಮ್ಮಲ್ಲೂ ಗಂಡಸರಿದ್ದಾರೆ, ಹಾಸನದಿಂದ ಕರೆತಂದು ಮಂಡ್ಯದಲ್ಲಿ ಗಂಡಸರು ಮಾಡುವ ಅಗತ್ಯವಿಲ್ಲ, ಗಂಡಸರಾಗ್ರಪ್ಪ, ಕೈಗೆ ಬಳೆ‌ ತೊಟ್ಟುಕೊಳ್ಳಬೇಡಿ ಎಂದು ಮಂಡ್ಯ ಜಿಲ್ಲೆಯ ಜನತೆಗೆ ಕರೆ‌ ಕೊಡುತ್ತಿದ್ದೇನೆಂದು ಹೇಳಿದ್ದಾರೆ.

ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದೇನೆ‌. ಯೋಗೇಶ್ವರ್ ರೀತಿ ನಾನೂ ಜಂಪಿಂಗ್ ಸ್ಟಾರ್‌‌. ಕಾಂಗ್ರೆಸ್ ಪಕ್ಷ ಸೇರಲು ನಿರ್ಧರಿಸಿದ್ದೇನೆ. ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಕಟ್ಟುವ ಉದ್ದೇಶದಿಂದ ಪಕ್ಷ ಸೇರಿದ್ದೆ. ವಿಧಾನಸಭೆ ಸೋಲಿನ ಬಳಿಕ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಆಯ್ತು. ಸಂಘಟನೆ ದೃಷ್ಠಿಯಿಂದ ಜೆಡಿಎಸ್‌ಗೆ ಮಂಡ್ಯ ಜಿಲ್ಲೆ ಬಿಟ್ಟು ಕೊಡದಂತೆ ವಿಜಯೇಂದ್ರ ಬಳಿ ಮನವಿ ಮಾಡಿದ್ದೆನು. ಯಾರಿಗೂ ಬಿಟ್ಟುಕೊಡುವ ಪ್ರಶ್ನೆ ಇಲ್ಲ, ಪಾರ್ಟಿ ಕಟ್ಟುತ್ತೇನೆ ಎಂದು ವಿಜಯೇಂದ್ರ ಭರವಸೆ ಕೊಟ್ಟಿದ್ದರು. ಆದರೆ, ಸಾರಾಸಗಟಾಗಿ ಬಿಜೆಪಿಯನ್ನ ಜೆಡಿಎಸ್‌ನವರು ಕತ್ತುಹಿಸುಕಿದರು. ಹೊಂದಾಣಿಕೆ ಬಳಿಕ ಬಿಜೆಪಿ ಪಕ್ಷದ ಉಸಿರುಗಟ್ಟಿಸಲಾಗಿದೆ ಎಂದು ಆರೋಪಿಸಿದರು.

ಡಾ. ಮಂಜುನಾಥ್ ಅಭ್ಯರ್ಥಿ ಮಾಡಲು ಯೋಗೇಶ್ವರ್ ಶ್ರಮವಹಿಸಿದ್ದರು. ಆದರೆ ಚನ್ನಪಟ್ಟಣದಲ್ಲಿ ಯೋಗೇಶ್ವರ್‌ರನ್ನೇ ಬಲಿ ಪಡೆದಿದ್ದಾರೆ. ತಮ್ಮ ಕುಟುಂಬದವರನ್ನ ಅಧಿಕಾರಕ್ಕೆ ತರಲು ದೇವೇಗೌಡರ ಕುಟುಂಬ ಒಂದೊಂದು ನರ ಬಲಿ ಪಡೆಯುತ್ತಾರೆ. ಚನ್ನಪಟ್ಟಣ ಜನ ದಡ್ಡರಲ್ಲ, ಯೋಗೇಶ್ವರ್ ಗೆಲುವು ನಿಶ್ಚಿತ. ನಿಖಿಲ್ ಅಲ್ಲ ಕುಮಾರಸ್ವಾಮಿ ನಿಂತರೂ ಏನು ಮಾಡಲಾಗಲ್ಲ. ಯೋಗೇಶ್ವರ್ ಆಚೆ ಕಳುಹಿಸಲು ವಿಜಯೇಂದ್ರ, ಯಡಿಯೂರಪ್ಪ ಕಾರಣ. ಬಿಜೆಪಿ ಪಕ್ಷದ ಗುಂಪುಗಾರಿಕೆಯಿಂದ ಯೋಗೇಶ್ವರ್ ಆಚೆ ಹೋದರು. ಪಾಪ ಈಗ ನಿಖಿಲ್‌ನನ್ನ ಚುನಾವಣಾ ಆಹುತಿ ಮಾಡುತ್ತಿದ್ದಾರೆಂದು ತಿಳಿಸಿದರು.

ಕುಮಾರಸ್ವಾಮಿ 2 ಬಾರಿ ಲಾಟರಿಯಲ್ಲಿ ಸಿಎಂ ಆದವರು‌. ಕಳೆದ ಚುನಾವಣೆಯಲ್ಲಿ ಕುಮಾರಸ್ವಾಮಿ ಗಾಡಿ ನಿಂತು ಹೋಗಿತ್ತು. ಪಾಪ ಮುಳುಗುವ ಹಡಗು ಎಂದು ಮಂಡ್ಯ ಜನರು ಕೈ ಹಿಡಿದರು. ಉನ್ನತ ಹುದ್ದೆಯಲ್ಲಿದ್ದು ಕುಮಾರಸ್ವಾಮಿ ಏನು ಮಾಡುತ್ತಿದ್ದಾರೆ..? ಮಂಡ್ಯದಲ್ಲಿ 4 ದಿನ, ಬೆಂಗಳೂರಲ್ಲಿ 4 ದಿನ ಇರುತ್ತಾರೆ. ದೇಶ, ವಿದೇಶ ಸುತ್ತಿ ಬೃಹತ್ ಕೈಗಾರಿಕಾಗಳ ಸ್ಥಾಪನೆ ಮಾಡಬೇಕಿತ್ತು. ಆದರೆ, ರಾಜ್ಯಕ್ಕೆ ಬಂದಾಗಲೆಲ್ಲಾ ಮುಡಾ ಕೇಸು, ಡಿಕೆಶಿ ಮುಖ ಕೆರೆಯುವ ಕೆಲಸ ಮಾಡುತ್ತಿದ್ದಾರೆ. ದೊಡ್ಡ ದೊಡ್ಡ ಕೈಗಾರಿಕಾ ತಂದು ಮಂಡ್ಯ ಜನರ ಋಣ ತೀರಿಸುವ ಕೆಲಸ ಕುಮಾರಸ್ವಾಮಿ ಮಾಡಬೇಕು ಎಂದು ಆಗ್ರಹಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT