ಡಿ.ಕೆ ಸಹೋದರರ ಜೊತೆ ಯೋಗೇಶ್ವರ್ ಮತ್ತು ರಘುನಂದನ್ ರಾಮಣ್ಣ  
ರಾಜಕೀಯ

ಡಿ.ಕೆ ಬ್ರದರ್ಸ್ ಸಂಧಾನ ಸಕ್ಸಸ್: ತಣ್ಣಗಾದ ರಘುನಂದನ್; ಯೋಗೇಶ್ವರ್ ಪರ ಪ್ರಚಾರ

ಶಿವಕುಮಾರ್ ಅವರು ಈ ಇಬ್ಬರು ನಾಯಕರನ್ನೂ ಸದಾಶಿವನಗರದ ತಮ್ಮ ನಿವಾಸಕ್ಕೆ ಮಂಗಳವಾರ ಬೆಳಗ್ಗೆ ಕರೆಸಿ ಡಿ ಕೆ ಸುರೇಶ್ ಅವರ ಸಮ್ಮುಖದಲ್ಲಿ ಮಾತುಕತೆ ನಡೆಸಿದರು. ನಂತರ ಇಬ್ಬರು ನಾಯಕರೂ ಪರಸ್ಪರ ಹಸ್ತಲಾಘವ ಮಾಡಿದರು.

ಬೆಂಗಳೂರು: ಬದಲಾದ ರಾಜಕೀಯ ಪರಿಸ್ಥಿತಿ ಹಿನ್ನೆಲೆಯಲ್ಲಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಟಿಕೆಟ್ ಕೈತಪ್ಪಿದ್ದರಿಂದ ಅಸಮಧಾನಗೊಂಡಿದ್ದ BMICAPA ಅಧ್ಯಕ್ಷ ರಘುನಂದನ್ ರಾಮಣ್ಣ ಮತ್ತು ಕಾಂಗ್ರೆಸ್ ಅಭ್ಯರ್ಥಿ ಸಿ ಪಿ ಯೋಗೇಶ್ವರ್ ನಡುವೆ ಸಂಧಾನ ನಡೆಸುವಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಹಾಗೂ ಮಾಜಿ ಸಂಸದ ಡಿ ಕೆ ಸುರೇಶ್ ಅವರು ಯಶಸ್ವಿಯಾಗಿದ್ದಾರೆ.

ಶಿವಕುಮಾರ್ ಅವರು ಈ ಇಬ್ಬರು ನಾಯಕರನ್ನೂ ಸದಾಶಿವನಗರದ ತಮ್ಮ ನಿವಾಸಕ್ಕೆ ಮಂಗಳವಾರ ಬೆಳಗ್ಗೆ ಕರೆಸಿ ಡಿ ಕೆ ಸುರೇಶ್ ಅವರ ಸಮ್ಮುಖದಲ್ಲಿ ಮಾತುಕತೆ ನಡೆಸಿದರು. ನಂತರ ಇಬ್ಬರು ನಾಯಕರೂ ಪರಸ್ಪರ ಹಸ್ತಲಾಘವ ಮಾಡಿದರು. ಯೋಗೇಶ್ವರ್ ಅವರ ಪರ ಪ್ರಚಾರ ನಡೆಸಿ, ಅವರ ಗೆಲುವಿಗೆ ಶ್ರಮಿಸುವುದಾಗಿ ರಘುನಂದನ್ ರಾಮಣ್ಣ ಅವರು ಇದೇ ಸಂದರ್ಭದಲ್ಲಿ ಹೇಳಿದರು.

ಕಳೆದ ಲೋಕಸಭಾ ಚುನಾವಣೆ ವೇಳೆ ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಚುನಾವಣೆ ಉಸ್ತುವಾರಿ ವಹಿಸಿಕೊಂಡಿದ್ದ ರಘುನಂದನ್ ರಾಮಣ್ಣ ಅವರು ತಳಮಟ್ಟದಿಂದ ಪಕ್ಷ ಸಂಘಟನೆ ಮಾಡಿದ್ದರು. ಚನ್ನಪಟ್ಟಣ ನಗರಸಭೆಯ 14 ಮಂದಿ ಜೆಡಿಎಸ್ ಸದಸ್ಯರು ಹಾಗೂ ಇಬ್ಬರು ಬಿಜೆಪಿ ಸದಸ್ಯರನ್ನು ಕಾಂಗ್ರೆಸ್ ಗೆ ಕರೆತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಇದಲ್ಲದೆ ತಾಲೂಕಿನಾದ್ಯಂತ ನೂರಾರು ಬಿಜೆಪಿ ಮತ್ತು ಜೆಡಿಎಸ್ ನಾಯಕರು, ಕಾರ್ಯಕರ್ತರನ್ನು ಕಾಂಗ್ರೆಸ್ ಪಕ್ಷಕ್ಕೆ ಕರೆತರುವಲ್ಲಿ ಯಶಸ್ವಿಯಾಗಿದ್ದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ 15ಸಾವಿರವಿದ್ದ ಕಾಂಗ್ರೆಸ್ ಮತ ಗಳಿಕೆ ಪ್ರಮಾಣ ಲೋಕಸಭೆ ಚುನಾವಣೆ ವೇಳೆಗೆ 87 ಸಾವಿರಕ್ಕೆ ಏರಿಕೆಯಾಗಿತ್ತು. ಇದಲ್ಲದೆ ಕ್ಷೇತ್ರಕ್ಕೆ ಸರಕಾರದ ನಾನಾ ಅಭಿವೃದ್ಧಿ ಯೋಜನೆಗಳ್ನು ತರುವಲ್ಲಿಯೂ ರಘುನಂದನ್ ರಾಮಣ್ಣ ಅವರು ಪ್ರಮುಖ ಪಾತ್ರ ವಹಿಸಿದ್ದರು. ಈಗ ಯೋಗೇಶ್ವರ್ ಪರ ಚುನಾವಣೆ ಪ್ರಚಾರ ನಡೆಸಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT