ನಿಖಿಲ್ ಕುಮಾರಸ್ವಾಮಿ 
ರಾಜಕೀಯ

ಮಾಜಿ ಪ್ರಧಾನಿ ಮೊಮ್ಮಗ, ಮಾಜಿ ಸಿಎಂ ಮಗನಾಗಿ ಹುಟ್ಟಿರುವುದೇ ನನ್ನ ದುರದೃಷ್ಟ: ಕಣ್ಣೀರಿಟ್ಟ ನಿಖಿಲ್ ಕುಮಾರಸ್ವಾಮಿ

"ಈ ಚುನಾವಣೆಯಲ್ಲಿ ನಾನು ಕಣ್ಣೀರು ಹಾಕಬಾರದು ಎಂದು ನಿರ್ಧರಿಸಿದ್ದೆ. ಆದರೆ ತುಂಬಾ ನೋವುಗಳಿವೆ" ಎಂದು ನಿಖಿಲ್ ಕುಮಾರಸ್ವಾಮಿ ಕಣ್ಣೀರು ಹಾಕಿದರು.

ರಾಮನಗರ: ನಾನು ರಾಜಕೀಯ ಷಡ್ಯಂತ್ರಕ್ಕೆ ಬಲಿಯಾಗಿದ್ದೇನೆ. ಸತತ ಎರಡು ಚುನಾವಣೆಯಲ್ಲಿ ಸೋತಿರುವೆ. ನಾನು ಏನು ತಪ್ಪು ಮಾಡಿದ್ದೇನೆಂದು ಗೊತ್ತಾಗುತ್ತಿಲ್ಲ ಎಂದು ಚನ್ನಪಟ್ಟಣ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಗುರುವಾರ ಭಾವುಕಾರಿ ಕಣ್ಣೀರು ಹಾಕಿದರು.

“ನಾನು ಎರಡು ಚುನಾವಣೆಗಳಲ್ಲಿ ಸೋತಿದ್ದೇನೆ. ಜನರು ನನಗೆ ಮತ ಹಾಕಿದ್ದಾರೆ. ಆದರೆ ನಾನು ರಾಜಕೀಯ ಷಡ್ಯಂತ್ರಕ್ಕೆ ಬಲಿಯಾಗಿದ್ದೇನೆ. ಇದರಿಂದ ನನಗೆ ತೀವ್ರ ನೋವಾಗಿದೆ. ಪಕ್ಷದ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಲು ಈ ಬಾರಿ ಚುನಾವಣೆಯಲ್ಲಿ ನಿಂತಿದ್ದೇನೆ. ನೀವೆಲ್ಲರೂ ಈ ಯುವಕನಿಗೆ ಗೆಲ್ಲುವ ಅವಕಾಶ ನೀಡಬೇಕೆಂದು ವಿನಂತಿಸುತ್ತೇನೆ'' ಎಂದು ಕಣ್ಣೀರು ಹಾಕುತ್ತಾ ಮನವಿ ಮಾಡಿದರು.

ಇಂದು ಕನ್ನಮಂಗಲ ಗ್ರಾಮದಲ್ಲಿ ಚುನಾವಣಾ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ನಾನು ಎರಡು ಬಾರಿ ಚುನಾವಣೆಯಲ್ಲಿ ಸೋತಿದ್ದೇನೆ. ನಾನೇನು ತಪ್ಪು ಮಾಡಿದ್ದೆನೋ ಗೊತ್ತಿಲ್ಲ. ಬಹುಶಃ ಮಾಜಿ ಪ್ರಧಾನಿಯ ಮೊಮ್ಮಗನಾಗಿ ಮತ್ತು ಮಾಜಿ ಮುಖ್ಯಮಂತ್ರಿಯ ಮಗನಾಗಿ ಹುಟ್ಟಿರುವುದು ನನ್ನ ದುರದೃಷ್ಟನೋ ಗೊತ್ತಿಲ್ಲ ಎಂದರು.

"ಈ ಚುನಾವಣೆಯಲ್ಲಿ ನಾನು ಕಣ್ಣೀರು ಹಾಕಬಾರದು ಎಂದು ನಿರ್ಧರಿಸಿದ್ದೆ. ಆದರೆ ತುಂಬಾ ನೋವುಗಳಿವೆ" ಎಂದು ನಿಖಿಲ್ ಕುಮಾರಸ್ವಾಮಿ ಕಣ್ಣೀರು ಹಾಕಿದರು.

ಕಳೆದ ಲೋಕಸಭಾ ಚುನಾವಣೆ ವೇಳೆ ಮಂಡ್ಯದಲ್ಲಿ ನಡೆದ ನೋವಿನ ಘಟನೆಗಳನ್ನು ನೆನಪಿಸಿಕೊಂಡ ನಿಖಿಲ್, ನನ್ನ ಮೂಲಕ ಉತ್ತರ ಕೊಡ್ಬೇಕು ಅಂತ ಕಾರ್ಯಕರ್ತರಭಾವನೆಯಾಗಿತ್ತು ಅಂಬೇಡ್ಕರ್ ಭವನದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಏನಾಗಿತ್ತು ಅಂತ ಎಲ್ಲರಿಗೂ ಗೊತ್ತು ಎಂದು ಹೇಳಿದರು.

ಒಮ್ಮೆ ನಾನು ದೇವೇಗೌಡರಿಗೆ ಪ್ರಾದೇಶಿಕ ಪಕ್ಷ ಕಟ್ಟುವುದೇ ಕಷ್ಟ ಇದೇ ಬೇಡ ಎಂದು ಮನವಿ ಮಾಡಿದ್ದೆ. ಆದರೆ ರೈತ ಪರವಾಗಿ ಕಾಳಜಿ ಇಟ್ಟ್ಕೊಂಡು ಈ ಪಕ್ಷವನ್ನು ಕಟ್ಟಿದ್ದಾರೆ. ನಂತರ ಕುಮಾರಣ್ಣ ಅವರು ಅಧಿಕಾರ ಇರಲಿ ಇಲ್ಲದೆ ಇರಲಿ ರೈತರ ಪರವಾಗಿ ನಿರಂತರವಾಗಿ ಸಾಲ ಮನ್ನಾ ಮಾಡಿದ್ದಾರೆ. ಅನೇಕ ಅಭಿವೃದ್ಧಿ ಕೆಲಸಗಳು ಮಾಡಿದ್ದಾರೆ ಎಂದು ಹೇಳಿದರು.

ಪ್ರಾದೇಶಿಕ ಪಕ್ಷ ಕಟ್ಟುವುದು ಕಷ್ಟ ಆದರೆ ನಿಮ್ಮೆಲ್ಲರ ಆಶೀರ್ವಾದದಿಂದ ರಾಜ್ಯದಲ್ಲಿ ಜೆಡಿಎಸ್ ಉಳಿದಿದೆ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರ ಪುತ್ರ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್, ಇಂದು ರಾಜೀನಾಮೆ ಅನುಮಾನ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿಎಂ ಕುರ್ಚಿ ಕದನ: ಸಿದ್ದರಾಮಯ್ಯ ಮನೆ ಮುಂದೆ ಬೆಂಬಲಿಗರ ಶಕ್ತಿ ಪ್ರದರ್ಶನ, ರಾಜೀನಾಮೆ ನೀಡದಂತೆ ಆಗ್ರಹ..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

SCROLL FOR NEXT