ಆರ್ ವಿ ದೇಶಪಾಂಡೆ  
ರಾಜಕೀಯ

ಸಿದ್ದರಾಮಯ್ಯ ಅನುಮತಿ ಕೊಟ್ಟರೆ ನಾನೇ ಸಿಎಂ ಆಗುವೆ, ಗ್ಯಾರಂಟಿಯಿಂದ ಆರ್ಥಿಕ ಹೊರೆ: ಆರ್ ವಿ ದೇಶಪಾಂಡೆ

ಇಂದು ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಮುಡಾ ವಿಚಾರದಲ್ಲಿ ತಪ್ಪೇ ಮಾಡಿಲ್ಲ ಎಂದ ದೇಶಪಾಂಡೆ, ಸಿದ್ದರಾಮಯ್ಯ ಅನುಮತಿ ಕೊಟ್ಟರೆ ನಾನೇ ಸಿಎಂ ಆಗುವೆ ಎಂಬ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಮೈಸೂರು: ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ ಎಂದು ಕಾಂಗ್ರೆಸ್ ನಲ್ಲಿಯೇ ಅನೇಕ ನಾಯಕರು ಹೇಳುತ್ತಿದ್ದರೂ ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟಿರುವವರಿಗೇನು ಕಡಿಮೆಯಿಲ್ಲ. ಹಲವು ಸಚಿವರು, ಹಿರಿಯ ಶಾಸಕರು ತಮ್ಮ ಆಸೆಯನ್ನು ಆಗೊಮ್ಮೆ, ಈಗೊಮ್ಮೆ ವ್ಯಕ್ತಪಡಿಸುತ್ತಿರುತ್ತಾರೆ. ಅವರಲ್ಲಿ ಕಾಂಗ್ರೆಸ್ ನ ಹಿರಿಯ ನಾಯಕ, ಮಾಜಿ ಸಚಿವ ಆರ್ ವಿ ದೇಶಪಾಂಡೆ ಕೂಡ ಒಬ್ಬರು.

ಇಂದು ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಮುಡಾ ವಿಚಾರದಲ್ಲಿ ತಪ್ಪೇ ಮಾಡಿಲ್ಲ ಎಂದ ದೇಶಪಾಂಡೆ, ಸಿದ್ದರಾಮಯ್ಯ ಅನುಮತಿ ಕೊಟ್ಟರೆ ನಾನೇ ಸಿಎಂ ಆಗುವೆ ಎಂಬ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಫೋನ್ ಟ್ಯಾಪಿಂಗ್‌ ಆರೋಪ ಬಂದಾತಕ್ಷಣ ರಾಮಕೃಷ್ಣ ಹೆಗೆಡೆ ರಾಜೀನಾಮೆ ನೀಡಿದ್ದರು. ಈಗ ದಿನ ಫೋನ್ ಟ್ಯಾಪ್ ನಡೀತಾ ಇದೆ, ಆದರೆ ಮೌಲ್ಯಾಧಾರಿತ ರಾಜಕಾರಣ ಈಗ ನಡೆಯುತ್ತಿಲ್ಲ. ಹಿಂದೆ ಮೌಲ್ಯಾಧಾರಿತ ರಾಜಕಾರಣ ಮಾಡುತ್ತಿದ್ದರು, ಅದೇ ರೀತಿ ನಡೆದುಕೊಳ್ಳುತ್ತಿದ್ದರು. ಮುಡಾ ವಿಚಾರದಲ್ಲಿ ಸಿಎಂ ಏನು ತಪ್ಪು ಮಾಡಿದ್ದಾರೆ. ಸಾವಿರಾರು ಕೋಟಿ ರೂಪಾಯಿ ಹಗರಣ ಅಂಥ ಹೇಳುತ್ತಿದ್ದಾರೆ. ಆರೋಪದ ಬಗ್ಗೆ ದಾಖಲೆ ಕೊಡಿ ನಾನೇ ಸರ್ಕಾರಕ್ಕೆ ಪತ್ರ ಬರೆಯುತ್ತೇನೆ ಎಂದರು. ಅಷ್ಟಕ್ಕೇ ಸುಮ್ಮನಾಗದೆ ಸಿದ್ದರಾಮಯ್ಯ ಅನುಮತಿ ಕೊಟ್ಟರೆ ನಾನೇ ಸಿಎಂ ಆಗುತ್ತೇನೆ ಎಂದು ತಾನು ಕೂಡ ಸಿಎಂ ಹುದ್ದೆಯ ಆಕಾಂಕ್ಷಿ ಎಂದು ಹೇಳಿದರು.

ನಾನು ಸಚಿವ ಆಗಿ ದಣಿದಿದ್ದೇನೆ. ಇನ್ನೇನಿದ್ದರು ಮುಖ್ಯಮಂತ್ರಿ ಆಗಬೇಕು ಅಷ್ಟೆ. ಆದರೆ ಈಗ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದರು. ಹಾಗಾದರೆ ಸಿಎಂ ಆಗುವ ಆಸೆ ಇದ್ಯಾ ಎಂಬ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ನಗುತ್ತಲೇ ಉತ್ತರಿಸಿದ ದೇಶಪಾಂಡೆ, ನನಗೆ ಆಸೆ ಇದೆ, ನಿಮ್ಮಂತ ಜನರಿಗೂ ಆಸೆ ಇದೆ. ಜೀವನದಲ್ಲಿ ಮಹತ್ವಕಾಂಕ್ಷೆ ಇರಬೇಕು.

ನಾನು ಸಿದ್ದರಾಮಯ್ಯಗಿಂತ ಎರಡು ವರ್ಷ ವಯಸ್ಸಿನಲ್ಲಿ ದೊಡ್ಡವನು. ಹೈಕಮಾಂಡ್ ಅವಕಾಶ ಕೊಟ್ಟರೂ ಕೂಡ, ಸಿದ್ದರಾಮಯ್ಯ ಅನುಮತಿ ಕೊಡಬೇಕು. ನಾನು ಸಿದ್ದರಾಮಯ್ಯಗೆ ಒಳ್ಳೆಯ ಸ್ನೇಹಿತ, 5 ವರ್ಷ ಸಿಎಂ ಆಗಿ ಸಿದ್ದರಾಮಯ್ಯ ಅವರೇ ಇರುತ್ತಾರೆ. ಸದ್ಯ ಸಿಎಂ ಬದಲಾವಣೆ ಕುರಿತು ನ‌ನಗೆ ಗೊತ್ತಿಲ್ಲದೆ ಯಾವ ಚರ್ಚೆ ನಡೆಯಲು ಸಾಧ್ಯ ಇಲ್ಲ. ಪರಮೇಶ್ವರ್‌ ಹಾಗೂ ಜಾರಕಿಹೊಳಿ ಮನೆಯಲ್ಲಿ ನಡೆದಿರುವುದು ಇಲಾಖೆಗೆ ಸಂಬಂಧಪಟ್ಟ ಸಭೆ ಅಷ್ಟೆ ಎಂದರು.

ಗ್ಯಾರಂಟಿಯಿಂದ ಆರ್ಥಿಕ ಹೊರೆ: ಗ್ಯಾರಂಟಿ ಯೋಜನೆಯಿಂದ ಸರ್ಕಾರಕ್ಕೆ ಆರ್ಥಿಕ ಹೊರೆ ಬಿದ್ದಿರುವುದು ನಿಜ. ಗ್ಯಾರಂಟಿ ಯೋಜನೆಗೆ 50 ರಿಂದ 60ಸಾವಿರ ಕೋಟಿ ರೂಪಾಯಿ ಬೇಕಾಗಿದೆ. ತೊಂದರೆಯಾಗಿರುವುದನ್ನು ಸರಿದೂಗಿಸುತ್ತಿದ್ದಾರೆ. ಆದರೆ ಬೆಲೆ ಏರಿಕೆಗೆ ಕಾರಣ ಇದಲ್ಲ. ದೇಶದಲ್ಲೇ ಬೆಲೆ ಏರಿಕೆ ಆಗಿದೆ. ಇದರಿಂದ ಜನ ಸಾಮಾನ್ಯರಿಗೆ ತೊಂದರೆಯಾಗುತ್ತಿದೆ ಎಂದು ಒಪ್ಪಿಕೊಂಡರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

SCROLL FOR NEXT