ಸಂಗ್ರಹ ಚಿತ್ರ 
ರಾಜಕೀಯ

ಕಾಂಗ್ರೆಸ್ ನಲ್ಲಿ ಕುರ್ಚಿ ಕಚ್ಚಾಟ: ಸಿದ್ದರಾಮಯ್ಯ ಉತ್ತರಾಧಿಕಾರಿಯಾಗಿ ಪರಮೇಶ್ವರ್? ಬ್ರಾಹ್ಮಣ ಸಮುದಾಯದ ದೇಶಪಾಂಡೆಗಿಲ್ಲ ಬೆಂಬಲ!

ಎಂಟು ವರ್ಷಗಳ ಕಾಲ ಕೆಪಿಸಿಸಿ ಅಧ್ಯಕ್ಷರಾಗಿದ್ದ ಪರಮೇಶ್ವರ ಅವರು, 2013ರ ಚುನಾವಣೆಯಲ್ಲಿ ಸೋಲು ಕಂಡ ನಂತರ ಮುಖ್ಯಮಂತ್ರಿ ಸ್ಥಾನದ ಅವಕಾಶದಿಂದ ವಂಚಿತರಾಗಿದ್ದರು.

ಬೆಂಗಳೂರು: ಮುಡಾ ಹಗರಣದಲ್ಲಿ ಸಿಲುಕಿರುವ ಸಿದ್ದರಾಮಯ್ಯ ಒಂದು ವೇಳೆ ಅಧಿಕಾರದಿಂದ ಕೆಳಗಿಳಿದಿದ್ದೇ ಆದರೆ, ಮುಂದಿನ ಸಿಎಂ ಯಾರು ಎನ್ನುವ ಲೆಕ್ಕಾಚಾರ ಕಾಂಗ್ರೆಸ್‌ನಲ್ಲಿ ಈಗಾಗಲೇಶುರುವಾಗಿದೆ. ಒಳಗೊಳಗೆ ಸಿಎಂ ಗಾದಿಗೆ ಏರಲು ತಯಾರಿ ಕೂಡ ನಡೆಯುತ್ತಿದೆ.

ಈ ಎಲ್ಲ ಚರ್ಚೆಗಳನ್ನು ಹುಟ್ಟು ಹಾಕಿದ್ದು ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಇತ್ತೀಚಿನ ಬೆಳವಣಿಗೆ.. ಸಿದ್ದರಾಮಯ್ಯಗೆ ಒಂದು ಕಡೆ ಹೈಕಮಾಂಡ್‌ನಿಂದ ಹಿಡಿದು ಇಡೀ ಕಾಂಗ್ರೆಸ್‌ ಪಕ್ಷ ಬೆಂಬಲಕ್ಕೆ ನಿಂತರೂ ಕೂಡ.. ಸಿದ್ದರಾಮಯ್ಯ ಕೆಳಗಿಳಿದಪೆ ಮುಂದೇನು ಎನ್ನುವ ಪ್ಲಾನ್‌ ಬಿ ಕೂಡ ಸಿದ್ಧವಾಗುತ್ತಿದೆ ಎನ್ನಲಾಗಿದೆ.

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಮುಂದುವರೆದರೆ ಓಕೆ ನಮ್ಮದೇನು ತಕರಾರು ಇಲ್ಲ, ಆದರೆ, ಸಿದ್ದರಾಮಯ್ಯ ಕೆಳಗಿಳಿದರೆ ನಂಗೊಂದು ಚಾನ್ಸ್‌ ಕೊಡಿ ಎಂದು ಕೆಲ ಹಿರಿಯ ನಾಯಕರು ಹೈಕಮಾಂಡ್‌ ಬಾಗಿಲು ತಟ್ಟಿದ್ದಾರೆಂದು ತಿಳಿದುಬಂದಿದೆ.

ಇತ್ತೀಚೆಷ್ಟೇ ಗೃಹ ಸಚಿವ ಡಾ.ಜಿ.ಪರಮೇಶ್ವರ ಮತ್ತು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ನಡುವೆ ಗೌಪ್ಯ ಸಭೆ ನಡೆಸಿದ್ದು, ಮುಖ್ಯಮಂತ್ರಿ ಬದಲಾವಣೆ ಕುರಿತು ತೀವ್ರ ಊಹಾಪೋಹಗಳಿಗೆ ಎಡೆಮಾಡಿಕೊಟ್ಟಿದೆ.

ಈ ಸಭೆಯ ಬಗ್ಗೆ ಪರಮೇಶ್ವರ್ ಅವರು ತುಟಿ ಬಿಚ್ಚಿಲ್ಲ ಆದರೆ, ಮುಡಾ ನಿವೇಶನ ಹಂಚಿಕೆ ವಿಚಾರದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ್ದೇ ಆದರೆ, ಪರಮೇಶ್ವರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಬಹುದು ಎಂಬ ಮಾತು ಕಾಂಗ್ರೆಸ್ ಪಾಳಯದಲ್ಲಿ ಕೇಳಿ ಬರುತ್ತಿದೆ. ಆದರೆ, ಕೆಲ ಹಿರಿಯ ನಾಯಕರು ಈ ಊಹಾಪೋಹವನ್ನು ತಳ್ಳಿಹಾಕಿದ್ದಾರೆ.

ಸಿದ್ದರಾಮಯ್ಯ ಅವರು ಅಧಿಕಾರದಿಂದ ಕೆಳಗಿಳಿದಿದ್ದೇ ಆದರೆ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸ್ಥಾನಕ್ಕೆ ಪರಿಗಣಿಸಬಹುದು ಎಂದು ಹೇಳಲಾಗುತ್ತಿತ್ತು. ಆದರೆ, ಇದೀಗ ಖರ್ಗೆ ಕುಟುಂಬದ ವಿರುದ್ಧವೂ ಕೆಐಎಡಿಬಿ ನಿವೇಶನ ಹಂಚಿಕೆ ವಿವಾದ ಕೇಳಿ ಬಂದಿದೆ. ಮತ್ತೊಂದೆಡೆ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ವಿರುದ್ಧವೂ ಆರೋಪ ಕೇಳಿ ಬಂದಿದೆ.

ಇನ್ನು ಸತೀಶ್ ಜಾರಕಿಹೊಳಿ ಹಾಗೂ ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ ಅವರನ್ನು ಗಂಭೀರವಾಗಿ ಪರಿಗಣಿಸದಿರುವುದು ಜೆಡಿಎಸ್ ಜೊತೆಗಿನ ಇತಿಹಾಸವೇ ಕಾರಣ ಎನ್ನಲಾಗಿದೆ.

ಈ ನಡುವೆ ಕೆಪಿಸಿಸಿ ಮಾಜಿ ಅಧ್ಯಕ್ಷ ಆರ್.ವಿ.ದೇಶಪಾಂಡೆ ಅವರು, ಮುಖ್ಯಮಂತ್ರಿ ಹುದ್ದೆಗೇರಲು ತಮ್ಮ ಇಂಗಿತ ವ್ಯಕ್ತಪಡಿಸಿದ್ದಾರೆ. ಆದರೆ, ಅವರು ಬ್ರಾಹ್ಮಣರಾಗಿರುವುದರಿಂದ ಮತ್ತು ಸೀಮಿತ ಶಾಸಕರ ಬೆಂಬಲ ಇರುವುದರಿಂದ ಅವರಿಗೆ ಅವಕಾಶ ಸಿಗುವುದು ಕಷ್ಟ ಎನ್ನಲಾಗಿದೆ.

ಇತ್ತೀಚೆಗೆ ಪರಮೇಶ್ವರ ಮತ್ತು ಜಾರಕಿಹೊಳಿ ಅವರು ಅತೃಪ್ತ ನಾಯಕ ಬಿ.ಕೆ.ಹರಿಪ್ರಸಾದ್ ಅವರನ್ನು ಭೇಟಿ ಮಾಡಿರುವುದು ಕೂಡ ಗಮನಾರ್ಹ ವಿಚಾರವಾಗಿದೆ.

ಎಂಟು ವರ್ಷಗಳ ಕಾಲ ಕೆಪಿಸಿಸಿ ಅಧ್ಯಕ್ಷರಾಗಿದ್ದ ಪರಮೇಶ್ವರ ಅವರು, 2013ರ ಚುನಾವಣೆಯಲ್ಲಿ ಸೋಲು ಕಂಡ ನಂತರ ಮುಖ್ಯಮಂತ್ರಿ ಸ್ಥಾನದ ಅವಕಾಶದಿಂದ ವಂಚಿತರಾಗಿದ್ದರು.

ಇದೀಗ ಸಿದ್ದರಾಮಯ್ಯನವರ ಉತ್ತರಾಧಿಕಾರಿ ಎಂದೇ ಬಹುವಾಗಿ ನಂಬಲಾಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ರಕ್ಷಣಾತ್ಮಕ ಸ್ಥಿತಿಯಲ್ಲಿದ್ದು, ಅವರಿಗೆ ಸಿಎಂ ಸ್ಥಾನ ಸಿಗಬಹುದು ಎಂಬ ಮಾತುಗಳು ಕೇಳಿ ಬರುತ್ತಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

SCROLL FOR NEXT