ಬಸವರಾಜ ಬೊಮ್ಮಾಯಿ 
ರಾಜಕೀಯ

ವಿರೇಂದ್ರ ಪಾಟೀಲ್ ಅತ್ಯಂತ ಬಲಿಷ್ಠ ಸಿಎಂ; ಆದರೆ ರಾತ್ರೋರಾತ್ರಿ ಎಲ್ಲಾ ಶಾಸಕರು ಬದಲಾದರು: ಬೊಮ್ಮಾಯಿ

ಕಾಂಗ್ರೆಸ್‌ನಲ್ಲಿ ಆಂತರಿಕವಾಗಿ ಗೊಂದಲ ಸೃಷ್ಟಿಯಾಗಿದೆ. ಮುಖ್ಯಮಂತ್ರಿಗಳ ಕುರ್ಚಿ ಅಲ್ಲಾಡುತ್ತಿದೆ ಅನ್ನುವ ಭಾವನೆ ರೂಪುಗೊಂಡಿದೆ.

ಗದಗ: ಕಳೆದ ಒಂದು ವರ್ಷದಲ್ಲಿ ಸರ್ಕಾರ ಯಾವುದೇ ಕೆಲಸ ಮಾಡದ ಕಾರಣ ಮುಖ್ಯಮಂತ್ರಿ ಕುರ್ಚಿ ಅಲುಗಾಡುತ್ತಿದೆ ಮತ್ತು ಭ್ರಮನಿರಸನಗೊಂಡಿರುವ ಆಡಳಿತ ಪಕ್ಷದ ಶಾಸಕರು ಘರ್ಷಣೆಗೆ ಇಳಿದಿದ್ದಾರೆ ಎಂದು ಮಾಜಿ ಸಿಎಂ, ಹಾವೇರಿ-ಗದಗ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಗದಗದಲ್ಲಿ ಮಾತನಾಡಿದ ಅವರು, ರಾಜ್ಯದ ರಾಜಕೀಯ ಇತಿಹಾಸ ನೋಡಿದಾಗ ಕಾಂಗ್ರೆಸ್‌ನಲ್ಲಿ ವೀರೇಂದ್ರ ಪಾಟೀಲರು ಅತ್ಯಂತ ಬಲಿಷ್ಠ ಮುಖ್ಯಮಂತ್ರಿಯಾಗಿದ್ದರು. ಅವರ ಅವಧಿಯಲ್ಲಿ ರಾತ್ರೋ ರಾತ್ರಿ ಎಲ್ಲ ಶಾಸಕರು ಬದಲಾದರು. ಮುಂದೆ ದೇವರಾಜ ಅರಸು ಅವರನ್ನು ರಾತ್ರೋರಾತ್ರಿ ಬದಲಾವಣೆ ಮಾಡಿ ಆರ್.ಗುಂಡೂರಾವ್ ಮುಖ್ಯಮಂತ್ರಿಗಳಾದರು. ದೇವರಾಜ ಅರಸು ಅವರು ಎರಡನೇ ಬಾರಿ ಸ್ವಂತ ಶಕ್ತಿಯಲ್ಲಿ‌ ಆರಿಸಿ ಸಿಎಂ ಆದವರು. ಎಸ್. ಬಂಗಾರಪ್ಪ ಅವರಿಗೆ 183 ಶಾಸಕರ ಬಲವಿತ್ತು. ಆಗಲೂ ಸಿಎಂ ಬದಲಾದರು. ಈ ರಾಜಕಾರಣ ಹೀಗೆ ನಡಿಯುತ್ತಲೇ ಇರುತ್ತದೆ’ ಎಂದು ತಿಳಿಸಿದರು. ಕಾಂಗ್ರೆಸ್‌ನಲ್ಲಿ ಆಂತರಿಕವಾಗಿ ಗೊಂದಲ ಸೃಷ್ಟಿಯಾಗಿದೆ. ಮುಖ್ಯಮಂತ್ರಿಗಳ ಕುರ್ಚಿ ಅಲ್ಲಾಡುತ್ತಿದೆ ಅನ್ನುವ ಭಾವನೆ ರೂಪುಗೊಂಡಿದೆ. ಸಿಎಂ ಕುರ್ಚಿ ಮೇಲೆ ಕೂರಬೇಕೆಂಬ ಎಲ್ಲರ ಆಸೆ ಈಗ ಹೊರ ಹೊಮ್ಮುತ್ತಿದೆ’ ಎಂದು ಹೇಳಿದರು. ಹಿರಿಯರಾದ ಆರ್.ವಿ.ದೇಶಪಾಂಡೆ ಹೇಳಿಕೆ ಬಗ್ಗೆ ವ್ಯಾಖ್ಯಾನಿಸಲ್ಲ. ಅವರ ಹೇಳಿಕೆ ನಂತರ ಕಾಂಗ್ರೆಸ್‌ನಲ್ಲಿ ಹಲವು ಪ್ರತಿಕ್ರಿಯೆಗಳು ಬಂದಿವೆ. ಕಾಂಗ್ರೆಸ್‌ನಲ್ಲಿ ಎಲ್ಲವೂ ಸರಿ ಇಲ್ಲ ಅನ್ನುವುದಕ್ಕೆ ಕೈ ನಾಯಕರ ಪ್ರತಿಕ್ರಿಯೆಯೇ ಸಾಕ್ಷಿ ಎಂದು ಹೇಳಿದರು.

ಕೋವಿಡ್ ಅವಧಿಯಲ್ಲಿನ ನಡೆದಿರುವ ಅಕ್ರಮಗಳ ವರದಿ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಆ ಪ್ರಕರಣವನ್ನು ಯಾರೂ ಸಮರ್ಥನೆ ಮಾಡಿಕೊಳ್ಳುತ್ತಿಲ್ಲ. ಈಗ ಮಧ್ಯಂತರ ವರದಿ ಬಂದಿದೆ. ಪೂರ್ಣ ವರದಿ ಬರಲಿ. ಆಮೇಲೆ ಚರ್ಚೆ ಮಾಡೋಣ. ಏನೇ ತರಾತುರಿ ಮಾಡಿದರೂ ಸತ್ಯಕ್ಕೆ ಜಯ ಇದೆ ಎಂದು ಹೇಳಿದರು. ಮುಡಾದಲ್ಲಿ ಹಗರಣ ಆಗಿಲ್ಲ ಎಂದು ಕಾಂಗ್ರೆಸ್ ನಾಯಕರು ಹೇಳುತ್ತಾರೆ. ಈಗ ಆ ಕಾಲದಲ್ಲಿದ್ದ ಕಮಿಷನರ್ ಅವರನ್ನು ತಾಂತ್ರಿಕ‌ ಸಮಿತಿ ವರದಿ ಆಧಾರದಲ್ಲಿ ಅಮಾನತು ಮಾಡಲಾಗಿದೆ. ತಾಂತ್ರಿಕ ಸಮಿತಿ ತಪ್ಪು ಕಂಡು ಹಿಡಿದಿದೆ. ಸರ್ಕಾರ ಆಯುಕ್ತರನ್ನು ಅಮಾನತು ಮಾಡಿದೆ. ಹೀಗಾಗಿ ಎಲ್ಲವೂ ಕಾನೂನುಬದ್ಧವಾಗಿ ನಡೆದಿಲ್ಲ ಅಂತ ಸರ್ಕಾರವೇ ಒಪ್ಪಿಕೊಂಡಂತಾಗಿದೆ ಎಂದು ಹೇಳಿದರು. ರಾಜ್ಯ ಸರ್ಕಾರ ಆರ್ಥಿಕವಾಗಿ ಕುಸಿಯುವ ಕಾಲ ಬಹಳ ದೂರವಿಲ್ಲ ಎಂದು ನಾನು ಮೊದಲಿನಿಂದಲೂ ಹೇಳುತ್ತಿದ್ದೇನೆ. ಈಗಲೂ ಹೇಳುತ್ತೇನೆ. ಈಗ ಅಂಗನವಾಡಿ ಕಾರ್ಯಕರ್ತೆಯರ ಸಂಬಳ ಮೂರು ನಾಲ್ಕು ತಿಂಗಳಿಗೆ ನೀಡುತ್ತಿದ್ದಾರೆ. ಮುಂದೆ ಸರ್ಕಾರಿ ನೌಕರರ ಸಂಬಳಕ್ಕೂ ಕಷ್ಟವಾಗಲಿದೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT