ಸಂಗ್ರಹ ಚಿತ್ರ 
ರಾಜಕೀಯ

ಚಾಮರಾಜನಗರ: ಬಿಜೆಪಿಗೆ 'ಆಪರೇಷನ್ ಹಸ್ತ'ದ ಶಾಕ್; ಕಾಂಗ್ರೆಸ್ ಸೇರಿದ 6 ಸದಸ್ಯರು

ಬಿಜೆಪಿಯ 6 ಸದಸ್ಯರು ಕಾಂಗ್ರೆಸ್ ಸೇರ್ಪಡೆಯಿಂದ ಚಾಮರಾಜನಗರ ಜಿಲ್ಲಾ ಬಿಜೆಪಿ ಅಧ್ಯಕ್ಷರೂ ಆಗಿರುವ ನಿರಂಜನ್ ಕುಮಾರ್​ಗೆ ಸ್ವ ಕ್ಷೇತ್ರದಲ್ಲೇ ಭಾರಿ ಮುಖಭಂಗವಾಗಿದೆ. 13 ಮಂದಿ ಬಿಜೆಪಿ ಸದಸ್ಯರ ಪೈಕಿ 6 ಸದಸ್ಯರಿಗೆ ಕಾಂಗ್ರೆಸ್ ಗಾಳ ಹಾಕಿತ್ತು.

ಚಾಮರಾಜನಗರ: ಚಾಮರಾಜನಗರದಲ್ಲಿ ಬಿಜೆಪಿಗೆ ಕಾಂಗ್ರೆಸ್ ಆಪರೇಷನ್ ಹಸ್ತದ ಮೂಲಕ ಶಾಕ್ ನೀಡಿದ್ದು 6 ಮಂದಿ ಬಿಜೆಪಿ ಸದಸ್ಯರು ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ. ಗುಂಡ್ಲುಪೇಟೆ ಪುರಸಭೆ ಅಧ್ಯಕ್ಷ ಹಾಗೂ ಉಪಾದ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿರುವ ಸಂದರ್ಭದಲ್ಲಿ ಈ ದೊಡ್ಡ ಬೆಳವಣಿಗೆ ನಡೆದಿದೆ.

ಬಿಜೆಪಿಯ 6 ಸದಸ್ಯರು ಕಾಂಗ್ರೆಸ್ ಸೇರ್ಪಡೆಯಿಂದ ಚಾಮರಾಜನಗರ ಜಿಲ್ಲಾ ಬಿಜೆಪಿ ಅಧ್ಯಕ್ಷರೂ ಆಗಿರುವ ನಿರಂಜನ್ ಕುಮಾರ್​ಗೆ ಸ್ವ ಕ್ಷೇತ್ರದಲ್ಲೇ ಭಾರಿ ಮುಖಭಂಗವಾಗಿದೆ. 13 ಮಂದಿ ಬಿಜೆಪಿ ಸದಸ್ಯರ ಪೈಕಿ 6 ಸದಸ್ಯರಿಗೆ ಕಾಂಗ್ರೆಸ್ ಗಾಳ ಹಾಕಿತ್ತು. ಅದರಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದೆ. ಇನ್ನು ಕಾಂಗ್ರೆಸ್​​ಗೆ ಬೆಂಬಲ ನೀಡಿದ ಬಿಜೆಪಿ ಸದಸ್ಯರಿಗೆ ಪುರಸಭೆ ಅಧ್ಯಕ್ಷ ಹಾಗೂ ಉಪಾದ್ಯಕ್ಷ ಸ್ಥಾನವನ್ನೇ ಕಾಂಗ್ರೆಸ್ ಬಿಟ್ಟು ಕೊಟ್ಟಿದೆ.

ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿಯಿಂದ ಬಂದ ಕಿರಣ್ ಗೌಡ ನಾಮ ನಿರ್ದೇಶನ ಮಾಡಲಾಗಿದ್ದು, ಉಪಾಧ್ಯಕ್ಷೆ ಸ್ಥಾನಕ್ಕೆ ಬಿಜೆಪಿಯಿಂದ ಕಾಂಗ್ರೆಸ್​​​ಗೆ ಬೆಂಬಲಿಸಿದ ಹೀನಾ ಕೌಸರ್ ನಾಮನಿರ್ದೇಶನ ಮಾಡಲಾಗಿದೆ. ಇನ್ನು ಬಿಜೆಪಿಯಿಂದ ನಾಮಿನೇಷನ್ ಮಾಡುವವರೇ ಇಲ್ಲದ ಕಾರಣ ಅಧ್ಯಕ್ಷ ಸ್ಥಾನ ಬಹುತೇಕ ಅವಿರೋಧ ಆಯ್ಕೆಯಾಗುವ ಸಾಧ್ಯತೆ ಇದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

Sting operation ಮೂಲಕ ನಿಮ್ಮನ್ನು ಸಿಲುಕಿಸಲು ಯತ್ನಿಸಿರುವುದು ನಿಜವೇ ಆಗಿದ್ದರೆ ತನಿಖೆಗೆ ಆದೇಶಿಸಿ: ಸಿಎಂ ಡಿಕೆ.ಶಿವಕುಮಾರ್'ಗೆ HDK ಸವಾಲು

ಮತ ಕಳ್ಳತನದಿಂದಲೇ ಮೋದಿ ಪ್ರಧಾನಿಯಾಗಿದ್ದು, ಗೆಲ್ಲಲಾಗದ ರಾಜ್ಯಗಳಲ್ಲೂ BJP ಗೆಲುವು ಸಾಧಿಸಿದು: ಅಭಿಜೀತ್ ದೀಪ್ಕೆ

ರಾಜ್ಯದ ಬಾಕಿ ಹಣದ ಬಗ್ಗೆ ನಿರ್ಮಲಾ ಸೀತಾರಾಮನ್ ಜೊತೆ ಚರ್ಚೆ: GST ಮಂಡಳಿ ಸಭೆ ಬಳಿಕ CM ಡಿಕೆ.ಶಿವಕುಮಾರ್ ಹರ್ಷ

ಉತ್ತರ ಭಾರತ ವ್ಯಕ್ತಿಯಿಂದ ಡಿಕೆಶಿ ಸಿಲುಕಿಸಲು ಯತ್ನ: ಸಚಿವ ಸತೀಶ್ ಜಾರಕಿಹೊಳಿ