ಕೆಎಸ್ ಈಶ್ವರಪ್ಪ 
ರಾಜಕೀಯ

ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ತೊರೆದರೆ ಮಾತ್ರ ಪಕ್ಷಕ್ಕೆ ಮರಳುವೆ: ಕೆ.ಎಸ್ ಈಶ್ವರಪ್ಪ

ರಾಜ್ಯದಲ್ಲಿ ಆರು ತಿಂಗಳು ಬಿಜೆಪಿ ಅಧ್ಯಕ್ಷ ಸ್ಥಾನ ಖಾಲಿ ಇತ್ತು. ಯಡಿಯೂರಪ್ಪ ಏನೋ ಮೋಡಿ ಮಾಡಿ ತಮ್ಮ ಮಗನನ್ನು ಅಧ್ಯಕ್ಷರನ್ನಾಗಿ ಮಾಡಿದ್ದಾರೆ. ಇದು ಬಹಳ ದಿನ ನಡೆಯಲ್ಲ.

ಹುಬ್ಬಳ್ಳಿ: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ ವೈ ವಿಜಯೇಂದ್ರ ಹೆಚ್ಚು ದಿನ ಉಳಿಯುವುದಿಲ್ಲ, ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಅವರನ್ನು ಪದಚ್ಯುತಗೊಳಿಸಿದರೆ ಮಾತ್ರ ತಾವು ಬಿಜೆಪಿಗೆ ಮರಳಲು ಸಾಧ್ಯ ಎಂದು ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.

ಗುರುವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ‘ರಾಜ್ಯದಲ್ಲಿ ಆರು ತಿಂಗಳು ಬಿಜೆಪಿ ಅಧ್ಯಕ್ಷ ಸ್ಥಾನ ಖಾಲಿ ಇತ್ತು. ಯಡಿಯೂರಪ್ಪ ಏನೋ ಮೋಡಿ ಮಾಡಿ ತಮ್ಮ ಮಗನನ್ನು ಅಧ್ಯಕ್ಷರನ್ನಾಗಿ ಮಾಡಿದ್ದಾರೆ. ಇದು ಬಹಳ ದಿನ ನಡೆಯಲ್ಲ. ಕುಟುಂಬ ರಾಜಕಾರಣ, ಸ್ವಜನ ಪಕ್ಷಪಾತ, ಹೊಂದಾಣಿಕೆ ರಾಜಕಾರಣ ಕೇಂದ್ರ, ರಾಜ್ಯದ ನಾಯಕರಿಗೆ ಅರ್ಥವಾಗಲಿ ಎಂದು ನಾನು ಚುನಾವಣೆಗೆ ಸ್ಪರ್ಧಿಸಿದೆ. ಯಡಿಯೂರಪ್ಪ ಬಿಟ್ಟರೆ ಬಿಜೆಪಿ ಇಲ್ಲ ಎಂಬ ಸ್ಥಿತಿ ನಿರ್ಮಾಣ ಮಾಡಿದ್ದಾರೆ. ಅದು ಹೋಗಬೇಕು’ ಪಕ್ಷದ ರಾಜ್ಯ ಘಟಕವು ಒಂದೇ ಕುಟುಂಬದ ಕತ್ತು ಹಿಸುಕಿದೆ ಎಂದು ಹೇಳಿದ ಅವರು, ಇದು ಪ್ರಧಾನಿ ನರೇಂದ್ರ ಮೋದಿ ಅವರ ತತ್ವಕ್ಕೆ ವಿರುದ್ಧವಾಗಿದೆ.

ಮಾಜಿ ಸಿಎಂ ಯಡಿಯೂರಪ್ಪ ಹೊಂದಾಣಿಕೆಯ ರಾಜಕೀಯದಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿದರು. ವಿಧಾನಸಭಾ ಚುನಾವಣೆಯಲ್ಲಿ ವಿಜಯೇಂದ್ರ ಗೆದ್ದ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಹೇಳಿಕೆಯಿಂದ ಇದು ಸ್ಪಷ್ಟವಾಗಿದೆ. ನಮ್ಮ ಭಿಕ್ಷೆಯಿಂದ ವಿಜಯೇಂದ್ರ ಗೆದ್ದಿದ್ದು ಎಂದು ಡಿಕೆಶಿ ಹೇಳುತ್ತಾರೆ. ಈ ಮೂಲಕ ಕಾಂಗ್ರೆಸ್ ಕಾರ್ಯಕರ್ತರಿಗೆ ದ್ರೋಹ ಮಾಡಿದರು. ಈ ಹೊಂದಾಣಿಕೆ ರಾಜಕೀಯ ಬೇಡ ಅನ್ನೋ ಕಾರಣಕ್ಕೆ ನಾನು ಚುನಾವಣಾಗೆ ಸ್ಪರ್ಧೆ ಮಾಡಿದೆ. ಇಬ್ಬರೂ ತಮ್ಮ ಪಕ್ಷದ ಕಾರ್ಯಕರ್ತರಿಗೆ ದ್ರೋಹ ಮಾಡಿದ್ದಾರೆ ಎಂದು ಆರೋಪಿಸಿದರು.

ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ ಎಂದು ಹೇಳಿದ ಈಶ್ವರಪ್ಪ, ಸಿದ್ದರಾಮಯ್ಯನವರ ಹಿಂದೆ ಬಂಡೆಯಂತೆ ನಿಲ್ಲುತ್ತೇನೆ ಎಂದು ಶಿವಕುಮಾರ್ ಭರವಸೆ ನೀಡಿದರು ಆದರೆ ಆಂತರಿಕವಾಗಿ ಕೆಪಿಸಿಸಿ ಅಧ್ಯಕ್ಷರು ಮುಖ್ಯಮಂತ್ರಿಯನ್ನು ಕೆಳಗಿಳಿಸಲು ಷಡ್ಯಂತ್ರ ಮಾಡುತ್ತಿದ್ದಾರೆ. ಇನ್ನು ಕೆಲವು ಸಚಿವರು ಹಾಗೂ ಕಾಂಗ್ರೆಸ್ ನಾಯಕರು ಸಿದ್ದರಾಮಯ್ಯ ಅವರ ರಾಜೀನಾಮೆಗೆ ಕಾದು ಮುಖ್ಯಮಂತ್ರಿ ಆಗುವ ಹಂಬಲದಲ್ಲಿದ್ದಾರೆ.

ಸಿದ್ದರಾಮಯ್ಯ ಅವರ ರಾಜೀನಾಮೆ ಪರವಾಗಿಲ್ಲ, ಹೈಕೋರ್ಟ್ ತೀರ್ಪು ಅವರ ಪರವಾಗಿ ಬರಲಿ ಎಂದು ಹಾರೈಸುತ್ತೇನೆ, ಮುಡಾ ಹಗರಣದಲ್ಲಿ ಅವರು ಯಾವುದೇ ತಪ್ಪು ಮಾಡಿಲ್ಲ ಎಂದಾದರೆ ಅವರ ವಿರುದ್ಧ ತೀರ್ಪು ಬರುವುದಾದರೂ ಹೇಗೆ? ನ್ಯಾಯಾಲಯ ಅವರನ್ನು ದೋಷಿ ಎಂದು ಪರಿಗಣಿಸಿದರೆ, ಕೂಡಲೇ ರಾಜೀನಾಮೆ ನೀಡಬೇಕು’’ ಎಂದು ಸೂಚಿಸಿದ ಅವರು, ಕಾಂಗ್ರೆಸ್ ಸರಕಾರದ ಸುಸ್ಥಿರತೆಗಾಗಿ ಸಿದ್ದರಾಮಯ್ಯನವರ ಬೆಂಬಲ ಇರುವವರು ಮುಖ್ಯಮಂತ್ರಿಯಾಗಬೇಕು.

ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರದ ಭವಿಷ್ಯವು ನ್ಯಾಯಾಲಯದ ತೀರ್ಪಿನ ಫಲಿತಾಂಶದ ಮೇಲೆ ಅವಲಂಬಿತವಾಗಿದೆ ಎಂದು ಹೇಳಿದ ಈಶ್ವರಪ್ಪ, ಲೋಕಸಭೆ ಚುನಾವಣೆ ಎದುರಿಸಲು ಕಾಂಗ್ರೆಸ್ ಪಕ್ಷಕ್ಕೆ ಸಿದ್ದರಾಮಯ್ಯ ಸರ್ಕಾರ ಹಣ ಸಂಗ್ರಹಿಸಿದೆ ಎಂದು ಆರೋಪಿಸಿದರು. ಒಂದು ವೇಳೆ ಬಲವಂತವಾಗಿ ರಾಜೀನಾಮೆ ನೀಡಿದರೆ ಕರ್ನಾಟಕದಲ್ಲಿ ಮಾತ್ರವಲ್ಲದೆ ರಾಷ್ಟ್ರದಾದ್ಯಂತ ಕಾಂಗ್ರೆಸ್ ಪಕ್ಷ ಪತನವಾಗಲಿದೆ ಎಂದರು. ರಾಯಣ್ಣ ಸೇತುವೆಯನ್ನು ಪುನರುಜ್ಜೀವನಗೊಳಿಸುವ ಬಗ್ಗೆ ಯೋಚಿಸಿಲ್ಲ, ಆದರೆ, ಯಾವುದೇ ನಿರ್ಧಾರ ಕೈಗೊಳ್ಳುವ ಮುನ್ನ ಬೆಂಬಲಿಗರು ಹಾಗೂ ಹಿತೈಷಿಗಳ ಜತೆ ಸಮಾಲೋಚನೆ ನಡೆಸುವುದಾಗಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT