ಶಾಸಕ ಮುನಿರತ್ನ 
ರಾಜಕೀಯ

ಜೀವ ಬೆದರಿಕೆ, ಜಾತಿ ನಿಂದನೆ ಪ್ರಕರಣ: ಶಾಸಕ ಮುನಿರತ್ನಗೆ ಬಿಜೆಪಿಯಿಂದ ಶೋಕಾಸ್ ನೋಟಿಸ್

ಬಿಜೆಪಿ ರಾಜ್ಯ ಶಿಸ್ತು ಸಮಿತಿಯಿಂದ ಮುನಿರತ್ನ ಅವರಿಗೆ ಶೊಕಾಸ್ ನೋಟಿಸ್ ಜಾರಿ ಮಾಡಲಾಗಿದ್ದು, ನಿಂದನೆ ಆಡಿಯೋ ಪ್ರಕರಣದಿಂದಾಗಿ ಪಕ್ಷದ ಶಿಸ್ತಿಗೆ ಧಕ್ಕೆಯುಂಟಾಗಿದೆ.

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜೀವ ಬೆದರಿಕೆ ಹಾಕಿ, ಜಾತಿ ನಿಂದನೆ ಮಾಡಿದ ಆರೋಪ ಎದುರಿಸುತ್ತಿರುವ ಶಾಸಕ ಮುನಿರತ್ನ ನಾಯ್ಡು ಅವರಿಗೆ ಶನಿವಾರ ಬಿಜೆಪಿ ಶೋಕಾಸ್ ನೋಟೀಸ್ ಜಾರಿ ಮಾಡಿದೆ.

ಬಿಜೆಪಿ ರಾಜ್ಯ ಶಿಸ್ತು ಸಮಿತಿಯಿಂದ ಮುನಿರತ್ನ ಅವರಿಗೆ ಶೊಕಾಸ್ ನೋಟಿಸ್ ಜಾರಿ ಮಾಡಲಾಗಿದ್ದು, ನಿಂದನೆ ಆಡಿಯೋ ಪ್ರಕರಣದಿಂದಾಗಿ ಪಕ್ಷದ ಶಿಸ್ತಿಗೆ ಧಕ್ಕೆಯುಂಟಾಗಿದೆ. ಈ ಹಿನ್ನೆಲೆಯಲ್ಲಿ 5 ದಿನಗಳ ಒಳಗಾಗಿ ಪ್ರಕರಣದ ಬಗ್ಗೆ ಸ್ಪಷ್ಟನೆ ನೀಡುವಂತೆ ಸೂಚಿಸಿ ನೋಟೀಸ್ ನೀಡಲಾಗಿದೆ.

ಬಿಜೆಪಿ ಶಾಸಕ ಮುನಿರತ್ನ ಅವರು ತಮಗೆ ಜೀವ ಬೆದರಿಕೆ ಹಾಕಿದ್ದಾರೆ, ಜಾತಿ ನಿಂದನೆ ಮಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಿ ಗುತ್ತಿಗೆದಾರ ಚಲುವರಾಜು ಅವರು ಪೊಲೀಸರು ದೂರು ನೀಡಿದ್ದರು.

ತಮ್ಮ ವಿರುದ್ಧ ದೂರು ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಆರ್‌ಆರ್ ನಗರ ಕ್ಷೇತ್ರದ ಶಾಸಕ ಮುನಿರತ್ನ ಅವರನ್ನು ಇಂದು ಸಂಜೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಗ್ರಾಮದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ನ ಮುಂದಿನ ಸರ್ವೋಚ್ಚ ನಾಯಕ ಯಾರೇ ಆದರೂ ಅವರನ್ನು ಹತ್ಯೆ ಮಾಡ್ತೀವಿ: ಇಸ್ರೇಲ್ ಬೆದರಿಕೆ

Iran war: ಅಲಿ ಖಮೇನಿ ಪುತ್ರ ಮೊಜ್ತಾಬಾ ಖಮೇನಿ ಇರಾನ್ ನೂತನ ಪರಮೋಚ್ಛ ನಾಯಕರಾಗಿ ಆಯ್ಕೆ

ರೋಚಕ ಎನಿಸುವ ಇರಾನ್ ಸಮರಾಂಗಣದ ವಿಶ್ಲೇಷಣೆಗಳ ಅಸಲಿಯತ್ತೇನು? (ತೆರೆದ ಕಿಟಕಿ)

US-Israel Iran War: ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದ್ದೇ ಆದರೆ, ರಾಜ್ಯದ ಆರ್ಥಿಕತೆ ಮೇಲೆ ಭಾರೀ ಹೊಡೆತ..!

Israel Iran war: ಭಾರತಕ್ಕೆ ಬಿಗ್ ಶಾಕ್, ಕತಾರ್ ನಿಂದ ಕೈಗಾರಿಕೆಗಳಿಗೆ ಅನಿಲ ಸರಬರಾಜು ಕಡಿತ!

SCROLL FOR NEXT