ಡಿಕೆ ಸುರೇಶ್ 
ರಾಜಕೀಯ

ಗುತ್ತಿಗೆದಾರನಿಗೆ ಬೆದರಿಕೆ: 'ಶಾಸಕ ಮುನಿರತ್ನ ಕ್ಷಮೆ ಕೇಳಲಿ, ಪಕ್ಷದಿಂದ BJP ವಜಾಗೊಳಿಸಲಿ'- DK Suresh

ಶಾಸಕ ಮುನಿರತ್ನ ಚುನಾವಣೆ ಸಂದರ್ಭದಲ್ಲಿ ನಮ್ಮ ಅಭ್ಯರ್ಥಿಗೂ ಬೆದರಿಕೆ ಹಾಕಿದ್ದರು. ಶಾಸಕ ಮುನಿರತ್ನರಿಂದ ಅಧಿಕಾರಿಗಳಂತೂ ಭಯ ಭೀತರಾಗಿದ್ದಾರೆ. ಕೆಲವು ಅಧಿಕಾರಿಗಳು ನನ್ನ ಬಳಿ ಅಳಲು ತೋಡಿಕೊಂಡಿದ್ದಾರೆ.

ಬೆಂಗಳೂರು: ಗುತ್ತಿದಾರನಿಗೆ ಬೆದರಿಕೆ ಹಾಕಿದ ಆರೋಪ ಎದುರಿಸುತ್ತಿರುವ ಬಿಜೆಪಿ ಶಾಸಕ ಮುನಿರತ್ನ ಕೂಡಲೇ ಕ್ಷಮೆ ಯಾಚಿಸಬೇಕು ಮತ್ತು ಅವರನ್ನು ಬಿಜೆಪಿಯಿಂದ ವಜಾಗೊಳಿಸಬೇಕು ಎಂದು ಕಾಂಗ್ರೆಸ್ ಮಾಜಿ ಸಂಸದ ಡಿಕೆ ಸುರೇಶ್ ಅಗ್ರಹಿಸಿದ್ದಾರೆ.

ಬಿಜೆಪಿ ಶಾಸಕ ಮುನಿರತ್ನ (Munirathna) ಜೀವ ಬೆದರಿಕೆ, ಜಾತಿ ನಿಂದನೆ ಮತ್ತು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಗುತ್ತಿಗೆದಾರ ಚಲುವರಾಜು (Contractor Chaluvaraju) ಆರೋಪ ಮಾಡಿದ್ದಾರೆ.

ಈ ವಿಚಾರವಾಗಿ ಕಾಂಗ್ರೆಸ್​ ಮಾಜಿ ಸಂಸದ ಡಿಕೆ ಸುರೇಶ್ (DK Suresh)​ ಮಾತನಾಡಿ, ಶಾಸಕ ಮುನಿರತ್ನ ಚುನಾವಣೆ ಸಂದರ್ಭದಲ್ಲಿ ನಮ್ಮ ಅಭ್ಯರ್ಥಿಗೂ ಬೆದರಿಕೆ ಹಾಕಿದ್ದರು. ಶಾಸಕ ಮುನಿರತ್ನರಿಂದ ಅಧಿಕಾರಿಗಳಂತೂ ಭಯ ಭೀತರಾಗಿದ್ದಾರೆ. ಕೆಲವು ಅಧಿಕಾರಿಗಳು ನನ್ನ ಬಳಿ ಅಳಲು ತೋಡಿಕೊಂಡಿದ್ದಾರೆ. ಅಧಿಕಾರಿಗಳು ದೂರು ಕೊಟ್ಟರೆ ಸರ್ಕಾರ ಅವರ ರಕ್ಷಣೆಗೆ ಬರುತ್ತೆ ಎಂದು ಹೇಳಿದರು.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಡಿಕೆ ಸುರೇಶ್, ಬಿಜೆಪಿ ಶಾಸಕ ಮುನಿರತ್ನ ಅವರು ದಲಿತ ಸಮುದಾಯಕ್ಕೆ ಕೀಳು ಪದಗಳಿಂದ ಸಂಬೋಧನೆ ಮಾಡಿದ್ದಾರೆ. ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ಮುನಿರತ್ನ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಸುಮೋಟೋ ಕೇಸ್ ದಾಖಲಿಸಬೇಕು. ಎರಡು ಜಾತಿಗಳನ್ನು ಎತ್ತಿಕಟ್ಟುವ ಕೆಲಸ ಆಗಿದೆ. ಇದನ್ನು ಬಿಜೆಪಿ ನಾಯಕರು ಯಾವ ರೀತಿ ಅರಗಿಸಿಕೊಳ್ಳುತ್ತಿದ್ದಾರೆ? ಬಿಜೆಪಿಯ ಒಬ್ಬೇ ಒಬ್ಬರು ನಾಯಕರು ಇದುವರೆಗೂ ಹೇಳಿಕೆ ನೀಡಿಲ್ಲ. ಬಿಜೆಪಿಯವರಿಗೆ ನೈತಿಕತೆ ಇದ್ರೆ ಮುನಿರತ್ನ ಅವರನ್ನು ಇಷ್ಟೊತ್ತಿಗಾಗಲೇ ಬಿಜೆಪಿ ಪಕ್ಷದಿಂದ ವಜಾ ಮಾಡಬೇಕಿತ್ತು ಎಂದರು.

ಒಂದು ಕಡೆ ರಾಮನ ಜಪ, ಮತ್ತೊಂದು ಕಡೆ ತಾಯಂದಿರನ್ನು ಮಂಚಕ್ಕೆ ಕರೆಯುವ ಚಾಳಿ

ಅಂತೆಯೇ ನಾವ್ಯಾರೂ ಕೂಡ ಕೇಳಿರದ ಅವಾಚ್ಯ ಪದಗಳನ್ನು ಕೇಳಬೇಕಾಗಿದೆ. ಇದಕ್ಕಿಂತ ಕೀಳು ಪದಗಳನ್ನು ಯಾರೂ ಉಪಯೋಗಿಸಲು ಸಾಧ್ಯವಿಲ್ಲ. ಕೀಳರಿಮೆ ಮನಸ್ಥಿತಿ ಇರುವವರು ಯಾರೂ ಇಂತಹ ಪದ ಬಳಸಲ್ಲ. ಒಂದು ಕಡೆ ರಾಮನ ಜಪ, ಒಂದು ಕಡೆ ಸಂಸ್ಕೃತಿ ಜಪ ಮಾಡುತ್ತಿದ್ದಾರೆ. ಇನ್ನೊಂದು ಕಡೆ ಅದೇ ತಾಯಂದಿರನ್ನು ಮಂಚಕ್ಕೆ ಕರೆಯುವ ಚಾಳಿ ಮುಂದುವರೆಸಿದ್ದಾರೆ ಎಂದು ಕಿಡಿಕಾರಿದರು.

ದಲಿತ ಸಮುದಾಯದ ಮೇಲೆ ಇಂತಹ ಪದ ಬಳಕೆ ಎಷ್ಟು ಸರಿ?

ದಲಿತ ಸಮುದಾಯದವರ ಬಗ್ಗೆ ಯಾರೂ ಇಂಥ ಪದ ಬಳಸಿಲ್ಲ. ದಲಿತ ಸಮುದಾಯದ ಮೇಲೆ ಇಂತಹ ಪದ ಬಳಕೆ ಎಷ್ಟು ಸರಿ? ದಲಿತ ಸಮುದಾಯವನ್ನು 80ರ ದಶಕದ ಬಳಿಕ ಯಾರೂ ಇಂಥ ಪದ ಬಳಸುತ್ತಿರಲಿಲ್ಲ. ದಲಿತ ಸಮುದಾಯದ ಮೇಲೆ ಇಂಥ ಪದ ಬಳಕೆ ಮಾಡುವುದು ಎಷ್ಟು ಸರಿ? ಇದಕ್ಕೆ ಬಿಜೆಪಿ ನಾಯಕರು, ಎನ್​ಡಿಎ ನಾಯಕರು ಪ್ರತಿಕ್ರಿಯಿಸಬೇಕೆಂದು ಎಂದು ಡಿಕೆ ಸುರೇಶ್ ಒತ್ತಾಯಿಸಿದ್ದಾರೆ.

ನಾಗಮಂಗಲ ಗಲಾಟೆ ಕುಮಾರಸ್ವಾಮಿಯೇ ಮಾಡಿಸಿರಬಹದು

ಇದೇ ವೇಳೆ ನಾಗಮಂಗಲ ಹಿಂಸಾಚಾರ ಕುರಿತು ಮಾಜಿ ಸಿಎಂ ಹಾಲಿ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಡಿಕೆ ಸುರೇಶ್, 'ಕುಮಾರಸ್ವಾಮಿಯೇ ನಾಗಮಂಗಲ ಗಲಾಟೆ ಮಾಡಿಸಿರಬಹುದು. ಪ್ರತಿ ವಾರ ಇಲ್ಲಿಗೆ ಬರುತ್ತಾರಲ್ಲ, ಹಾಗೆ ಗಲಾಟೆ ಮಾಡಿಸಿರಬಹುದು. ಮುಸ್ಲಿಮನಾಗಿ ಹುಟ್ಟಬೇಕು ಅಂತಾ ಹೇಳುತ್ತಿದ್ದವನು ನಾನಲ್ಲ. ಹೆಚ್​.ಡಿ.ಕುಮಾರಸ್ವಾಮಿ ನಿತ್ಯ ಒಂದೊಂದು ಹೇಳಿಕೆ ಕೊಡುತ್ತಾರೆ. ಹಿಂದೆ ಗಲಭೆಗಳಾದಾಗ ಅಮಿತ್ ಶಾ, ಪ್ರಧಾನಿ ಮೋದಿ ವಿರುದ್ಧ ಕುಮಾರಸ್ವಾಮಿ ಹೇಳಿಕೆ ಕೊಟ್ಟಿದ್ದರು ಎಂದರು.

ಮುನಿರತ್ನ ವಿರುದ್ಧ 2 ಎಫ್ಐಆರ್

ಈ ನಡುವೆ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಮುನಿರತ್ನ ವಿರುದ್ಧ ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಎರಡು ಎಫ್‌ಐಆರ್ ದಾಖಲಾಗಿದ್ದು, ಮುನಿರತ್ನ ಕಿರುಕುಳ ಮತ್ತು ಬೆದರಿಕೆ ಆರೋಪದ ಮೇಲೆ ಗುತ್ತಿಗೆದಾರ ಚೆಲ್ವರಾಜು ನೀಡಿದ ದೂರಿನ ಮೇರೆಗೆ ಈ ಪ್ರಕರಣಗಳನ್ನು ದಾಖಲಿಸಲಾಗಿದೆ. ಮೊದಲ ಪ್ರಕರಣದಲ್ಲಿ ಜೀವ ಬೆದರಿಕೆ ಹಾಕಿದ್ದು, ಎಫ್‌ಐಆರ್‌ನಲ್ಲಿ ಮುನಿರತ್ನ, ವಿಜಿ ಕುಮಾರ್, ಅಭಿಷೇಕ್ ಮತ್ತು ವಸಂತ್ ಕುಮಾರ್ ಸೇರಿದಂತೆ ನಾಲ್ವರನ್ನು ಹೆಸರಿಸಲಾಗಿದೆ. ಸೆಕ್ಷನ್ 37, 506, 505, 385, 420 ಮತ್ತು 323 ಅಡಿಯಲ್ಲಿ ಆರೋಪಗಳಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT