ಹೈಗ್ರೌಂಡ್ಸ್ ಠಾಣೆಯಲ್ಲಿ ಬಿಜೆಪಿ ನಾಯಕರು ಇಂದು ಶನಿವಾರ ದೂರು ನೀಡಿದ ದೃಶ್ಯ. 
ರಾಜಕೀಯ

ಮೀಸಲಾತಿ ಕುರಿತು ಅಮೆರಿಕದಲ್ಲಿ ಹೇಳಿಕೆ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಬೆಂಗಳೂರಿನಲ್ಲಿ ಬಿಜೆಪಿ ದೂರು

ಅಮೆರಿಕ ಪ್ರವಾಸ ಕೈಗೊಂಡ ಸಮಯದಲ್ಲಿ ರಾಹುಲ್‌ ಗಾಂಧಿ ಅವರು, ‘ಭಾರತದಲ್ಲಿ ಸಮಾನತೆಯ ಸ್ಥಿತಿ ಮೂಡಿದ ನಂತರ ಮೀಸಲಾತಿ ವ್ಯವಸ್ಥೆಯ ರದ್ದತಿ ಕುರಿತು ಕಾಂಗ್ರೆಸ್‌ ಪಕ್ಷ ಚಿಂತಿಸಲಿದೆ’ ಎಂದು ಹೇಳಿದ್ದರು.

ಬೆಂಗಳೂರು: ಭಾರತ ದೇಶದಲ್ಲಿ ಮೀಸಲಾತಿ ಬಗ್ಗೆ ಅಮೆರಿಕದಲ್ಲಿ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ನೀಡಿರುವ ಹೇಳಿಕೆ ವಿಚಾರಕ್ಕೆ ಸಂಬಂಧಿಸಿ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ಬಿಜೆಪಿ ನಾಯಕರು ಇಂದು ಶನಿವಾರ ದೂರು ನೀಡಿದ್ದಾರೆ.

ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್, ರಾಜಕುಮಾರ್ ಪಾಟೀಲ್, ಬಿಜೆಪಿ ಕಾನೂನು ಪ್ರಕೋಷ್ಠದ ಸಂಚಾಲಕ ವಸಂತಕುಮಾರ್​ ಸೇರಿ ಬಿಜೆಪಿ ನಾಯಕರು ಹೈಗ್ರೌಂಡ್ಸ್ ಠಾಣೆಗೆ ದೂರು ನೀಡಿದ್ದಾರೆ.

ಇತ್ತೀಚೆಗೆ ಅಮೆರಿಕ ಪ್ರವಾಸ ಕೈಗೊಂಡ ಸಮಯದಲ್ಲಿ ರಾಹುಲ್‌ ಗಾಂಧಿ ಅವರು, ‘ಭಾರತದಲ್ಲಿ ಸಮಾನತೆಯ ಸ್ಥಿತಿ ಮೂಡಿದ ನಂತರ ಮೀಸಲಾತಿ ವ್ಯವಸ್ಥೆಯ ರದ್ದತಿ ಕುರಿತು ಕಾಂಗ್ರೆಸ್‌ ಪಕ್ಷ ಚಿಂತಿಸಲಿದೆ’ ಎಂದು ಹೇಳಿದ್ದರು. ನಂತರದ ಮಾಧ್ಯಮ ಸಂವಾದದಲ್ಲಿ, ‘ನಾನು ಮೀಸಲಾತಿಗೆ ವಿರುದ್ಧವಾಗಿ ಇದ್ದೇನೆ ಎಂಬಂತೆ ನನ್ನ ಹೇಳಿಕೆಯನ್ನು ತಪ್ಪಾಗಿ ಬಿಂಬಿಸಲಾಗಿದೆ. ಮೀಸಲಾತಿ ಮಿತಿಯನ್ನು ನಾವು ಶೇ 50 ಮೀರಿ ವಿಸ್ತರಿಸಲಿದ್ದೇವೆ’ ಎಂದು ಸ್ಪಷ್ಟಪಡಿಸಿದ್ದರು.

ರಾಹುಲ್ ಗಾಂಧಿಯವರ ಈ ಹೇಳಿಕೆಗೆ ಬಿಜೆಪಿ ವಿರೋಧ ವ್ಯಕ್ತಪಡಿಸಿತ್ತು. ಸಂವಿಧಾನವನ್ನು ಗೌರವಿಸುವ ಯಾರೊಬ್ಬರೂ ರಾಹುಲ್‌ ಗಾಂಧಿ ಅವರ ನಡೆಯನ್ನು ಒಪ್ಪುವುದಿಲ್ಲ. ಸಾಂವಿಧಾನಿಕ ಹುದ್ದೆಯಲ್ಲಿರುವ ವ್ಯಕ್ತಿಯೊಬ್ಬರ ಇಂತಹ ನಿಲುವು ಅವರ ಸಂವಿಧಾನ ವಿರೋಧಿ ಮನಃಸ್ಥಿತಿ ತೋರಿಸುತ್ತದೆ ಎಂದು ಉಪ ರಾಷ್ಟ್ರಪತಿ ಜಗದೀಪ್‌ ಧನ್‌ಕರ್ ಅವರು ಸಹ ರಾಹುಲ್‌ ಗಾಂಧಿ ಅವರನ್ನು ಟೀಕಿಸಿದ್ದಾರೆ.

ರಾಹುಲ್ ಗಾಂಧಿ ಅವರ ನಾಲಗೆ ಕತ್ತರಿಸುವ ವ್ಯಕ್ತಿಗೆ 11 ಲಕ್ಷ ರೂಪಾಯಿ ನೀಡುವುದಾಗಿ ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್‌ ಶಿಂಧೆ ಬಣದ ಶಾಸಕ ಸಂಜಯ್‌ ಗಾಯಕ್‌ವಾಡ್‌ ಹೇಳಿದ್ದಾರೆ. ಇನ್ನು ಇತ್ತೀಚೆಗೆ ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ನೇತೃತ್ವದಲ್ಲಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

SCROLL FOR NEXT