ಸಿಎಂ ಸಿದ್ದರಾಮಯ್ಯ, ಪ್ರಧಾನಿ ಮೋದಿ ಸಾಂದರ್ಭಿಕ ಚಿತ್ರ 
ರಾಜಕೀಯ

ಹಿಂಡನ್ ಬರ್ಗ್ ವರದಿ, ಮಣಿಪುರ ಹಿಂಸಾಚಾರ ಕುರಿತು ಪ್ರಧಾನಿ ಮೋದಿ ಮೌನ ಏಕೆ: ಸಿದ್ದರಾಮಯ್ಯ ಪ್ರಶ್ನೆ

ರಾಹುಲ್ ಗಾಂಧಿ ಈ ವಿಷಯಗಳನ್ನು ಪ್ರಸ್ತಾಪಿಸಿದ್ದಾರೆ. ಅದರ ಬಗ್ಗೆ ಏಕೆ ಪ್ರಧಾನಿ ಮಾತನಾಡುವುದಿಲ್ಲ ಎಂದು ಸಿದ್ದರಾಮಯ್ಯ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ಮೈಸೂರು: ಹಿಂಡನ್ ಬರ್ಗ್ ವರದಿ ಹಾಗೂ ಮಣಿಪುರ ಹಿಂಸಾಚಾರ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಮೌನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಪ್ರಶ್ನಿಸಿದ್ದಾರೆ. ಹರಿಯಾಣದಲ್ಲಿ ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್ ಗುರಿಯಾಗಿಸಿಕೊಂಡು ತಮ್ಮ ವಿರುದ್ಧದ ಮುಡಾ ಹಗರಣ ಪ್ರಸ್ತಾಪಿಸಿದ್ದ ಪ್ರಧಾನಿಗೆ ಸಿದ್ದರಾಮಯ್ಯ ಪ್ರತಿಕ್ರಿಯಿಸಿದರು.

ಬಿಜೆಪಿಯಲ್ಲಿ ಅನೇಕ ಭ್ರಷ್ಟರಿದ್ದಾರೆ. ಪ್ರಧಾನಿ ಮೋದಿ ಮೊದಲು ತಮ್ಮ ಪಕ್ಷದೊಳಗಿನ ವಿಷಯಗಳನ್ನು ಸರಿಪಡಿಸಲಿ ಎಂದು ಹೇಳಿದ ಮುಖ್ಯಮಂತ್ರಿ, ನರೇಂದ್ರ ಮೋದಿ ಅವರು ಹಿಂಡನ್‌ಬರ್ಗ್ ವರದಿ ಬಗ್ಗೆ ಏಕೆ ಮಾತನಾಡುವುದಿಲ್ಲ? ಮಣಿಪುರಕ್ಕೆ ಯಾಕೆ ಭೇಟಿ ನೀಡುತ್ತಿಲ್ಲ ಎಂದು ಪ್ರಶ್ನಿಸಿದರು.

ರಾಹುಲ್ ಗಾಂಧಿ ಈ ವಿಷಯಗಳನ್ನು ಪ್ರಸ್ತಾಪಿಸಿದ್ದಾರೆ. ಅದರ ಬಗ್ಗೆ ಏಕೆ ಪ್ರಧಾನಿ ಮಾತನಾಡುವುದಿಲ್ಲ ಎಂದು ಸಿದ್ದರಾಮಯ್ಯ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ಬುಧವಾರ ಹರಿಯಾಣದ ಸೋನಿಪತ್‌ನಲ್ಲಿ ಚುನಾವಣಾ ರ್‍ಯಾಲಿಯನ್ನುದ್ದೇಶಿಸಿ ಮಾತನಾಡಿದ ಮೋದಿ, ಕಾಂಗ್ರೆಸ್ ಆಡಳಿತದ ಕರ್ನಾಟಕವನ್ನು ಉದಾಹರಣೆಯಾಗಿ ಉಲ್ಲೇಖಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಭೂ ಹಗರಣದ ಆರೋಪ ಎದುರಿಸುತ್ತಿದ್ದಾರೆ ಮತ್ತು ಹೈಕೋರ್ಟ್ ಕೂಡ ಅವರ ವಿರುದ್ಧದ ತನಿಖೆ ಸರಿಯಾಗಿದೆ ಎಂದು ಹೇಳಿದ್ದರು.

ಜೆಡಿಎಸ್ ನಾಯಕ ಹಾಗೂ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಆರೋಪಗಳ ಕುರಿತು ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಕುಮಾರಸ್ವಾಮಿ ಅವರು ಬರೀ ಸುಳ್ಳು ಹೇಳುತ್ತಾರೆ. ಅವರು ಹೇಳುವ ಎಲ್ಲದಕ್ಕೂ ನಾನು ಪ್ರತಿಕ್ರಿಯಿಸಲಾರೆ. ನಾನು ಪ್ರತಿಕ್ರಿಯಿಸುವುದಿಲ್ಲ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಹಲವು ಕುಟುಂಬಗಳ ಹೆಣ್ಮಕ್ಕಳ ಮರ್ಯಾದೆ ಕಳೆದ ಪುಣ್ಯಾತ್ಮ ಡಿಕೆಶಿ; ಪ್ರಜ್ವಲ್​​ ಕೇಸ್​ ಹಿಂದಿದ್ದವರಿಂದ ಮಾಜಿ ಸಿಎಂ ಸ್ಟಿಂಗ್​​ ಆಪರೇಷನ್: HDK ಹೊಸ ಬಾಂಬ್

ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಶನ್: ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ಪೆನ್ ಡ್ರೈವ್ ಸಲ್ಲಿಕೆ; ನ್ಯಾಯಾಂಗ ತನಿಖೆಗೆ ಆಗ್ರಹ!

ಬೆಂಗಳೂರಿನಲ್ಲಿ SIR ಪ್ರತಿಭಟನೆ ವೇಳೆ ಪೊಲೀಸ್ ಕ್ರಮ: ಮರು ಪರಿಶೀಲನೆಗೆ ಪ್ರಿಯಾಂಕ್ ಖರ್ಗೆ ಆದೇಶ!

ಪುಣೆ ಟೆಕ್ಕಿ ಆತ್ಮಹತ್ಯೆ: ಡೆತ್‌ನೋಟ್‌ ಪತ್ತೆ; ಸಂಬಳ, ತವರು ಮನೆಯ ಫ್ಲಾಟ್ ವರ್ಗಾಯಿಸುವಂತೆ ಅತ್ತೆ-ಮಾವ ಒತ್ತಡ!

Jantar Mantar ಬಳಿ ಭಾರೀ ಹೈಡ್ರಾಮಾ: ಬ್ಯಾರಿಕೇಡ್ ದಾಟಿದ CJP ನಾಯಕರು ಪೊಲೀಸ್ ವಶಕ್ಕೆ; ಪ್ರತಿರೋಧ ನಿಷೇಧ ಸಾಧ್ಯವಿಲ್ಲ-ಕೇಂದ್ರದ ವಿರುದ್ಧ ದೀಪ್ಕೆ ಆಕ್ರೋಶ